Sunday, March 29, 2026
Sunday, March 29, 2026

Madhu Bangarappa ದಸರಾ ಕ್ರೀಡಾಕೂಟದಲ್ಲಿ ವಯಸ್ಸಿನ ನಿರ್ಬಂಧವಿಲ್ಲ. ಎಲ್ಲರೂ ಭಾಗವಹಿಸಿ- ಮಧು ಬಂಗಾರಪ್ಪ

Date:

Madhu Bangarappa ಕ್ರೀಡಾ ಕ್ಷೇತ್ರ ಸೇರಿದಂತೆ ಯಾವುದೇ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಎಂದಿಗೂ ವಿಶೇಷ ಗೌರವವಿದ್ದು, ಇವರು ನಮ್ಮೆಲ್ಲರಿಗೆ ಸ್ಪೂರ್ತಿದಾಯಕರಾಗಿರುತ್ತಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ನುಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಸೆ.02 ಮತ್ತು 03 ರಂದು ನೆಹರು ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿರುವ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಣ ಮಾತ್ರವಲ್ಲದೇ ಕ್ರೀಡೆ ಮತ್ತು ಇತರೆ ಸಾಂಸ್ಕೃತಿಕ ಚಟುವಟಿಕೆಗಳೂ ಮುಖ್ಯವಾಗಿದ್ದು ವಿದ್ಯಾರ್ಥಿಗಳಲ್ಲಿ ಮಾನವೀಯ ಮೌಲ್ಯ ಹೆಚ್ಚಿಸುವಲ್ಲಿ ಬಹಳ ಪ್ರಮುಖ ಪಾತ್ರ ವಹಿಸುತ್ತವೆ.
ದಸರಾ ಕ್ರೀಡಾಕೂಟದಲ್ಲಿ ವಯಸ್ಸಿನ ಮಿತಿಯಿಲ್ಲದ ಕಾರಣ ಎಲ್ಲ ವಯೋಮಾನದವರು ಕ್ರೀಡೆಯಲ್ಲಿ ಭಾಗವಹಿಸಬಹುದು.

ಮಕ್ಕಳಿಗೆ ಸ್ಪೂರ್ತಿಯಾಗುವಂತೆ ವಯಸ್ಸಾದವರು ಸ್ಪರ್ಧಿಸುತ್ತಿರುವುದು ಸಂತಸದ ವಿಷಯ. ದಸರಾ ಕ್ರೀಡಾಕೂಟದ ಕುರಿತು ಇನ್ನೂ ಹೆಚ್ಚಿನ ಪ್ರಚಾರ ನೀಡಬೇಕು. ಪ್ರಸ್ತುತ ಜಿಲ್ಲೆಯಲ್ಲಿ 5 ಸಾವಿರ ಕ್ರೀಡಾಪಟುಗಳು ಭಾಗವಹಿಸುತ್ತಿದ್ದು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕ್ರೀಡಾಪಟುಗಳು ಪಾಲ್ಗೊಳ್ಳಬೇಕು. ಅವರ ಹವ್ಯಾಸಗಳು ನಮಗೆ ಮಾರ್ಗದರ್ಶನ ಆಗಬೇಕು ಎಂದ ಅವರು ಬರ್ಲಿನ್ ದೇಶದಲ್ಲಿ ಅಂತರಾಷ್ಟ್ರೀಯ ಬಾಲಕರ ಜ್ಯೂನಿಯರ್ ಹಾಕಿ ಪಂದ್ಯಾವಳಿಯಲ್ಲಿ ಪಾಲ್ಗೊಂಡ ಕ್ರೀಡಾಪಟು ಸುನೀಲ್ ಬಗ್ಗೆ ಹೆಮ್ಮೆ ಎನ್ನಿಸುತ್ತಿದೆ.

ಅವರ ಸಾಧನೆಯಿಂದಾಗಿ ಅವರನ್ನು ಜನರು ಗುರುತಿಸುತ್ತಿದ್ದಾರೆ. ಅವರು ಇನ್ನೂ ಉನ್ನತ ಮಟ್ಟಕ್ಕೆ ಬೆಳೆಯಲಿ ಎಂದು ಹಾರೈಸಿದರು.

ವಿಧಾನ ಪರಿಷತ್ ಶಾಸಕರಾದ ಡಾ.ಧನಂಜಯ ಸರ್ಜಿ ಮಾತನಾಡಿ ಇತ್ತೀಚಿನ ದಿನಗಳಲ್ಲಿ ಜನರು ವೈದ್ಯರಲ್ಲಿ ಹಸಿವು, ಜೀರ್ಣ, ನಿದ್ರೆ, ಸೇರಿದಂತೆ ಎಲ್ಲದಕ್ಕೂ ಮಾತ್ರೆ ಬೇಕೆಂದು ಕೇಳುತ್ತಾರೆ. ಈ ಎಲ್ಲ ಸಮಸ್ಯೆಗಳಿಗೆ ಕಾರಣ ಜೀವನಶೈಲಿಯಾಗಿದ್ದು, ಬೇಗ ಏಳುವುದು, ನಗುವುದು, ಮನೆಯವರ ಜೊತೆ ಒಡನಾಟ, ಉತ್ತಮ ಊಟ, ನಿದ್ರೆ , ಆಟ ಕೂಡ ದೊಡ್ಡ ಔಷಧ ಎಂದು ಎಲ್ಲರೂ ತಿಳಿದುಕೊಳ್ಳಬೇಕು.

ವೈದ್ಯರಿಂದ ದೂರ ಇರಲು ಕ್ರೀಡೆಗಳಲ್ಲಿ ಭಾಗವಹಿಸಬೇಕು. ನಡೆಯಬೇಕು. ಒಂದು ಗಂಟೆ ಆಟ ಆಡಿದರೆ ಸುಮಾರು 200 ರಿಂದ 500 ಕ್ಯಾಲರಿಯನ್ನು ಕಡಿಮೆ ಮಾಡಿಕೊಳ್ಳಬಹುದು. ಹಾಗೂ ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಜ್ಞಾಪಕ ಶಕ್ತಿ ಹೆಚ್ಚುತ್ತದೆ. ಆರೋಗ್ಯ ವೃದ್ದಿಯಾಗುತ್ತದೆ. ಉತ್ತಮ ಅಂಕವನ್ನೂ ಗಳಿಸಬಹುದು, ಜೊತೆಗೆ ಟಿವಿ, ಮೊಬೈಲ್‌ನಿಂದ ದೂರ ಇರಲು ಸಾಧ್ಯವಾಗುತ್ತದೆ.

ಕ್ರೀಡೆ ದೈಹಿಕ, ಮಾನಸಿಕ ಮತ್ತು ಭಾವನಾತ್ಮಕವಾಗಿ ಸದೃಢರನ್ನಾಗಿಸುತ್ತದೆ. ಆದ್ದರಿಂದ ಎಲ್ಲರೂ ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕೆಂದರು.

ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು ಮಾತನಾಡಿ ದಸರಾ ಕ್ರೀಡಾಕೂಟಕ್ಕೆ ವಯಸ್ಸಿನ ಮಿತಿ ಇಲ್ಲ. ನಾವೆಲ್ಲ ಒಂದೇ ಎಂಬ ಭಾವನೆ ಬೆಳೆಸುವ ಉದ್ದೇಶದಿಂದ ಇಂತಹ ಕ್ರೀಡಾಕೂಟವನ್ನು ನಮ್ಮ ಹಿರಿಯರು ಆರಂಭಿಸಿದ್ದಾರೆ. ಕ್ರೀಡೆಯಿಂದ ನಮ್ಮ ದೇಹದ ಅಂಗಗಳು ಚುರುಕಾಗಿ ಆರೋಗ್ಯಯುತವಾಗಿರಲು ಸಾಧ್ಯವಾಗುತ್ತದೆ. ದಸರಾ ಕ್ರೀಡಾ ಸಮಿತಿಯವರು ಮುಂದಿನ ದಿನಗಳಲ್ಲಿ ನಶಿಸಿ ಹೋಗುತ್ತಿರುವ ಗ್ರಾಮೀಣ ಪಂದ್ಯಗಳನ್ನು ಸಹ ಅಳವಡಿಸಿಕೊಳ್ಳಬಹುದೆಂದು ಸಲಹೆ ನೀಡಿದರು.

ಎಸ್‌ಸಿ ಎಸ್‌ಟಿ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಮಾತನಾಡಿ, ನಮ್ಮನ್ನೆಲ್ಲ ಆರೋಗ್ಯವಂತರನ್ನಾಗಿ, ಯುವಕರನ್ನಾಗಿ ಇಡುವ ಶಕ್ತಿ ಕ್ರೀಡೆಗೆ ಇದೆ. ಪ್ರಸ್ತುತ ಮಕ್ಕಳನ್ನು ನಾವು ಮೊಬೈಲ್‌ನಿಂದ ದೂರ ಇಡಬೇಕು. ನಾವು ಹಿಂದೆ ಆಡುತ್ತಿದ್ದ ಆಟಗಳಲ್ಲಿ ಈಗಿನ ಮಕ್ಕಳನ್ನು ತೊಡಗಿಸುವ ಪ್ರಯತ್ನ ಮಾಡಬೇಕು. ಹಾಗೂ ಅವರಲ್ಲಿ ಸಕಾರಾತ್ಮಕ ಚಿಂತನೆಗಳನ್ನು ತುಂಬಬೇಕು. ಕ್ರೀಡೆಗಳು ಕೇವಲ ಆಟಗಳಲ್ಲ, ಅದೊಂದು ಭಾವೈಕ್ಯತೆ ಮತ್ತು ದೇಶಪ್ರೇಮದ ಪ್ರತೀಕವಾಗಿದೆ ಎಂದರು.

ಶಿವಮೊಗ್ಗ ನಗರ ಕ್ಷೇತ್ರದ ಶಾಸಕರಾದ ಎಸ್.ಎನ್.ಚನ್ನಬಸಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಾಮೀಣ ಪ್ರತಿಭೆಗಳಿಗಾಗಿಯೇ ಆರಂಭಿಸಿದ್ದು ಖೇಲೋ ಇಂಡಿಯಾ. ತಂಡಕ್ಕಾಗಿ ಆಡುವ ಮನೋಭಾವ ಬೆಳಿಸಿಕೊಂಡಾಗ ಯಶಸ್ಸು ಸಾಧ್ಯವಾಗುತ್ತದೆ. ಸೋಲೇ ಗೆಲುವಿನ ಸೋಪಾನ ಎಂಬ ಮಾತಿನಂತೆ ಆಡುತ್ತಾ ಆಡುತ್ತಾ ಬೆಳೆಯಬೇಕು. ಹಳೆಯ, ಗ್ರಾಮೀಣ ಕ್ರೀಡೆಗಳು, ಆಟಗಳು ಈಗಿನ ಮಕ್ಕಳಿಗೆ ಗೊತ್ತಿಲ್ಲ. ಈ ಆಟಗಳ ನಾಶಕ್ಕೆ ಕಾರಣ ನಾವೇ ಆಗಿದ್ದು, ಅವುಗಳ ಪರಿಚಯ ಅವರಿಗೆ ಮಾಡಿಸಿ, ಆಡಲು ಪ್ರೋತ್ಸಾಹಿಸಬೇಕು. ಕ್ರೀಡೆಗಳನ್ನು ಬೆಳೆಸಲು ಕ್ರೀಡಾ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.

Madhu Bangarappa ಸೊರಬ ತಾಲ್ಲೂಕಿನ ತಲ್ಲೂರು ಗ್ರಾಮದ ಹಾಕಿ ಕ್ರೀಡಾಪಟು ಸುನೀಲ್ ಬರ್ಲಿನ್‌ನಲ್ಲಿ ಇತ್ತೀಚೆಗೆ ನಡೆದ ಅಂತಾರಾಷ್ಟ್ರೀಯ ಬಾಲಕರ ಜ್ಯೂನಿಯರ್ ಪಂದ್ಯಾವಳಿಯಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿ ಕೀರ್ತಿ ತಂದಿರುವ ಹಿನ್ನೆಲೆ ಅವರನ್ನು ಈ ಸಂದರ್ಭದಲ್ಲಿ ಗಣ್ಯರು ಸನ್ಮಾನಿಸಿ, ಅಭಿನಂದಿಸಿದರು
ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೇಖ್ಯಾನಾಯ್ಕ, ಕ್ರೀಡಾಪಟುಗಳು, ಇಲಾಖಾ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kote SeethaRamanjaneya Temple ವೈಭವದಿಂದ ನಡೆದ ಶ್ರೀಆಂಜನೇಯಸ್ವಾಮಿ ರಥೋತ್ಸವ

Kote SeethaRamanjaneya Temple ಪುರಾತನವಾದ ಶ್ರೀ ಆಂಜನೇಯ ಸ್ವಾಮಿ ಸನ್ನಿಧಿಯಲ್ಲಿ ಪ್ರತಿವರ್ಷದಂತೆ...

Department of Kannada and Culture ಶ್ರೀಅಗ್ನಿಬನ್ನಿರಾಯಸ್ವಾಮಿಯವರ ಇತಿಹಾಸವನ್ನ ನಾವೆಲ್ಲಾ ತಿಳಿದುಕೊಳ್ಳಬೇಕು- ಆನಂದ್.

Department of Kannada and Culture ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು...

Rotary Club Shimoga ಚಿನ್ನ,ಬೆಳ್ಳಿ ಧಾರಣೆ ವ್ಯತ್ಯಾಸಕ್ಕೆ ಜಾಗತಿಕ ಸಮಸ್ಯೆಗಳೇ ಕಾರಣ- ಸೆಂಥಿಲ್ ವೆಲನ್.

Rotary Club Shimoga ಚಿನ್ನ ಮತ್ತು ಬೆಳ್ಳಿ ಕಷ್ಟಕಾಲದಲ್ಲಿ ಅಪತ್ಬಾಂದವ ರೀತಿಯಲ್ಲಿ ವರ್ತಿಸುತ್ತದೆ....

S. N. Channabasappa ಮಾದಕ ದ್ಯವ್ಯ ವ್ಯಸನ ವಿರೋಧಿ ಕ್ರಮಗಳಿಗೆ ವಿಶೇಷ ಕಾರ್ಯಪಡೆ ರಚನೆ ಮಾಡಿ- ಎಸ್.ಎನ್.ಚನ್ನಬಸಪ್ಪ.

S. N. Channabasappa ರಾಜ್ಯದಲ್ಲಿ ಹೆಚ್ಚುತ್ತಿರುವ ಅಪರಾಧ ಕೃತ್ಯಗಳು ಮತ್ತು ಮಾದಕ...