Friday, December 5, 2025
Friday, December 5, 2025

Agricultural University ಹೊಸದಾಗಿ ಉದ್ದಿಮೆ ಆರಂಭಿಸುವವರಿಗೆ ಕೃಷಿ ವಿವಿ‌ಯಿಂದ ಎಲ್ಲಾ ಸಹಕಾರ ನೀಡಲಾಗುವುದು- ಡಾ.ಆರ್.ಸಿ.ಜಗದೀಶ್

Date:

Agricultural University ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ದಗೊಳಿಸುವಿಕೆ ಯೋಜನೆಯು ಒದು ವಿಶೇಷ ಯೋಜನೆಯಾಗಿದ್ದು ಹೊಸದಾಗಿ ಕಿರು ಉದ್ದಿಮೆ ಆರಂಭಿಸುವವರಿಗೆ ಕೃಷಿ ವಿಶ್ವವಿದ್ಯಾಲಯದಿಂದ ಲಭ್ಯವಿರುವ ಎಲ್ಲ ಸಹಕಾರ ನೀಡಲಾಗುವುದು ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಆರ್.ಸಿ ಜಗದೀಶ್ ತಿಳಿಸಿದರು.
ಆತ್ಮನಿರ್ಭರ ಭಾರತ ಅಭಿಯಾನ, ಕರ್ನಾಟಕ ರಾಜ್ಯ ಕೃಷಿ ಉತ್ಪನ್ನ ಗಳ ಸಂಸ್ಕರಣೆ ಹಾಗೂ ರಫ್ತುನಿಗಮ ನಿಯಮಿತ(ಕೆಎಪಿಪಿಇಸಿ), ಜಿಲ್ಲಾಡಳಿತ, ಜಿ.ಪಂ, ಜಿಲ್ಲಾ ಕೃಷಿ ತರಬೇತಿ ಕೇಂದ್ರ ಹಳ್ಳಿಕೆರೆ ಹಾಗೂ ಕೃಷಿ ಇಲಾಖೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಗುರುವಾರ ಜಿ.ಪಂ. ಸಭಾಂಗಣದಲ್ಲಿ ಫಲಾನುಭವಿಗಳಿಗೆ ಏರ್ಪಡಿಸಲಾಗಿದ್ದ ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ದಗೊಳಿಸುವಿಕೆ ಹಾಗೂ ಆತ್ಮ ಯೋಜನೆ ಕುರಿತಾದ ಅರಿಚು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಹೊಸದಾಗಿ ಕಿರು ಉದ್ದಿಮೆ ಆರಂಭಿಸುವವರಿಗೆ ವಿಶ್ವವಿದ್ಯಾಲಯದಿಂದ ಸಂಸ್ಕರಣೆಗೆ ಜಾಗ, ಪ್ರಯೋಗಾಲಯ ಹಾಗೂ ಬ್ಯಾಂಕ್ ಮೂಲಕ ಸಾಲ ಕೂಡ ಕೊಡಿಸಲಾಗುವುದು ಎಂದರು.
ಜಿಲ್ಲೆಯಿಂದ 100 ಟನ್‌ಗಳಷ್ಟು ಅಪ್ಪೆ ಮಿಡಿ ವಿದೇಶಕ್ಕೆ ರಫ್ತಾಗುತ್ತಿದೆ. ಮೆಕ್ಕೆಜೋಳದಿಂದ 50 ಕ್ಕೂ ಹೆಚ್ಚಿನ ಬಗೆಯ ಖಾದ್ಯವನ್ನು ಮಾಡಬಹುದು. ಹಾಗೂ ಹೊಸ ಹೊಸ ಖಾದ್ಯಗಳ ಸಂಶೋಧನೆಗೂ ಅವಕಾಶ ಇದೆ. ಮಸಾಲೆ ಪದಾರ್ಥಗಳ ಸಂಶೊಧನೆಗಳನ್ನು ಕೂಡ ಮಾಡಬಹುದು.
ಅಣಬೆ ಹಾಗೂ ಬೇಕರಿ ಉದ್ಯಮದಲ್ಲಿ ಆಸಕ್ತಿ ಇರುವರಿಗೆ ತರಬೇತಿ ನೀಡಲಾಗುತ್ತದೆ. ಚಾಕೊಲೇಟ್ ಉದ್ಯಮ ಮಾಡುವವರಿಗೂ ಪ್ರೋತ್ಸಾಹ ನೀಡಲಾಗುತ್ತದೆ. ಹಾಗೂ ವಿವಿಧ ಖಾದ್ಯಗಳಲ್ಲಿ ವಿಟಮಿನ್ ಮತ್ತು ಪ್ರೋಟಿನ್ ಮಟ್ಟವನ್ನು ಪರೀಕ್ಷೆ ಮಾಡಲಾಗುತ್ತದೆ ಎಂದ ಅವರು ತಾಂತ್ರಿಕತೆ ಬಗ್ಗೆ ತರಬೇತಿ ಹಾಗೂ ಖಾದ್ಯಗಳ ಪ್ಯಾಕಿಂಗ್‌ಗೂ ತರಬೇತಿ ನೀಡಲಾಗುವುದು. ನಮ್ಮಲ್ಲಿರುವ ವಿಜ್ಞಾನಿಗಳು ಮತ್ತು ಸೌಲಭ್ಯಗಳನ್ನು ರೈತರು, ಆಸಕ್ತರು ಸದುಪಯೋಗ ಪಡಿಸಿಕೊಳ್ಳಬೇಕೆಂದರು.
ಕೆಎಪಿಪಿಇಸಿ ಯ ವ್ಯವಸ್ಥಾಪಕ ನಿರ್ದೇಶಕ ಸಿ.ಎ.ಶಿವಪ್ರಕಾಶ್ ಮಾತನಾಡಿ, ರೈತರ ಆದಾಯ ಹೆಚ್ಚಿಸಿ ಅವರನ್ನೂ ಉದ್ದಿಮೆದಾರರನ್ನಾಗಿ ಮಾಡುವ ಉದ್ದೇಶದಿಂದ ಈ ಯೋಜನೆಯನ್ನು 2020-21 ರಲ್ಲಿ ಪ್ರಾರಂಭಿಸಲಾಗಿದೆ. ರೂ. 15 ಲಕ್ಷದವರೆಗೆ ಸಹಾಯಧನ ನೀಡಲಾಗುವುದು. ಈ ಯೋಜನೆಯಡಿ ಕೇಂದ್ರ ಮತ್ತು ರಾಜ್ಯ ಸೇರಿ ರೂ. 10 ಸಾವಿರ ಕೋಟಿ ಮಂಜೂರಾಗಿದ್ದು ರಾಜ್ಯದ ಪಾಲು ರೂ.493.65ಕೋಟಿ ಆಗಿದೆ
Agricultural University ಈ ಯೋಜನೆಯು ದೇಶದ ಆರ್ಥಿಕತೆಗೆ ಉತ್ತಮ ಕೊಡುಗೆ ನೀಡುತ್ತಿದೆ. ರೈತರು ಬೆಳೆಗೆ ಉತ್ತಮ ಬೆಲೆ ಸಿಗಬೇಕಾದರೆ ಉತ್ಪನ್ನಗಳ ಮೌಲ್ಯವರ್ಧನೆ ಮಾಡಬೇಕು. ಈ ಯೋಜನೆ ಮೌಲ್ಯವರ್ಧನೆಗೆ ಬಹು ಮುಖ್ಯ ವಲಯವಾಗಿದ್ದು ನಿರಂತರ ಬೆಳೆಯುತ್ತಿರುವ ಕ್ಷೇತವಾಗಿದೆ. ಈವರೆಗೆ ಸಿರಿಧಾನ್ಯದ 2 ಸಾವಿರ ಘಟಕಗಳಿಗೆ ಸಹಾಯಧನ ನೀಡಲಾಗಿದೆ.
ಪದವಿ ಮುಗಿಸಿ, ಕಂಪ್ಯೂಟರ್ ಜ್ಞಾನ ಹೊಂದಿದವರು ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಾಗಿ ಸೇವೆ ಸಲ್ಲಿಸಬಹುದು. ಒಂದು ಪ್ರಾಜೆಕ್ಟ್ ಗೆ ರೂ. 20 ಸಾವಿರ ಸಿಗುತ್ತದೆ. ಈ ಯೋಜನೆಯಡಿ ಶಿವಮೊಗ್ಗ ರಾಜ್ಯದಲ್ಲಿ 5 ನೇ ಸ್ಥಾನದಲ್ಲಿದ್ದು ಉತ್ತಮ ಕೆಲಸ ಮಾಡುತ್ತಿದೆ. ಜಿಲ್ಲೆಯಲ್ಲಿ ಉತ್ತಮ ಸಂಪನ್ಮೂಲವಿದ್ದು ಆಹಾರ ಸಂಸ್ಕರಣೆಗೆ ಭಾರೀ ಅವಕಾಶ ಇದ್ದು ಉತ್ತಮ ಉದ್ಯೋಗಾವಕಾಶ ಸೃಷ್ಟಿಸಲಾಗುತ್ತಿದೆ ಎಂದರು.
ಜಂಟಿ ಕೃಷಿ ನಿರ್ದೇಶಕ ಕಿರಣ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಪ್ರಧಾನಮಂತ್ರಿ ಕಿರು ಆಹಾರ ಸಂಸ್ಕರಣಾ ಉದ್ಯಮಿಗಳ ನಿಯಮಬದ್ದಗೊಳಿಸುವಿಕೆ ಯೋಜನೆಯು ರಾಜ್ಯ ಮತ್ತು ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದು, ಪ್ರಾರಂಭ ಹಂತದಲ್ಲಿ ನಮ್ಮ ಜಿಲ್ಲೆಯಲ್ಲಿ ಒಂದು ಜಿಲ್ಲೆ ಒಂದು ಉತ್ಪನ್ನದಡಿ ಅನಾನಸ್ ಬೆಳೆಯನ್ನು ಆಯ್ಕೆ ಮಾಡಲಾಗಿದೆ. ನಂತರ ಅಸಂಘಟಿತ ಆಹಾರ ಸಂಸ್ಕರಣಾ ಉದ್ಯಮಿಗಳ ಉನ್ನತೀಕರಣಕ್ಕೆ ಮತ್ತು ವಿಸ್ತರಣೆಗೆ ಅವಕಾಶ ಕಲ್ಪಿಸಲಾಗುವುದು.
ಸಾಕಷ್ಟು ಕಿರು ಉದ್ದಮೆ ಆರಂಭವಾಗಿದ್ದು ಕಿರು ಉದ್ದಿಮೆಗಳಿಂದಾಗಿ ರೈತರ ಉತ್ಪನ್ನಗಳ ಮೌಲ್ಯವರ್ಧನೆ ಆಗಿ ಆದಾಯ ಹೆಚ್ಚಳಕ್ಕೆ ಸಹಾಯವಾಗುತ್ತಿದೆ. ಈ ಯೋಜನೆಯಡಿ 15 ಲಕ್ಷ ಸಹಾಯಧನ ಪಡೆಯಲು ಅವಕಾಶವಿದ್ದು ಜಿಲ್ಲೆಯಲ್ಲಿ ಈವರೆಗೆ 344 ಅರ್ಜಿಗಳಿಗೆ ಬ್ಯಾಂಕ್ ಸಾಲ ಮಂಜೂರಾತಿ ಆಗಿದೆ. 97 ಎಣ್ಣೆಗಾಣದ ಉತ್ಪನ್ನಗಳು, 55 ಬೇಕರಿ ಉತ್ಪನ್ನಗಳು, 53 ರಾಗಿ, 28 ಪೈನಾಪಲ್ ಆಧಾರಿ ಉತ್ಪನ್ನಗಳು, 16 ಅಕ್ಕಿ ಹಾಊ ಬೆಲ್ಲದ ಸಂಸ್ಕರಣ ಘಟಕಗಳು, 7 ಸಾಂಬಾರು ಹಾಗೂ ಹಾಲಿನ ಉತ್ಪನ್ನಗಳು, 5 ಉಪ್ಪಿನಕಾಯಿ ಮತ್ತು 4 ಬೇಳೆ ಆಧಾರಿತ ಉತ್ಪನ್ನಗಳಿಗೆ ಮಂಜೂರಾತಿ ದೊರೆತಿದೆ. ಜಿಲ್ಲೆಯಲ್ಲಿ 16 ಉದ್ದಿಮೆದಾರರು ನೋಂದಣಿ 8 ಫಲಾನುಭವಿಗಳು ಇದ್ದು, ಆಸಕ್ತರು ಈ ಸೌಲಭ್ಯಗಳ ಸದುಪಯೋಗಪಡೆಯಬೇಕೆಂದರು.
ಕೆಎಪಿಪಿಇಸಿ ಟೀಂ ಲೀಡರ್ ಅರವಿಂದ ಕರೆ ಮಾತನಾಡಿ, ಪಿಎಂಎಓಫ್‌ಎಂಇ ಯೋಜನೆಯಡಿ ಉದ್ದಿಮೆಗಳಿಗೆ ವೃತ್ತಿಪರ ಹಾಗೂ ತಾಂತ್ರಿಕ ಬೆಂಬಲ ದೊರೆಯುವಿಕೆಯನ್ನು ಹೆಚ್ಚಿಸುವುದು. ಬ್ರ್ಯಾಂಡಿಂಗ್ ಹಾಗೂ ಮಾರ್ಕೆಟಿಂಗ್ ಬೆಂಬಲ, ಸಾಮಾನ್ಯ ಮೂಲಭೂತ ಸೌಕರ್ಯಕ್ಕೆ ಬೆಂಬಲ, ಸಾಮರ್ಥ್ಯ ನಿರ್ಮಾಣ ಹಾಗೂ ಸಂಶೋಧನೆ, ಕಿರು ಉದ್ದಿಮೆಗಳ ವೈಯಕ್ತಿಕ ಹಾಗೂ ಗುಫುಗಳಿಗೆ ಬೆಂಬಲ ನೀಡಲಾಗುವುದು.
ಬ್ರಾಂಡಿAಗ್ ಹಾಗೂ ಮಾರ್ಕೆಟಿಂಗ್ ಅನ್ನು ಬಲಪಡಿಸುವುದು, ಸಾಮಾನ್ಯ ಸಂಸ್ಕರಣಾ ಸೌಲಭ್ಯ, ಪ್ರಯೋಗಾಲಯಗಳು, ದಾಸ್ತಾನನ್ನು ಶೇಖರಣೆ, ಪ್ಯಾಕೇಜಿಂಗ್, ಮಾರ್ಕೆಟಿಂಗ್ ಹಾಗೂ ಇನ್‌ಕ್ಯೂಬೇಷನ್ ಸೇವೆಗಳಂತಹ ಸಾಮಾನ್ಯ ಸೇವೆಗಳ ದೊರೆಯುವಿಕೆಯನ್ನು ಹೆಚ್ಚಿಸುವುದು. ತಾಂತ್ರಿಕ ಸಂಸ್ಥೆಗಳನ್ನು ಬಲಪಡಿಸುವುದು, ಆಹಾರ ಸಂಸ್ಕರಣಾ ವಲಯದಲ್ಲಿ ಸಂಶೋಧನೆ ಹಾಗೂ ತರಬೇತಿಗೆ ಪ್ರೋತ್ಸಾಹ ನೀಡಲಾಗುವುದು ಎಂದ ಅವರು, ಈ ಯೋಜನೆಯಡಿ ಅರ್ಜಿ ಸಲ್ಲಿಕೆ ವಿಧಾನ, ಡಿಆರ್‌ಪಿ (ಜಿಲ್ಲಾ ಸಂಪನ್ಮೂಲ ವ್ಯಕ್ತಿ) ಆಯ್ಕೆ ಇತರೆ ಮಾಹಿತಿ ನೀಡಿದರು.
ಲೀಡ್ ಬ್ಯಾಂಕ್ ಮ್ಯಾನೇಜರ್ ಹನುಮಂತಪ್ಪ ಮಾತನಾಡಿ ಈ ಯೋಜನೆಗೆ ಸಂಬಂಧಿಸಿದಂತೆ ಲಭ್ಯವಿರುವ ಸಾಲ ಸೌಲಭ್ಯದ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಾಯಿತು.ಜಿ.ಪಂ ಉಪ ಕಾರ್ಯದರ್ಶಿ ಸುಜಾತ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ನಾಗರಾಜ್, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕ ಬಾಬುರಾಮ್. ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಶಿವಕುಮಾರ್, ಇತರೆ ಅಧಿಕಾರಿಗಳು, ಯೋಜನೆಯ ಫಲಾನುಭವಿಗಳು ಪಾಲ್ಗೊಂಡಿದ್ದರು

ಅರಣ್ಯ ಮತ್ತು ವನ್ಯಜೀವಿ ಸಂಪತ್ತನ್ನು ಸಂರಕ್ಷಿಸಲು ಕೇವಲ ಕಾನೂನಿಂದ ಮಾತ್ರ ಸಾಧ್ಯವಿಲ್ಲ. ಅದಕ್ಕೆ ಜನ ಸಾಮಾನ್ಯರ ಸಹಕಾರ ಕೂಡ ಅತಿ ಮುಖ್ಯವಾಗಿ ಬೇಕಾಗಿದ್ದು ನಾವೆಲ್ಲರೂ ವನ್ಯಜೀವಿ ಸಂಪತ್ತನ್ನು ರಕ್ಷಣೆ ಮಾಡುವ ಮನೋಭಾವ ಬೆಳಿಸಿಕೊಳ್ಳೋಣ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ ನಾಯಕ್ ಕರೆ ನೀಡಿದರು.
ಕರ್ನಾಟಕ ಅರಣ್ಯ ಇಲಾಖೆ ವತಿಯಿಂದ ನಗರದ ಮುಖ್ಯ ಅರಣ್ಯ ಸಂರಕ್ಷಾಣಾಧಿಕಾರಿಗಳ ಕಚೇರಿಯ ಶ್ರೀಗಂಧ ಕೋಠಿ ಆವರಣದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ-2025 ಕಾರ್ಯಕ್ರಮದಲ್ಲಿ ನಾಡಿನ ಅರಣ್ಯ ಮತ್ತು ವನ್ಯಜೀವಿ ಸಂಪತ್ತನ್ನು ಸಂರಕ್ಷಿಸಲು ಪ್ರಾಣತ್ಯಾಗ ಮಾಡಿದ ಅರಣ್ಯ ಇಲಾಖೆಯ ಹುತಾತ್ಮರಿಗೆ ಶ್ರದ್ದಾಂಜಲಿ ಸಲ್ಲಿಸಿ ಅವರು ಮಾತನಾಡಿದರು.
ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆ ಮಾಡುವ ಅಧಿಕಾರಿಗಳಿಗೆ ಜನರಿಂದ ಬೆಂಬಲ ಸಿಗುತ್ತಿಲ್ಲದಿರುವುದು ಶೋಚನಿಯವಾಗಿದೆ. ಕಳೆದ 10 ವರ್ಷದಲ್ಲಿ 20 ಮಂದಿ ಅರಣ್ಯ ಅಧಿಕಾರಿ ಹುತಾತ್ಮರಾಗಿದ್ದಾರೆ. ನಮ್ಮಲ್ಲಿ ಎಷ್ಟೇ ತಂತ್ರಜ್ಞಾನ ಮುಂದುವರೆದರೂ ಇಂತಹ ಅನಾಹುತಗಳನ್ನು ತÀಡೆಯಲು ಸಾಧ್ಯವಾಗುತ್ತಿಲ್ಲ ಎಂದರು ಬೇಸರ ವ್ಯಕ್ತಿಪಡಿಸಿದರು.
ಅರಣ್ಯ ಇಲಾಖೆಯಲ್ಲಿ ಸಾಕಷ್ಟು ತಂತ್ರಜ್ಞಾನದ ಉಪಯೋಗ ಆಗಬೇಕಿದೆ. ಆದರೆ ಇಂತಹ ಬಳಕೆ ಆಗದೇ ಇರುವ ಕಾರಣಕ್ಕೆ ಅಧಿಕಾರಿಗಳ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ ಎಂದನಿಸುತ್ತಿದೆ. ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಇಲಾಖೆಯು ತನಿಖಾ ಅಧಿಕಾರಿಗಳಿಗೆ ತಂತ್ರಜ್ಞಾನದ ಬಗ್ಗೆ ತರಬೇತಿ ನೀಡಬೇಕು ಎಂದರು.
ರಾಜ್ಯದಲ್ಲಿ 3 ಕ್ರಿಮಿನಲ್ ಕಾನೂನುಗಳು ಬದಲಾವಣೆ ಆಗಿ ಹೊಸ ಕಾನೂನು ಜಾರಿಗೆ ಬಂದಿದೆ. ಕಂದಾಯ, ಪೊಲೀಸ್ ಇಲಾಖೆ ಒಳಗೊಂಡAತೆ ಅನೇಕ ಇಲಾಖೆಗಳಿಗೆ ಈ ಕಾನೂನಗಳ ಬಗ್ಗೆ ನಮ್ಮ ತಂಡ ಜಾಗೃತಿ ಮೂಡಿಸುತ್ತಿದೆ. ಅರಣ್ಯ ಇಲಾಖೆಯಲ್ಲಿಯೂ ಇಂತಹ ಜಾಗೃತಿ ಕಾರ್ಯಕ್ರಮಗಳು ಆಗಬೇಕಿದೆ. ಆಗ ನ್ಯಾಯಾಲಯದಲ್ಲಿ ಅರಣ್ಯ ಇಲಾಖೆಗೆ ಸಂಬAಧಿಸಿದ ಪ್ರಕರಣಗಳ ಬಗ್ಗೆಯೂ ಅಧಿಕಾರಿಗಳಿಗೆ ಅರಿವು ಮೂಡುತ್ತದೆ ಎಂದರು.
ಆನೆ ಯೋಜನೆಯ ಅಪರ ಪ್ರಧಾನ ಮುಖ್ಯ ಸಂರಕ್ಷಣಾಧಿಕಾರಿ ಮನೋಜ್ ರಾಜನ್ ಮಾತನಾಡಿ, ಪ್ರಾಣಿಗಳ ದಾಳಿ, ಪರಿಸರ ವಿಕೋಪದಂತಹ ಅನಾಹುತಗಳಿಂದ ಕರ್ನಾಟಕದಲ್ಲಿ 1966 ರಿಂದ 2025ರವರೆಗೆ 62 ಅರಣ್ಯ ಇಲಾಖೆಯ ಅಧಿಕಾರಿಗಳು ಪ್ರಾಣತ್ಯಾಗ ಮಾಡಿದ್ದಾರೆ. ಪ್ರಾಣಿ ಮತ್ತು ಮಾನವ ಸಂಘರ್ಷದಿAದ 35 ಮಂದಿ ಸಾವನ್ನಪ್ಪಿದ್ದಾರೆ. ಕರ್ನಾಟಕದಲ್ಲಿ 6300 ಕ್ಕೂ ಹೆಚ್ಚು ಆನೆಗಳಿದ್ದು ಇಡೀ ದೇಶದ ಮಾನವ ಮತ್ತು ಪ್ರಾಣಿ ಸಂಘರ್ಷದ ಪ್ರಕರಣಗಳನ್ನು ಗಮನಿಸಿದರೆ ನಮ್ಮ ರಾಜ್ಯದಲ್ಲಿ ಅನಾಹುತಗಳ ಕಡಿಮೆ ಮಟ್ಟದಲ್ಲಿದೆ ಎಂದು ತಿಳಿಸಿದರು.
ಇಂತಹ ಪ್ರಾಣಿ ಮತ್ತು ಮಾನವ ಸಂಘರ್ಷ ತಪ್ಪಿಸಲು ಆನೆ ಓಡಾಡುವ ದಾರಿಯಲ್ಲಿ ಬ್ಯಾರಿಕೇಡ್, ಕಾರಿಡಾರ್ ಹಾಗೂ ತಂತ್ರಜ್ಞಾನ ಅಳವಡಿಸಿಕೊಳ್ಳಲಾಗಿದೆ. ತಂತ್ರಜ್ಞಾನ ಹಾಗೂ ಶ್ವಾನದಳ ಸಹಾಯದಿಂದ ಆನೆಯನ್ನು ಪತ್ತೆ ಹಚ್ಚುವ ಕೆಲಸ ಮಾಡಲಾಗುತ್ತಿದೆ. ಹಾಗೂ ಕಳೆದ 2 ವರ್ಷಗಳಿಂದ ಅರಣ್ಯದಲ್ಲಿ ಪ್ರಾಕೃತಿಕ ವಿಕೋಪದಂತಹ ಯಾವುದೇ ಅನಾಹುತಗಳು ಕೂಡ ಕಂಡು ಬಂದಿಲ್ಲ.
ಸರ್ಕಾರದ ಸೂಚನೆಯಂತೆ, ಅರಣ್ಯ ಇಲಾಖೆ ಅಧಿಕಾರಿಗಳ ಹಿತದೃಷ್ಟಿಯಿಂದ ಇಂಟಿಗ್ರೇಟೆಡ್ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ. ಈ ಮೂಲಕ ಅಧಿಕಾರಿಗಳು ಜಾಗೃತೆಯಿಂದ ಕೆಲಸ ಮಾಡುವಂತೆ ಸೂಚಿಸಲಾಗುತ್ತಿದ್ದು, ತಮ್ಮ ಲೋಪಗಳಿಂದ ಪ್ರಾಣತ್ಯಾಗ ಮಾಡುವಂತಹ ಸಂದರ್ಭವನ್ನು ತಂದಿಟ್ಟುಕೊಳ್ಳಬಾರದು ಎಂದು ಸಲಹೆ ನೀಡಲಾಗುತ್ತಿದೆ.
ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆ ಮಾತನಾಡಿ, ನಾಡಿನ ಅರಣ್ಯ ಮತ್ತು ವನ್ಯಜೀವಿ ಸಂಪತ್ತನ್ನು ಸಂರಕ್ಷಿಸಲು ಪ್ರಾಣತ್ಯಾಗ ಮಾಡಿದ ಅರಣ್ಯ ಇಲಾಖೆಯ ಹುತಾತ್ಮರಿಗೆ ಶ್ರದ್ದಾಂಜಲಿ ಸಲ್ಲಿಸುವುದು ಒಂದು ಉತ್ತಮವಾದ ಆಚರಣೆಯಾಗಿದೆ.
ದೇಶದ ಸೇನೆಯಂತೆೆ ಅರಣ್ಯ ಇಲಾಖೆಯೂ ಕಾರ್ಯನಿರ್ವಹಿಸುತ್ತಿದ್ದು, ಇದು ನಿಸರ್ಗವನ್ನು ಕಾಯುವ ಸೇನೆಯಾಗಿದೆ. ಅದರಂತೆ ಶರಾವತಿ ಸಂತ್ರಸ್ತರಿಗೆ ಪರಿಹಾರ ಹಾಗೂ ಇನ್ನಿತರ ಅಭಿವೃದ್ದಿ ಕಾರ್ಯಗಳಿಗೆ ಸಂಬAಧಿಸಿದAತೆ ಕಂದಾಯ ಮತ್ತು ಅರಣ್ಯ ಇಲಾಖೆಗಳು ಜಂಟಿಯಾಗಿ ಉತ್ತಮ ಕೆಲಸ ಮಾಡುತ್ತಿವೆ. ಶಿವಮೊಗ್ಗ ಜಿಲ್ಲೆಯಲ್ಲಿ ಅತಿ ಹೆಚ್ಚು ಭೂಮಿ ಅತಿಕ್ರಮಣ ಹಾಗೂ ಅರಣ್ಯ ಭೂಮಿಗೆ ಸಂಬAಧಿಸಿದ ಪ್ರಕರಣಗಳು ಬಾಕಿ ಇದ್ದು, ಇವನ್ನು ಬಗೆಹರಿಸುವ ನಿಟ್ಟಿನಲ್ಲಿ ಯಾವುದೇ ಒತ್ತಡಕ್ಕೆ ಮಣಿಯದೆ ಒಟ್ಟಾಗಿ ಕೆಲಸ ಮಾಡಿದರೆ ಅವುಗಳನ್ನು ವಿಲೇವಾರಿ ಮಾಡಬಹುದು ಎಂದರು.
ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕೆ.ಟಿ.ಹನುಮಂತಪ್ಪ ಮಾತನಾಡಿ, ವನ್ಯಪ್ರಾಣಿ ಹಾಗೂ ಪ್ರಕೃತಿ ವಿಕೋಪದಿಂದ ಸಾವು ಸಂಭವಿಸುತ್ತದೆ. ಹಾಗಾಗಿ ಅಧಿಕಾರಿಗಳು ಜಾಗೃತೆಯಿಂದ ಕೆಲಸ ಮಾಡಬೇಕು. ಅರಣ್ಯ ಸೇವೆಯಲ್ಲಿರುವ ಪ್ರತಿಯೊಬ್ಬ ಅಧಿಕಾರಿಯ ಜೀವ ಅಮೂಲ್ಯವಾದದ್ದು. ಆದ್ದರಿಂದ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಿಬೇಕು ಎಂದರು.
ಅರಣ್ಯ, ಭೂಮಿ, ಅಭಿವೃದ್ದಿಯ ವಿಚಾರದಲ್ಲಿ ಅಧಿಕಾರಿಗಳಿಗೆ ಒತ್ತಡ ಇದೆ. ಆದರೂ ಎಲ್ಲಾ ಸಂದರ್ಭದಲ್ಲಿಯೂ ಪೊಲೀಸ್, ಕಂದಾಯ, ಕಾನೂನು ಇಲಾಖೆಗಳು ನಮಗೆ ಬೆಂಬಲವಾಗಿ ನಿಂತಿವೆ. ಅಧಿಕಾರಿಗಳ ಪ್ರಾಣತ್ಯಾಗವನ್ನು ಇಲಾಖೆಯು ಸದಾ ನೆನೆಯುತ್ತದೆ. ಅವರ ಕುಟುಂಬದ ನಷ್ಟವನ್ನು ತುಂಬಿಕೊಳ್ಳಲು ಸರ್ಕಾರವು ಕೂಡ ರೂ. 50 ಲಕ್ಷ ಪರಿಹಾರ ನೀಡಲು ಮುಂದಾಗಿದೆ ಎಂದು ತಿಳಿಸಿದರು
ಕಾರ್ಯಕ್ರಮದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ.ಜಿ.ಆರ್.ಅಜ್ಜಯ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಜಿ.ಪಂ. ಸಿಇಓ ಹೇಮಂತ್.ಎನ್, ಡಿಸಿಎಫ್ ಪ್ರಸನ್ನಕೃಷ್ಣ ಪಟಗಾರ್, ಪೊಲೀಸ್ ಇಲಾಖೆ ಹಾಗೂ ಅರಣ್ಯ ಇಲಾಖೆಯ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...