Thursday, March 19, 2026
Thursday, March 19, 2026

Department of Youth Empowerment and Sports ಕ್ರೀಡೆಗಳು ಕೇವಲ ಗೆಲುವುಸೋಲಿನ ಪಂದ್ಯವಲ್ಲ.ಸಹೋದರತ್ವ,ಮಾನವೀಯ ಗುಣಗಳನ್ನ ಹೊಂದಿದೆ- ವಿ.ಅಭಿಷೇಕ್

Date:

Department of Youth Empowerment and Sports ಕ್ರೀಡೆಯು ದೈಹಿಕ ಹಾಗೂ ಮಾನಸಿಕ ಕ್ಷಮತೆಯನ್ನು ಸದೃಢವಾಗಿಸಲು ಸಹಕಾರಿಯಾಗಿದ್ದು, ಜೀವನದಲ್ಲಿ ಶಿಸ್ತನ್ನು ಕಲಿಸುತ್ತದೆ. ಆ ನಿಟ್ಟಿನಲ್ಲಿ ನಾವೆಲ್ಲರೂ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿ ಅಭಿಷೇಕ್.ವಿ ಹೇಳಿದರು.

ಅವರು ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕ್ರೀಡೆಯೂ ಕೇವಲ ಸೋಲು ಗೆಲುವಿನ ಪಂದ್ಯವಾಗಿಲ್ಲದೇ ಅದು ಸಹೋದರತ್ವ ಹಾಗೂ ಮಾನವೀಯ ಗುಣಗಳನ್ನು ಹೊಂದಿದೆ. ಜೀವನದಲ್ಲಿ ಶಿಸ್ತನ್ನು ಸಹ ಕಲಿಸುತ್ತದೆ. ಹಾಗಾಗಿ ನಾವೆಲ್ಲರೂ ಕ್ರೀಡೆಯನ್ನು ಆಟದ ದೃಷ್ಟಿಯಿಂದ ನೋಡದೆ ಬದುಕಿನ ಒಂದು ಭಾಗವಾಗಿ ಕಾಣಬೇಕಿದೆ ಎಂದು ಅವರು ಹೇಳಿದರು.

ವಿದ್ಯಾರ್ಥಿಗಳ ಬದುಕಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಯೂ ಅವಶ್ಯಕವಾಗಿದೆ. ಯಾಕೆಂದರೆ ಅವರ ಭವಿಷ್ಯದಲ್ಲಿ ಉದ್ಯೋಗವನ್ನು ಅರಸಿ ಹೋಗುವಾಗ ಕೇವಲ ಪಠ್ಯದಿಂದ ಪಡೆದ ಅಂಕವನ್ನು ಮಾತ್ರವಲ್ಲದೆ ಕ್ರೀಡೆ ಒಳಗೊಂಡಂತೆ ಇನ್ನಿತರ ಪಠ್ಯೇತರ ಚಟುವಟಿಕೆಯನ್ನು ಮಾನದಂಡವಾಗಿ ಪರಿಗಣಿಸುತ್ತಾರೆ. ಹಾಗಾಗಿ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಹೆಚ್ಚಾಗಿ ತೊಡಗಿಕೊಂಡು ರಾಜ್ಯ, ರಾಷ್ಟ್ರ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸುವಂತಾಗಬೇಕು. ಆ ಮೂಲಕ ದೇಶಕ್ಕೆ ಕೀರ್ತಿ ತರಬೇಕು. ಅದಕ್ಕೆ ಬೇಕಾದಂತಹ ಪ್ರೋತ್ಸಾಹ ಹಾಗೂ ತರಬೇತಿಯನ್ನು ಇಲಾಖೆಯಿಂದ ನೀಡಲಾಗುತ್ತದೆ ಅವರು ಎಂದರು.

Department of Youth Empowerment and Sports ಜಿ.ಪಂ.ಮುಖ್ಯ ಯೋಜನಾಧಿಕಾರಿ ಹನುಮನಾಯ್ಕ ಮಾತನಾಡಿ, ಕ್ರೀಡೆಯಲ್ಲಿ ಭಾಗವಹಿಸುವವರು ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ಈ ಕ್ರೀಡಾಕೂಟದಲ್ಲಿ ಭಾಗವಹಿಸಲು 8 ಜಿಲ್ಲೆಯಿಂದ ತಂಡಗಳು ಬಂದಿದ್ದು, ಎಲ್ಲರೂ ಉತ್ಸಾಹದಿಂದ ಭಾಗವಹಿಸಿ ಗೆಲುಪಡೆಯಿರಿ ಎಂದು ಶುಭ ಕೋರಿದರು.

ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರೇಖ್ಯಾನಾಯ್ಕ, ಮುಖ್ಯ ಅಥ್ಲೇಟಿಕ್ಸ್ ತರಬೇತಿದಾರಾ ಬಾಳಪ್ಪ ಮಾನೆ, ಇಲಾಖೆ ಸಿಬ್ಬಂದಿಗಳು ಹಾಗೂ ಕ್ರೀಡಾಪಟುಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...