Friday, December 5, 2025
Friday, December 5, 2025

CM Siddaramaiah ಗಾಂಧಿ ಭಾರತ ಶತಮಾನೋತ್ಸವ ಸಮಾರೋಪ. ರಾಷ್ಟ್ರೀಯ ವಿಚಾರ ಸಂಕಿರಣ- ಸಿದ್ಧರಾಮಯ್ಯ.

Date:

CM Siddaramaiah ʻಗಾಂಧಿ ಭಾರತ ಶತಮಾನೋತ್ಸವʼ ಸಮಿತಿ ಸಭೆ ನಡೆಸಿ, ಕಾರ್ಯಕ್ರಮಗಳ ಆಯೋಜನೆ ಕುರಿತು ಒಂದಷ್ಟು ಸಲಹೆ ಸೂಚನೆಗಳನ್ನು ನೀಡಿದೆ.
ಈ ಸಭೆಯ ಮುಖ್ಯಾಂಶಗಳು ಹೀಗಿವೆ;

  • ಗಾಂಧಿ ಭಾರತ ಶತಮಾನೋತ್ಸವ ಅಂಗವಾಗಿ ಕಳೆದ ಡಿಸೆಂಬರ್ 26 ರಂದು ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗಿದ್ದು, ಡಿಸೆಂಬರ್ 26, 2025 ರಂದು ಗಾಂಧಿ ಭಾರತ ಶತಮಾನೋತ್ಸವ ಕಾರ್ಯಕ್ರಮ ಸಮಾಪನೆಗೊಳ್ಳಲಿದೆ. ಈ ಅವಧಿಯಲ್ಲಿ ನಿರಂತರ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು.
  • ಮಹಾತ್ಮ ಗಾಂಧೀಜಿ ಅವರ ಗ್ರಾಮ ಸ್ವರಾಜ್ ಪರಿಕಲ್ಪನೆಯಡಿ ಮಹಾ ಪಂಚಾಯತ್ ಸಮ್ಮೇಳನವನ್ನು ನವೆಂಬರ್ 14ರಂದು ಆಯೋಜಿಸಲಾಗುವುದು. ಈ ಬೃಹತ್ ಸಮ್ಮೇಳನದಲ್ಲಿ ಭಾಗವಹಿಸಲು ಗ್ರಾಮ ಪಂಚಾಯತ್‌ಗಳ ಮಾಜಿ ಹಾಗೂ ಹಾಲಿ ಸದಸ್ಯರನ್ನು ಆಹ್ವಾನಿಸಬೇಕು.
  • ಡಿಸೆಂಬರ್ ತಿಂಗಳಲ್ಲಿ ಪಂಚಾಯತ್ ರಾಜ್ ಕಾಯ್ದೆ ಮತ್ತು ಗ್ರಾಮ ಸ್ವರಾಜ್ ಕುರಿತಾಗಿ ಎರಡು ದಿನಗಳ ರಾಷ್ಟ್ರೀಯ ಮಟ್ಟದ ವಿಚಾರ ಸಂಕಿರಣವನ್ನು ಆಯೋಜಿಸಲಾಗುವುದು.
  • ಗಾಂಧೀಜಿ ಅವರು ಭೇಟಿ ನೀಡಿರುವ ಸ್ಮರಣಾರ್ಥ ರಾಜ್ಯದ 120 ಸ್ಥಳಗಳಲ್ಲಿ ಸ್ತಂಭಗಳನ್ನು ನವೆಂಬರ್ ಕೊನೆಯ ಒಳಗಾಗಿ ನಿರ್ಮಿಸಲಾಗುವುದು.
  • ಗಾಂಧಿ ಭಾರತ ಅಂಗವಾಗಿ ರಾಜ್ಯಾದ್ಯಂತ ಜ್ಯೋತಿ ಯಾತ್ರೆಗಳನ್ನು ಆಯೋಜಿಸಲಾಗುವುದು. ಮಹಾತ್ಮ ಗಾಂಧೀಜಿ ಅವರ ಧ್ಯಾನಸ್ಥ ಭಂಗಿಯ ಭಾವಚಿತ್ರ ಹಾಗೂ ಅವರು ಬೋಧಿಸಿದ ಸಪ್ತ ಸಾಮಾಜಿಕ ಪಾತಕಗಳನ್ನು ಎಲ್ಲಾ ಶಾಲೆಗಳಲ್ಲಿ ಬರೆದು ಅಳವಡಿಸುವ ಕಾರ್ಯವನ್ನು ಪೂರ್ಣಗೊಳಿಸಬೇಕು.
  • ರಂಗಾಯಣದ ವತಿಯಿಂದ ಗಾಂಧಿ ವರ್ಸಸ್ ಗಾಂಧಿ, ಪಾಪು-ಬಾಪು ಹಾಗೂ ಮಹಾತ್ಮರ ಬರುವಿಗಾಗಿ ಎಂಬ ಮೂರು ನಾಟಕಗಳನ್ನು ನಿರ್ಮಿಸಿ ರಾಜ್ಯಾದ್ಯಂತ ಪ್ರದರ್ಶಿಸಲು ಕ್ರಮ ಕೈಗೊಳ್ಳಲಾಗಿದೆ.
  • ರಾಜ್ಯದ 16 ಜಿಲ್ಲೆಗಳಲ್ಲಿ ಈಗಾಗಲೇ ಗಾಂಧಿ ಭವನ ನಿರ್ಮಾಣ ಕಾರ್ಯ ಪೂರ್ಣಗೊಂಡಿದೆ. ನಿವೇಶನ ಇನ್ನೂ ಸಿಗದ ಜಿಲ್ಲೆಗಳಲ್ಲಿ ಆಯಾ ಜಿಲ್ಲಾಧಿಕಾರಿಗಳು ಮುತುವರ್ಜಿ ವಹಿಸಿ ಸ್ಥಳ ಗುರುತಿಸಿ ಕಾಮಗಾರಿ ಆರಂಭಿಸಬೇಕು. ಎಲ್ಲಾ ಜಿಲ್ಲೆಗಳಲ್ಲಿ ನಿರ್ಮಾಣ ಕಾರ್ಯ ಪೂರ್ಣಗೊಳಿಸಿ ನಿರಂತರವಾಗಿ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಕ್ರಮ ಕೈಗೊಳ್ಳಬೇಕು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...