Friday, December 5, 2025
Friday, December 5, 2025

ಗ್ಯಾರಂಟಿ ಯೋಜನೆಗಳಿಂದ ಜನಸಾಮಾನ್ಯರಿಗೆ ಆರ್ಥಿಕ ಸ್ವಾವಲಂಬನೆ- ಹೆಚ್.ಎಂ.ಮಧು

Date:

Guarantee Schemes ಗ್ಯಾರಂಟಿ ಯೋಜನೆಗಳು ಜನ ಸಾಮಾನ್ಯರ ಬದುಕಿನಲ್ಲಿ ಮಂದಹಾಸ ಮೂಡಿಸುವುದರ ಜೊತೆಗೆ ಆರ್ಥಿಕ ಸ್ವಾವಲಂಬನೆಯನ್ನು ನೀಡಿದೆ ಎಂದು ತಾಲ್ಲೂಕು ಗ್ಯಾರಂಟಿ ಯೋಜನೆಯ ಅಧ್ಯಕ್ಷರಾದ ಮಧು ಹೆಚ್.ಎಂ. ತಿಳಿಸಿದರು.
ಶನಿವಾರ ನಗರದ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು.
ಐದು ಗ್ಯಾರಂಟಿ ಯೋಜನೆಗಳು ಜಿಲ್ಲೆಯಲ್ಲಿ ಯಶಸ್ವಿಯಾಗಿ ಜಾರಿಯಾಗಿದ್ದು ಬಡವರ ಆಶಾಕಿರಣವಾಗಿರುವ ಅನ್ನಭಾಗ್ಯ ಯೋಜನೆಯು ಆಸರೆಯಾಗಿದೆ. ಹಾಗೂ ಹಸಿವು ಮುಕ್ತ ಭಾರತ ಮತ್ತು “ಸುಸ್ಥಿರ ಅಭಿವೃದ್ಧಿ ಗುರಿ-2030” ತಲುಪಲು ಸಹಕಾರಿಯಾಗಿದೆ ಎಂದರು.
ಗ್ಯಾರಂಟಿ ಯೋಜನೆಗಳಲ್ಲಿ ಬಹಳ ಪ್ರಸಿದ್ದಿಯಾಗಿರುವ ಗೃಹಲಕ್ಷಿ ಯೋಜನೆಯ ಹಣವು 2025 ರ ಜೂನ್ ಮಾಹೆಯವರೆಗೆ ಬಿಡುಗಡೆಯಾಗಿರುತ್ತದೆ. 2044 ಐಟಿ/ಜಿಎಸ್‌ಟಿ ಫಲಾನುಭವಿಗಳು ಇದ್ದು, 298 ಮರಣ ಹೊಂದಿರುವ ಫಲಾನುಭವಿಗಳನ್ನು ಗುರುತಿಸಲಾಗಿದೆ. ಎನ್‌ಪಿಸಿಐ ಸಮಸ್ಯೆಯಿರುವ 90 ಫಲಾನುಭವಿಗಳಿಗೆ ಪರಿಹಾರ ಒದಗಿಸುವ ಕೆಲಸ ಮಾಡಲಾಗುತ್ತಿದೆ ಎಂದು ಶಿವಮೊಗ್ಗ ಸಿಡಿಪಿಓ ಗಂಗೂಬಾಯಿ ತಿಳಿಸಿದರು.
ರಾಜ್ಯ ಸರ್ಕಾರವು ಗೃಹಜ್ಯೋತಿ ಯೋಜನೆಯಡಿ 200 ಯುನಿಟ್ ವರೆಗೆ ವಿದ್ಯುತ್ ಬಳಕೆಯನ್ನು ಮಾಡುತ್ತಿರುವ ಗ್ರಾಹಕರುಗಳಿಗೆ ಯಾವುದೇ ಶುಲ್ಕವಿಲ್ಲದೆ ಉಚಿತ ವಿದ್ಯುತ್ ಸೌಲಭ್ಯವನ್ನು ಒದಗಿಸುತ್ತಿದ್ದು ಇದರಿಂದ ಜನ ಸಾಮಾನ್ಯರಿಗೆ ಬಹಳ ಅನುಕೂಲವಾಗುತ್ತಿದೆ. ಆರ್ಥಿಕವಾಗಿ ಅಭಿವೃದ್ಧಿಯಾಗಲು ಸಹಾಯವಾಗುತ್ತಿದೆ.
ಯುವನಿಧಿ ಯೋಜನೆಯಡಿ ಜಿಲ್ಲೆಯಲ್ಲಿ ಜೂನ್ 2025 ರವರೆಗೆ ರೂ.1,95,45,000 ಹಣ ಫಲಾನುಭವಿಗಳ ಖಾತೆಗೆ ಜಮೆಯಾಗಿರುತ್ತದೆ. ಶಿವಮೊಗ್ಗ ತಾಲ್ಲೂಕಿನಲ್ಲಿ ಜೂನ್ ಮಾಹೆಯ ವರೆಗೆ ರೂ.59,71,500 ಹಣ ಜಮೆಯಾಗಿರುತ್ತದೆ. ಯುವನಿಧಿ ಯೋಜನೆಯಡಿ ಈ ವರ್ಷ ಪದವಿ ಹಾಗೂ ಡಿಪ್ಲೋಮಾ ತೇರ್ಗಡೆಯಾಗಿರುವ ವಿದ್ಯಾರ್ಥಿಗಳನ್ನು ನೋಂದಣಿ ಮಾಡಿಸುವ ಕೆಲಸವನ್ನು ಮಾಡಬೇಕು ಎಂದರು.
Guarantee Schemes ಶಕ್ತಿ ಯೋಜನೆಯಡಿ ಶಿವಮೊಗ್ಗ ತಾಲ್ಲೂಕಿನಲ್ಲಿ 20760257 ಮಹಿಳೆಯರು ಪ್ರಯಾಣಿಸಿದ್ದು, ಸಾರಿಗೆ ಇಲಾಖೆಗೆ ಶೇಕಡ 37 ರಷ್ಟು ಅಂದರೆ ರೂ.732880651 ಆದಾಯ ಗಳಿಕೆಯಾಗಿದೆ.
ಕಾರ್ಯಕ್ರಮದಲ್ಲಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ತಾರಾ ಹಾಗೂ ತಾಲ್ಲೂಕು ಗ್ಯಾರಂಟಿ ಯೋಜನೆ ಸಮಿತಿಯ ಸದಸ್ಯರುಗಳು ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...