Friday, December 5, 2025
Friday, December 5, 2025

Kannada Sahitya Parishat ವಿದ್ಯಾರ್ಥಿಯ ಜೀವನಕ್ಕೆ ಒಂದು ಗುರಿ‌‌ ಮತ್ತು ಗುರು ಮುಖ್ಯ- ವೈ.ಎಸ್.ವಿ.ದತ್ತ

Date:

Kannada Sahitya Parishat ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಸಾಧನೆ ಮಾಡಿದಾಗ ಶಿಕ್ಷಕರ ಬದುಕು ಸಾರ್ಥಕವೆನಿಸುತ್ತದೆ. ತಾಯಿ ಜನ್ಮ ಕೊಟ್ಟರೆ, ಶಿಕ್ಷಕರು ಜೀವನವನ್ನು ನೀಡುತ್ತಾರೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ವಿದ್ಯಾರ್ಥಿಯ ಜೀವನಕ್ಕೆ ಒಂದು ಗುರಿ ಮತ್ತು ಗುರು ಅಗತ್ಯ ಎಂದು ಕಡೂರಿನ ಮಾಜಿ ಶಾಸಕ ವೈ.ಎಸ್.ವಿ. ದತ್ತ ಹೇಳಿದರು.
ಪಟ್ಟಣದ ರಂಗನಾಥ ಕನ್ವೆನ್ಷನ್ ಹಾಲ್‌ನಲ್ಲಿ ಶುಕ್ರವಾರ ಸಂಜೆ ಕನ್ನಡ ಸಾಹಿತ್ಯ ಸಾಂಸ್ಕöÈತಿಕ ವೇದಿಕೆ ವತಿಯಿಂದ ಹಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕöÈತರು ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಸ್ತುತ ಗ್ರಾಮೀಣ ಪ್ರದೇಶದಲ್ಲಿ ಅನೇಕ ಸರ್ಕಾರಿ ಶಾಲೆಗಳು ಅವನತಿ ಕಾಣುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ಅನೇಕ ಸೌಲಭ್ಯಗಳು ಇದ್ದರೂ ಸಹ ಮಕ್ಕಳ ದಾಖಲಾತಿ ಹೆಚ್ಚಿಸುವುದು ಸಾಹಸದ ಕೆಲಸವಾಗಿದೆ. ಸ್ಪರ್ಧಾತ್ಮಕ ಯುಗದಲ್ಲಿ ಇಂಗ್ಲೀಷ್ ಕಲಿಕೆ ಅನಿವಾರ್ಯವಾಗಿದೆ. ಅದರೆ ಜ್ಞಾನಕ್ಕಾಗಿ ಇಂಗ್ಲೀಷ್ ಬಳಸಿ ಬದುಕು ಕಟ್ಟಿಕೊಳ್ಳಲು ಕನ್ನಡ ಕಲಿಕೆ ಅಗತ್ಯ. ಕನ್ನಡದ ಶಿಕ್ಷಣದಿಂದ ಎಲ್ಲಾ ಕ್ಷೇತ್ರದಲ್ಲೂ ಪಾರಂಗತರಾಗಲು ಸಾಧ್ಯ ಎಂದರು.
Kannada Sahitya Parishat ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡುವ ಜತೆಗೆ ಸಂಸ್ಕಾರ ಕಲಿಸಿ ಸಮಾಜಮುಖಿಯಾಗಿ ಪರಿವರ್ತಿಸಿ ಮುಖ್ಯ ವೇದಿಕೆಗೆ ತರುವ ಗುರುತರವಾದ ಹೊಣೆ ಶಿಕ್ಷಕರದ್ದಾಗಿದೆ ಎಂದ ಅವರು, ರಾಜಕೀಯ ಕ್ಷೇತ್ರದ ವಿವಿಧ ಆಯಾಮಗಳನ್ನು ಕಂಡಿದ್ದೇನೆ. ಪ್ರಸ್ತುತ ದಿನಮಾನಗಳಲ್ಲಿ ರಾಜಕೀಯ ಮೌಲ್ಯಗಳು ಬದಲಾಗಿವೆ. ನಾಡಹಬ್ಬ ದಸರಾ ಉದ್ಘಾಟನೆಯ ವಿಷಯದಲ್ಲಿ ರಾಜಕೀಯ ಮಾಡುವುದು ಸಲ್ಲದು. ರಾಷ್ಟçಕವಿ ಕುವೆಂಪು ಅವರಿಗೆ ಕನ್ನಡ ಕಲಿಕಿಗೆ ಉತ್ತೇಜನ ನೀಡಿದವರೂ ಒಬ್ಬ ಅಲ್ಪ ಸಂಖ್ಯಾತ ವ್ಯಕ್ತಿ. ಕೃಷ್ಣರಾಜ ಒಡೆಯರ್ ಕೂಡ ಅಂದಿನ ದಿವಾನರಾದ ಮಿರ್ಜಾ ಇಸ್ಮಾಯಿಲ್ ಅವರನ್ನು ಅಂಬಾರಿ ಮೇಲೆ ಕೂರಿಸಿಕೊಂಡಿದ್ದರು ಎಂದರು.
ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಸಾಂಸ್ಕöÈತಿಕ ವೇದಿಕೆ ಅಧ್ಯಕ್ಷ ಶಂಕರ್ ಶೇಟ್ ಪ್ರಾಸ್ತಾವಿಕ ಮಾತನಾಡಿ, ನಾಡಿನ ಸತ್ಪçಜೆಗಳನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವವಾಗಿದೆ. ವಿದ್ಯಾರ್ಥಿಗಳು ತಂದೆ-ತಾಯಿ ಹಾಗೂ ಗುರುಗಳನ್ನು ಗೌರವಯುತವಾಗಿ ಕಾಣಬೇಕು. ವೇದಿಕೆಯ ವತಿಯಿಂದ ಅನೇಕ ಸಾಮಾಜಿಕ ಹಾಗೂ ಜನಪರವಾದ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿದ್ದು, ಉತ್ತಮ ಶಿಕ್ಷಕರನ್ನು ಗೌರವಿಸುತ್ತಿರುವುದು ಸಂತಸ ಎನಿಸುತ್ತಿದೆ. ಈಗಾಗಲೇ ಸಮಿತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸುಮಾರು ಒಂದು ಸಾವಿರ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಗಿದೆ ಎಂದರು.
ದುಗ್ಲಿ ಮಠದ ಶ್ರೀ ರೇವಣಸಿದ್ಧೇಶ್ವರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ವಿಶೇಷ ಆಹ್ವಾನಿತರಾಗಿ ರಾಷ್ಟçಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪುರಸ್ಕöÈತ ವಂದನಾ ರೈ ಕಾರ್ಕಳ, ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಆರ್. ಪುಷ್ಪಾ, ಸಮಾಜ ಸೇವಕ ಕಾರ್ತಿಕ್ ಸಾಹುಕಾರ್ ಆನವಟ್ಟಿ, ನಲಿಕಲಿ ಕ್ರಿಯಾಶೀಲ ತಾರೆಯರು ಟ್ರಸ್ಟ್ ಅಧ್ಯಕ್ಷೆ ಫೌಜಿಯಾ ಸರಚತ್, ಶ್ರೀಧರ್ ಇಂಟರ್ ನ್ಯಾಷನಲ್ ಸ್ಕೂಲ್ ಪ್ರಾಂಶುಪಾಲ ಗುತ್ತೇದಾರ್ ಶೇಕ್ ನವಾಬ್ ಇತರರಿದ್ದರು.

೧೩ ಸೊರಬ ೦೧: ಸೊರಬ ಪಟ್ಟಣದ ರಂಗನಾಥ ಕನ್ವೆನ್ಷನ್ ಹಾಲ್‌ನಲ್ಲಿ ಶುಕ್ರವಾರ ಸಂಜೆ ಕನ್ನಡ ಸಾಹಿತ್ಯ ಸಾಂಸ್ಕöÈತಿಕ ವೇದಿಕೆ ವತಿಯಿಂದ ಹಮಿಕೊಂಡಿದ್ದ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕöÈತರು ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮವನ್ನು ಕಡೂರಿನ ಮಾಜಿ ಶಾಸಕ ವೈ.ಎಸ್.ವಿ. ದತ್ತ ಉದ್ಘಾಟಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...