Shri Maharishi Valmiki Jayanti 2025-26ನೇ ಸಾಲಿಗೆ ಆಚರಿಸುವ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಪ್ರಯುಕ್ತ ಪರಿಶಿಷ್ಟ ವರ್ಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಗೆ ಶ್ರೀ ಮಹರ್ಷಿ ವಾಲ್ಮೀಕಿ ಸ್ಮರಣಾರ್ಥ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದ್ದು, ಅರ್ಹ ವ್ಯಕ್ತಿಗಳಿಂದ ಅರ್ಜಿ ಆಹ್ವಾನಿಸಿದೆ.
Shri Maharishi Valmiki Jayanti ಆಸಕ್ತರು ನಿಗಧಿತ ನಮೂನೆ ಅರ್ಜಿಯನ್ನು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ಶ್ರೀ ಮಹರ್ಷಿ ವಾಲ್ಮೀಕಿ ಭವನ, ಕಂಟ್ರಿ ಕ್ಲಬ್ ರಸ್ತೆ, ವಿದ್ಯಾನಗರ, ಶಿವಮೊಗ್ಗ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸೆ.10 ರೊಳಗಾಗಿ ಸಲ್ಲಿಸುವಂತೆ ಜಿ.ಪ.ವ. ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
