CM Siddaramaiah ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರಿಗೆ ರಾಜ್ಯ ಸರ್ಕಾರ ಶೇ.50ರಷ್ಟು ದಂಡ ಪಾವತಿಯ ಆಫರ್ ನೀಡಿದ ಹಿನ್ನೆಲೆಯಲ್ಲಿ ಸವಾರರು ದಂಡ ಕಟ್ಟುತ್ತಿದ್ದಾರೆ.
ಇದುವರೆಗೂ 40 ಕೋಟಿ ರೂ.ಗಿಂತಲೂ ಹೆಚ್ಚು ದಂಡ ಪಾವತಿಯಾಗಿದೆ ಎಂದು ತಿಳಿದು ಬಂದಿದೆ.
ಈ ಬೆನ್ನಲ್ಲೇ ಕರ್ನಾಟಕ ಸಿಎಂ ಸಿದ್ದರಾಮಯ್ಯ ಅವರ ಕಾರು ಕೂಡ ಬರೊಬ್ಬರಿ 7 ಬಾರಿ ಸಂಚಾರ ನಿಯಮ ಉಲ್ಲಂಘಿಸಿದ ಕಾರಣ ದಂಡ ಹೇರಲಾಗಿದೆ.
ಸಿಎಂ ಸಿದ್ದರಾಮಯ್ಯ ಬಳಸುವ ಇನೋವಾ ಕ್ರಿಸ್ಟಾ ಕಾರು 2024ರಿಂದ ಈವರೆಗೂ ಏಳು ಬಾರಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿದೆ.
ಈ ಪೈಕಿ ಆರು ಪ್ರಕರಣಗಳು ಸಿಎಂ ಸೀಟು ಬೆಲ್ಟ್ ಧರಿಸದೇ ನಿಯಮ ಉಲ್ಲಂಘಿಸಿದ್ದಾಗಿದೆ. ಶೇ.50ರಷ್ಟು ರಿಯಾಯಿತಿಯ ಅನುಸಾರ ಅವರು 2,500 ರೂಪಾಯಿ ದಂಡ ಪಾವತಿಸಬೇಕಿತ್ತು. ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತು ವ್ಯಾಪಕ ಚರ್ಚೆ ನಡೆದ ಬಳಿಕ ಶದಂಡ ಪಾವತಿಯಾಗಿದೆ ಎಂದು ಸಂಚಾರ ಅಧಿಕಾರಿಯೊಬ್ಬರು ತಿಳಿಸಿದ್ದಾರೆ .
CM Siddaramaiah ಆರು ಬಾರಿ ಸೀಟು ಬೆಲ್ಟ್ ಧರಿಸದಿದ್ದಕ್ಕಾಗಿ ಮತ್ತು ಒಂದು ಬಾರಿ ಅತಿವೇಗದಲ್ಲಿ ಚಲಿಸಿದ್ದಕ್ಕಾಗಿ ದಂಡ ವಿಧಿಸಲಾಗಿದ್ದು, ಸದ್ಯ ದಂಡದ ಮೊತ್ತವನ್ನು ಪಾವತಿಸಲಾಗಿದೆ ಎಂದು ಸಂಚಾರ ಪೊಲೀಸ್ ಮೂಲಗಳು ತಿಳಿಸಿವೆ.
