GK Mithun Kumar ಭದ್ರಾವತಿಯಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪಾಕಿಸ್ತಾನ ಪರ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಅವರು ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದರು.
ಈ ಘಟನೆ ಇಲಾಖೆ ಗಮನಕ್ಕೆ ಬಂದಿದ್ದು ಘಟನೆಯನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಸಂಬಂಧಪಟ್ಟ ಠಾಣೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ಭದ್ರಾವತಿ ನಗರದಲ್ಲಿ ನಡೆದ ಮೆರವಣಿಗೆ ಸಂದರ್ಭದಲ್ಲಿ ಘೋಷಣೆ ಕೂಗಲಾಗಿದೆ ಎಂಬ ವಿಡಿಯೋ ಹರಿದಾಡುತ್ತಿದೆ. ಇದರ ಸತ್ಯಾಸತ್ಯತೆ ಪರಿಶೀಲನೆಗೆ ಮೂರು ತಂಡ ರಚಿಸಲಾಗಿದೆ ಎಂದು ತಿಳಿಸಿದರು.
GK Mithun Kumar ಕಿಡಿಗೇಡಿಗಳನ್ನು ಪತ್ತೆ ಹಚ್ಚುವ ಕೆಲಸ ಆರಂಭಗೊಂಡಿದ್ದು, ಮೆರವಣಿಗೆ ವೇಳೆ ಇಲಾಖೆ ವಿಡಿಯೋಗ್ರಾಫರ್, ವಾಯ್ಸ್ ಆಧಾರಿತ ಸಿ ಸಿ ಕ್ಯಾಮೆರಾ ಮತ್ತಿತರ ಕಡೆಗಳಿಂದ ಫೋಟೇಜ್ ಪಡೆಯಲಾಗಿದೆ. ಅದೇ ರೀತಿ ವೈರಲ್ ಆಗಿರುವ ವಿಡಿಯೋವನ್ನು ಎಫ್ ಎಸ ಎಲ್ ಗೆ ಕಳುಹಿಸಲಾಗಿದ್ದು, ತನಿಖೆ ನಂತರ ಸತ್ಯಾಂಶ ಏನೆಂಬುದು ತಿಳಿಯಲಿದೆ ಎಂದು ಹೇಳಿದರು.
