Hindu Mahasabha Ganapati ದಿನಾಂಕ: 06-09-2025 ರಂದು ನಗರದಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ ಇರುವ ಹಿನ್ನೆಲೆ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ವಾಹನಗಳ ಸಂಚಾರ ನಿಷೇಧ, ನಿಲುಗಡೆ ಹಾಗೂ ವಾಹನಗಳಿಗೆ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಕೆಳಕಂಡAತೆ ತಾತ್ಕಾಲಿಕ ಅಧಿಸೂಚನೆ ಹೊರಡಿಸಿದ್ದಾರೆ.
ಸಾರ್ವಜನಿಕ ಹಿತದೃಷ್ಟಿಯಿಂದ ಹಾಗೂ ಸಂಚಾರ ವ್ಯವಸ್ಥೆ ಸುಗಮಗೊಳಿಸುವ ನಿಟ್ಟಿನಲ್ಲಿ ಮೋಟಾರು ವಾಹನ ಕಾಯ್ದೆ 1988 ಕಲಂ 115 & 117 ರ ಅನ್ವಯ ಅಂದು ಬೆಳಿಗ್ಗೆ 6 ರಿಂದ ರಾತ್ರಿ 12 ಗಂಟೆವರೆಗೆ ವಾಹನ ಸಂಚಾರ ನಿಷೇಧ, ನಿಲುಗಡೆ ಮತ್ತು ಮಾರ್ಗ ಬದಲಾವಣೆ ಮಾಡಲಾಗಿದೆ.
ಸೆ.06 ರಂದು ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಯು ಭೀಮೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ-ಎನ್ ಪಿ ಎಂ ಮುಖ್ಯ ರಸ್ತೆ-ರಾಮಣ್ಣ ಶ್ರೇಷ್ಠಿ ಪಾರ್ಕ್-ಗಾಂಧಿ ಬಜಾರ್ ಮುಖ್ಯ ರಸ್ತೆ, ಎಸ್ ಎನ್ ಸರ್ಕಲ್ -ಎ.ಎ.ಸರ್ಕಲ್- ನೆಹರು ರಸ್ತೆ- ಗೋಪಿ ಸರ್ಕಲ್- ದುರ್ಗಿಗುಡಿ ಮಾರ್ಗವಾಗಿ ಮಹಾವೀರ ಸರ್ಕಲ್ – ಡಿವಿಎಸ್ ಸರ್ಕಲ್ –ಕಾನ್ವೆಂಟ್ ರಸ್ತೆ – ಕೋಟೆ ರಸ್ತೆ ಮಾರ್ಗವಾಗಿ ಭೀಮೇಶ್ವರ ದೇವಸ್ಥಾನದ ಹತ್ತಿರ ತುಂಗಾ ನದಿಯಲ್ಲಿ ವಿಸರ್ಜನೆ ಮಾಡಲಾಗುವುದು. ಮೆರವಣಿಗೆ ಮಾರ್ಗದಲ್ಲಿ ಮತ್ತು ಮಾರ್ಗದ ಸುತ್ತಮುತ್ತ 100 ಮೀಟರ್ ಅಂತರದಲ್ಲಿ ಎಲ್ಲಾ ವಾಹನಗಳ ಸಂಚಾರ ಹಾಗೂ ನಿಲುಗಡೆಯನ್ನು ನಿಷೇಧಿಸಲಾಗಿದೆ.
- Hindu Mahasabha Ganapati ಬೆಂಗಳೂರು ಭದ್ರಾವತಿ, ಎನ್ ಆರ್ ಪುರ ಕಡೆಯಿಂದ ಬರುವ ಎಲ್ಲಾ ಭಾರೀ ವಾಹನ ಮತ್ತು ಎಲ್ಲಾ ಬಸ್‌ಗಳು/ಸಿಟಿ ಬಸ್‌ಗಳು ಹಾಗೂ ಕಾರು ವಾಹನಗಳು ಎಂಆರ್‌ಎಸ್ ಸರ್ಕಲ್‌ನಿಂದ ಬೈಪಾಸ್ ರಸ್ತೆ ಮುಖಾಂತರವಾಗಿ ಹೋಗುವುದು.
- ಚಿತ್ರದುರ್ಗ ಹೊಳೆಹೊನ್ನೂರಿನಿಂದ ಬರುವ ಮತ್ತು ಹೋಗುವ ಎಲ್ಲಾ ಭಾರೀ ವಾಹನ ಮತ್ತು ಬಸ್ ಗಳು ಎಂ.ಆರ್.ಎಸ್ ಸರ್ಕಲ್ ಮಾರ್ಗವಾಗಿ ಬೈಪಾಸ್ ರಸ್ತೆ ಮುಖಾಂತರವಾಗಿ ಹೋಗುವುದು.
- ಹೊನ್ನಾಳಿ ಹರಿಹರ, ದಾವಣಗೆರೆಯಿಂದ ಬರುವ ಮತ್ತು ಹೋಗುವ ಎಲ್ಲಾ ಭಾರೀ ವಾಹನ ಮತ್ತು ಬಸ್‌ಗಳು ಸಂಗೊಳ್ಳಿರಾಯಣ್ಣ ಸರ್ಕಲ್, ಶಂಕರಮಠ ಸರ್ಕಲ್ ಹೊಳೆಹೊನ್ನೂರು ಸರ್ಕಲ್, ವಿದ್ಯಾನಗರದ ಎಂ.ಆರ್.ಎಸ್. ಸರ್ಕಲ್ ಮಾರ್ಗವಾಗಿ ಬೈಪಾಸ್ ರಸ್ತೆ ಮುಖಾಂತರ ಹೋಗುವುದು.
- ಕೆಎಸ್‌ಆರ್‌ಟಿಸಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಹೊನ್ನಾಳಿ, ಶಿಕಾರಿಪುರ, ಸೊರಬ, ಹರಿಹರ, ದಾವಣಗೆರೆ ಹೋಗುವ ಎಲ್ಲಾ ಬಸ್‌ಗಳು ಮತ್ತು ಭಾರೀ ಸರಕು ವಾಹನಗಳು ಸಾಗರ ರಸ್ತೆ ಮುಖಾಂತರವಾಗಿ ಹೆಲಿಪ್ಯಾಡ್ ಸರ್ಕಲ್-ಆಲ್ಕೋಳ ಸರ್ಕಲ್-ಪೊಲೀಸ್ ಚೌಕಿ-ರಾಜ್ ಕುಮಾರ್ ಸರ್ಕಲ್-ಬೊಮ್ಮನಕಟ್ಟೆ-ಸವಳಂಗ ರಸ್ತೆ ಮುಖಾಂತರ ಹೋಗುವುದು.
- ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಬೆಂಗಳೂರು, ಭದ್ರಾವತಿ ಕಡೆಗೆ ಹೋಗುವ ಎಲ್ಲಾ ವಾಹನಗಳು ಬೈಪಾಸ್ ರಸ್ತೆ ಎಂ.ಆರ್.ಎಸ್ ಸರ್ಕಲ್ ಮುಖಾಂತರ ಹೋಗುವುದು
- ಶಿಕಾರಿಪುರ ಸೊರಬ ಆನವಟ್ಟಿ ಕಡೆಯಿಂದ ಶಿವಮೊಗ್ಗಕ್ಕೆ ಬರುವ ಮತ್ತು ಹೊರ ಹೋಗುವ ಎಲ್ಲಾ ಬಸ್‌ಗಳು ಮತ್ತು ಭಾರೀ ವಾಹನಗಳು ಉಷಾ ನರ್ಸಿಂಗ್ ಹೋಂ ಸರ್ಕಲ್ ಲಕ್ಷಿö್ಮÃ ಟಾಕೀಸ್ ಸರ್ಕಲ್-ಪೊಲೀಸ್ ಚೌಕಿ- ಆಲ್ಕೋಳ ಸರ್ಕಲ್ ಮಾರ್ಗವಾಗಿ ಸಾಗರ ರಸ್ತೆಯಲ್ಲಿ ಸಂಚರಿಸುವುದು.
- ಕೋಟೆ ರಸ್ತೆ ಮತ್ತು ಓಲ್ಡ್ ಬಾರ್‌ಲೈನ್ ರಸ್ತೆ ಎಲ್ಲಾ ವಾಹನಗಳ ಸಂಚಾರ ನಿಷೇಧ.
ಈ ಎಲ್ಲಾ ಮಾರ್ಗ ಬದಲಾವಣೆಗಳು ಪೊಲೀಸ್ ವಾಹನಗಳು ಅತಿಗಣ್ಯ ವ್ಯಕ್ತಿಗಳ ವಾಹನಗಳು ಆಂಬುಲೆನ್ಸ್ ಹಾಗೂ ಮೂಲಭೂತ ಸೌಕರ್ಯ ಒದಗಿಸುವ ವಾಹನಗಳನ್ನು ಅನುಕೂಲಕ್ಕೆ ತಕ್ಕಂತೆ ಹೊರತುಪಡಿಸಿರುತ್ತದೆ ಎಂದು ಅವರು ತಿಳಿಸಿದ್ದಾರೆ.
