S. N. Channabasappa ಶಿವಮೊಗ್ಗ :ಸೆ. 12. ಗುರುವಾರ ಬೆಳಿಗ್ಗೆ ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಾರ್ಡ್ ಸಂಖ್ಯೆ 17 ಮತ್ತು 24ಕ್ಕೆ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭೇಟಿ ನೀಡಿ, ಸ್ಥಳೀಯ ನಿವಾಸಿಗಳೊಂದಿಗೆ ನೇರವಾಗಿ ಸಂವಾದ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದರು.
S. N. Channabasappa ಈ ಸಂದರ್ಭದಲ್ಲಿ, ವಾರ್ಡ್ ಸಂಖ್ಯೆ 17ರಲ್ಲಿ ಯುಜಿಡಿ ಸಮಸ್ಯೆ ಹಾಗೂ ಕುಡಿಯುವ ನೀರಿನ ತೊಂದರೆ ಕುರಿತು ನಿವಾಸಿಗಳಿಂದ ಮಾಹಿತಿ ಪಡೆದು, ಸಮಸ್ಯೆ ಶೀಘ್ರ ಪರಿಹಾರವಾಗುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚಿಸಿದರು. ವಾರ್ಡ್ ಸಂಖ್ಯೆ 24ರಲ್ಲಿ ಸ್ಥಳೀಯರ ಸಂಚಾರ ಸೌಲಭ್ಯ ಸುಧಾರಣೆಗೆ ಹಾಗೂ ನಗರ ಮೂಲಸೌಕರ್ಯ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ರಸ್ತೆ ಅಗಲೀಕರಣ ಹಾಗೂ ಡಬಲ್ ರಸ್ತೆ ಯೋಜನೆ ಮಂಜುರಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಅಗತ್ಯವಾದ ಭೂಸ್ವಾಧೀನ ಪ್ರಕ್ರಿಯೆಗೆ ಸ್ಥಳ ಪರಿಶೀಲನೆ ನಡೆಸಿದರು.
ಭೇಟಿಯ ಸಂದರ್ಭ ಪಾಲಿಕೆಯ ಅಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
