Sunday, November 1, 2026
Sunday, November 1, 2026

Rotary Club Shimoga ಎಲ್ಲರೂ ರಸ್ತೆ ಸಂಚಾರ ನಿಯಮ ಪಾಲಿಸಿದರೆ ಅಪಘಾತಗಳು ಕಡಿಮೆಯಾಗುತ್ತವೆ,- ಎಚ್.ಎಲ್.ರವಿ

Date:

Rotary Club Shimoga ಸಮಾಜದ ಪ್ರತಿಯೊಬ್ಬರೂ ಸಂಚಾರ ನಿಯಮಗಳನ್ನು ಪಾಲಿಸಬೇಕು. ಸುರಕ್ಷಿತ ವಾಹನ ಚಾಲನೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ರೋಟರಿ ಜಿಲ್ಲಾ ಮಾಜಿ ಗವರ್ನರ್ ಎಚ್.ಎಲ್.ರವಿ ಹೇಳಿದರು.

ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ವತಿಯಿಂದ ಏರ್ಪಡಿಸಿದ್ದ ರಸ್ತೆ ಸುರಕ್ಷತಾ ಅಭಿಯಾನದಲ್ಲಿ ಮಾತನಾಡಿ, ರಸ್ತೆ ಸಂಚಾರ ನಿಯಮಗಳ ಪಾಲನೆ ಮಾಡದೆ ಇರುವುದರಿಂದ ಹೆಚ್ಚಿನ ಅಪಘಾತಗಳು ಸಂಭವಿಸಿ ಜೀವಹಾನಿಯಾಗುತ್ತಿವೆ. ಎಲ್ಲರೂ ಸಂಚಾರ ನಿಯಮಗಳ ಪಾಲಿಸಿದರೆ ಅಪಘಾತಗಳ ಪ್ರಮಾಣ ಕಡಿಮೆ ಆಗುತ್ತದೆ. ರೋಟರಿ ಸಂಸ್ಥೆಯು ರಸ್ತೆ ಸುರಕ್ಷತೆ ಜಾಗೃತಿಗೆ ವಿಶೇಷ ಕಾರ್ಯಕ್ರಮಗಳನ್ನು ನಡೆಸುತ್ತಿದೆ ಎಂದು ತಿಳಿಸಿದರು.

ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ಅಧ್ಯಕ್ಷ ಪ್ರಕಾಶಮೂರ್ತಿ ಮಾತನಾಡಿ, ರೋಟರಿ ಸಂಸ್ಥೆಯಿಂದ ನಿರಂತರವಾಗಿ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಸೇವಾ ಚಟುವಟಿಕೆಗಳನ್ನು ನಡೆಸಲಾಗುವುದು ಎಂದು ಹೇಳಿದರು.

ಸಂಚಾರಿ ಪೊಲೀಸ್ ಸಿಬ್ಬಂದಿ ಹಾಲೇಶಪ್ಪ ಮಾತನಾಡಿ, ಯುವಜನರು ಬೈಕ್ ಚಾಲನೆ ಮಾಡುವಾಗ ಹೆಲ್ಮೇಟ್ ಹಾಗೂ ಕಾರು ಚಾಲನೆ ಮಾಡುವಾಗ ಕಡ್ಡಾಯವಾಗಿ ಸೀಟ್ ಬೆಲ್ಟ್ ಧರಿಸಬೇಕು. ಜವಾಬ್ದಾರಿಯುತರಾಗಿ ವಾಹನಗಳನ್ನು ಚಲಾಯಿಸಬೇಕು ಎಂದರು.

Rotary Club Shimoga ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ವತಿಯಿಂದ ಗೋಪಾಳ ಲಾಸ್ಟ್ ಬಸ್ ನಿಲ್ದಾಣ, ಸಿಟಿ ಬಸ್, ಸ್ಕೂಲ್ ಬಸ್, ಆಟೋ ರಿಕ್ಷಾ, ಕಾರ್ ಮತ್ತು ಲಾರಿ ಚಾಲಕರಿಗೆ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಲಾಯಿತು. ರೋಟರಿ ಕ್ಲಬ್ ಶಿವಮೊಗ್ಗ ಮಲೆನಾಡು ನಿಕಟಪೂರ್ವ ಅಧ್ಯಕ್ಷ ಮುಸ್ತಾಕ್ ಆಲಿ ಷಾ, ಕ್ಲಬ್ ಸರ್ವೀಸ್ ಡೈರೆಕ್ಟರ್ ಸಿ.ರಾಜು, ಸ್ವಪ್ನಾ ಮತ್ತಿತರರು ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Media Academy ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು 2026ನೇ ಸಾಲಿನ ವಿವಿಧ...

Kannada Rajyotsava ಕನ್ನಡ ರಾಜ್ಯೋತ್ಸವ – ನಮ್ಮ ಹೆಮ್ಮೆಯ ಹಬ್ಬ

Kannada Rajyotsava ಪ್ರತಿಯೊಬ್ಬ ಕನ್ನಡಿಗನಿಗೂ ಕನ್ನಡ ರಾಜ್ಯೋತ್ಸವವು ಹೆಮ್ಮೆ, ಸ್ವಾಭಿಮಾನ ಮತ್ತು...

Kuvempu University ಕುವೆಂಪು ವಿವಿ ಸಂಯೋಜನೆಗೆ ಆನ್‌ಲೈನ್ ಅರ್ಜಿ ಆಹ್ವಾನ

Kuvempu University ಕುವೆಂಪು ವಿಶ್ವವಿದ್ಯಾಲಯದ ವ್ಯಾಪ್ತಿಯ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ...