Department of Empowerment of Persons with Disabilities and Senior Citizens ವಿಕಲಚೇತನ ಹಾಗು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಸೆ. 15 ರಂದು ನಗರದ ನೆಹರು ಕ್ರೀಡಾಂಗಣದಲ್ಲಿ ಹಿರಿಯ ನಾಗರಿಕರಿಗಾಗಿ ನಡೆಯುವ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಶಿವಮೊಗ್ಗ ಜಿಲ್ಲಾ ಸರ್ಕಾರಿ ನಿವೃತ್ತ ನೌಕರರು ಭಾಗವಹಿಸುವಂತೆ ಜಿಲ್ಲಾ ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ಎಸ್.ಆರ್. ಚಂದ್ರಪ್ಪ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಕ್ರೀಡೆಗಳಲ್ಲಿ ಮ್ಯುಸಿಕಲ್ ಚೇರ್, ಬಿರುಸಿನ ನಡಿಗೆ, ಬಕೆಟ್‌ನಲ್ಲಿ ಬಾಲ್ ಎಸೆಯುವ ಸ್ಪರ್ಧೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಗಾಯನ ಸ್ಪರ್ಧೆ ಮತ್ತು ಏಕಪಾತ್ರಾಭಿನಯ ಸ್ಪರ್ಧೆ ಏರ್ಪಡಿಸಿದೆ. ಸ್ತಿçÃಯರಿಗೆ ಹಾಗೂ ಪುರುಷರಿಗೆ ಪ್ರತ್ಯೇಕವಾಗಿದ್ದು, ವಯೋಮಿತಿ ಆಧಾರದ ಮೇಲೆ 60 ರಿಂದ 69 ಹಾಗೂ 70 ವರ್ಷ ಮೇಲ್ಪಟ್ಟವರಿಗಾಗಿ ಎರಡು ವಿಭಾಗಗಳನ್ನು ಏರ್ಪಡಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಪುರುಷರ ವಿಭಾಗದಿಂದ 60-69ರ ವಯೋಮಿತಿಯ ಬಿರುಸಿನ ನಡಿಗೆಯಲ್ಲಿ ಪ್ರಥಮ ಸ್ಥಾನ ಪಡೆದ ಹಾಗೂ ಗಾಯನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ 60-69ರ ವಯೋಮಿತಿಯ ಮಹಿಳೆಯರನ್ನು ರಾಜ್ಯಮಟ್ಟದ ಸ್ಪರ್ಧೆಗೆ ಕಳುಹಿಸಲಾಗುವುದು.
Department of Empowerment of Persons with Disabilities and Senior Citizens ಸೆ.15 , ಹಿರಿಯ ನಾಗರೀಕರಿಗೆ ಶಿವಮೊಗ್ಗ ನೆಹರು ಕ್ರೀಡಾಂಗಣದಲ್ಲಿ ಕ್ರೀಡೆ & ಸಾಂಸ್ಕೃತಿಕ ಸ್ಪರ್ಧೆ
Date:
