Shimoga News ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣದ ಜತೆಯಲ್ಲಿ ಕೌಶಲ್ಯ ತುಂಬಾ ಮುಖ್ಯ. ಎಲ್ಲ ಕ್ಷೇತ್ರಗಳಲ್ಲೂ ಕೌಶಲ್ಯ ಅಗತ್ಯವಿದ್ದು, ಉದ್ಯೋಗದಲ್ಲಿ ಯಶಸ್ಸು ಗಳಿಸಲು ಹೆಚ್ಚು ಕೌಶಲ್ಯಗಳನ್ನು ಕಲಿಯಬೇಕು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್ ಹೇಳಿದರು.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಡ್ವಾನ್ಸ್ಡ್ ಸ್ಕಿಲ್ ಡೆವಲಪ್‌ಮೆಂಟ್ ಮತ್ತು ಬಾಷ್ ಕಂಪನಿಯ ಸಹಯೋಗದಲ್ಲಿ ಆಯೋಜಿಸಿದ್ದ 30 ದಿನಗಳ ಕೌಶಲ್ಯ ಅಭಿವೃದ್ಧಿ ಹಾಗೂ ಉದ್ಯೋಗ ಕ್ಷೇತ್ರದಲ್ಲಿ ಸಂದರ್ಶನ ಸಮಯದಲ್ಲಿ ಎದುರಿಸುವ ಸವಾಲುಗಳಿಗೆ ತರಬೇತಿ ನೀಡುವ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಅಡ್ವಾನ್ಸ್ಡ್ ಸ್ಕಿಲ್ ಅಕಾಡೆಮಿ ತರಬೇತಿ ಕಾರ್ಯಗಾರವು ಮೂರನೇ ಬ್ಯಾಚ್‌ನಲ್ಲಿ ನಡೆಯುತ್ತಿದ್ದು, ಇದರಲ್ಲಿ ತರಬೇತಿ ಪಡೆದ ಅನೇಕ ವಿದ್ಯಾರ್ಥಿಗಳಿಗೆ ಉತ್ತಮ ಸಂಸ್ಥೆಗಳಲ್ಲಿ ಉದ್ಯೋಗ ಸಿಕ್ಕಿರುವುದು ತುಂಬಾ ಹೆಮ್ಮೆಯ ವಿಷಯ. ಇಂತಹ ತರಬೇತಿ ಶಿಬಿರಗಳು ವಿದ್ಯಾರ್ಥಿಗಳಿಗೆ ಉದ್ಯೋಗಾವಕಾಶದ ಮಾರ್ಗದರ್ಶನ ಮತ್ತು ಸಹಕಾರ ನೀಡುತ್ತವೆ ಎಂದು ತಿಳಿಸಿದರು.
Shimoga News ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಾರ್ಯದರ್ಶಿ ಎ.ಎಂ.ಸುರೇಶ್ ಮಾತನಾಡಿ, ಪ್ರತಿಯೊಂದು ಸಣ್ಣ ಸಣ್ಣ ವೃತ್ತಿಗೂ ಕೌಶಲ್ಯ ತುಂಬಾ ಮುಖ್ಯವಾಗಿದೆ. ಕೌಶಲ್ಯ ವೃತ್ತಿಯ ಅವಿಭಾಜ್ಯ ಅಂಗವಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕೌಶಲ್ಯವನ್ನು ಚೆನ್ನಾಗಿ ಕಲಿತು ಯಶಸ್ವಿಯಾಗಬೇಕು. ಬಾಸ್ ಕಂಪನಿಯ ಸಹಯೋಗದಲ್ಲಿ ನೀಡುತ್ತಿರುವ ತರಬೇತಿ ಶಿಬಿರಾರ್ಥಿಗಳಿಗೆ ತುಂಬಾ ಅನುಕೂಲವಾಗಿದೆ ಎಂದರು.
ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಮಾತನಾಡಿ, ವಿದ್ಯಾಭಾಸದ ಜೊತೆಗೆ ಸ್ಕಿಲ್ ಸಹ ತುಂಬಾ ಮುಖ್ಯ. ಸ್ಕಿಲ್ ಇಲ್ಲದವರು ಉದ್ಯೋಗದ ಅವಕಾಶದಿಂದ ವಂಚಿತರಾಗುತ್ತಾರೆ. ಪ್ರತಿಯೊಬ್ಬರಿಗೂ ಸ್ಕಿಲ್ ತುಂಬಾ ಮುಖ್ಯ ಎಂದು ತಿಳಿಸಿದರು.
ಬಾಷ್ ಕಂಪನಿಯ ವತಿಯಿಂದ ಶಿಬಿರಾರ್ಥಿಗಳಿಗೆ ಶೈಕ್ಷಣಿಕ ಕಿಟ್ ನೀಡಲಾಯಿತು. ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಖಜಾಂಚಿ ಆರ್ ಮನೋಹರ್, ನಿರ್ದೇಶಕರಾದ ಗಣೇಶ್ ಎಂ ಅಂಗಡಿ, ಸ್ಕಿಲ್ ಅಕಾಡೆಮಿ ಮ್ಯಾನೇಜರ್ ಕುಮಾರ್ ಹಾಗೂ ಶಿಬಿರಾರ್ಥಿಗಳು ಭಾಗವಹಿಸಿದ್ದರು.
