Department of School Education and Literacy ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಉಪ ನಿರ್ದೇಶಕರ ಕಚೇರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಶಾಲಾ ಶಿಕ್ಷಣ ಇಲಾಖೆ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಸೆ.5 ರ ಬೆಳಿಗ್ಗೆ 10 ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಶಿಕ್ಷಕರ ದಿನಾಚರಣೆ-2025 ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಲಿದ್ದು, ಶಾಸಕರಾದ ಎಸ್.ಎನ್. ಚನ್ನಬಸಪ್ಪ ಅಧ್ಯಕ್ಷತೆ ವಹಿಸುವರು.
ವಿಶೇಷ ಆಹ್ವಾನಿತರಾಗಿ ಭದ್ರಾವತಿ ಶಾಸಕರು ಹಾಗೂ
ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಬಿ.ಕೆ.ಸಂಗಮೇಶ್ವರ ಹಾಗೂ ಸಾಗರದ ಶಾಸಕರು ಹಾಗೂ ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮ ನಿಯಮಿತ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಅವರು ಆಗಮಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭೆಯ ಹಾಗೂ ವಿಧಾನ ಪರಿಷತ್ ಶಾಸಕರುಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ವಿವಿಧ ಸಂಘಗಳ ಅಧ್ಯಕ್ಷರುಗಳು, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಒ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಮಹಾನಗರಪಾಲಿಕೆ ಆಯುಕ್ತರು ಪಾಲ್ಗೊಳ್ಳುವವರು.
Department of School Education and Literacy ಚಿಂತಕರು ಹಾಗೂ ವಾಗ್ಮಿಗಳಾದ ವೈ.ವಿ.ಗುಂಡೂರಾವ್ ವಿಶೇಷ ಉಪನ್ಯಾಸ ನೀಡುವರು.
