CM Siddaramaiah ವಿರೋಧ ಪಕ್ಷದವರ ಸುಳ್ಳು ಪ್ರಚಾರದಲ್ಲಿ, ಆಪಾದನೆಗಳಲ್ಲಿ ಯಾವುದೇ ಹುರುಳಿಲ್ಲ, ಸುಳ್ಳು ಸುದ್ದಿಗಳನ್ನು ಹೇಳಿ ಜನರನ್ನು ಪ್ರಚೋದಿಸಿ ಸಮಾಜದಲ್ಲಿ ಶಾಂತಿಯನ್ನು ಕದಡುವುದೇ ಅವರ ಕೆಲಸ. ಜನರು ಇದಕ್ಕೆ ಅವಕಾಶ ನೀಡದೆ ನೆಮ್ಮದಿಯ ಬದುಕು ಕಟ್ಟಿಕೊಳ್ಳಬೇಕು.
ಸಮಾಜದಲ್ಲಿ ಜಾತಿ, ಧರ್ಮಗಳನ್ನು ಒಡೆಯುವುದು, ಜನರನ್ನು ಎತ್ತಿ ಕಟ್ಟುವುದು ವಿರೋಧಪಕ್ಷದ ಕೆಲಸ. ಕುವೆಂಪು ಹೇಳಿದ ಸರ್ವ ಜನಾಂಗದ ಶಾಂತಿಯ ತೋಟ ಆಗಬೇಕು. ನಾವೆಲ್ಲರೂ ಮನುಷ್ಯರಾಗಿ ಪರಸ್ಪರ ಪ್ರೀತಿ ವಿಶ್ವಾಸಗಳಿಂದ ಬಾಳಬೇಕು ಹಾಗೂ ಸಮಾಜ ಒಡೆಯುವ ಶಕ್ತಿಗಳಿಂದ ದೂರ ಇರಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.
ಮುಖ್ಯಮಂತ್ರಿಗಳು ಮಂಡ್ಯದ ಶಿವನಸಮುದ್ರದಲ್ಲಿ ಆಯೋಜಿಸಿದ್ದ ಗಗನಚುಕ್ಕಿ ಜಲಪಾತೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದರು
CM Siddaramaiah ಕಳೆದ ಲೋಕಸಭಾ ಚುನಾವಣೆಯಿಂದ ಜೆಡಿಎಸ್ ಪಕ್ಷವು, ಬಿಜೆಪಿಯೊಂದಿಗೆ ಸೇರಿ ಬಿಟ್ಟಿದೆ. ಮುಂದೆ ಅದೇ ಪಕ್ಷದೊಂದಿಗೆ ವಿಲೀನವಾದರೂ ಆಶ್ಚರ್ಯವಿಲ್ಲ. ಕೇವಲ ನಮ್ಮ ಸರ್ಕಾರ ಮಾತ್ರ ಸಾಂವಿಧಾನಿಕ ಮೌಲ್ಯಗಳಲ್ಲಿ ನಂಬಿಕೆ ಇಟ್ಟು, ಸಾಮಾಜಿಕ ಅಸಮಾನತೆಯನ್ನು ತೊಡೆದು ಹಾಕಲು ಶ್ರಮಿಸುತ್ತಿದೆ. ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಸೌಹಾರ್ದತೆಯನ್ನು ಪ್ರತಿಪಾದಿಸುತ್ತಿದೆ.
ದ್ವೇಷ ಸಮಾಜವನ್ನು ಒಡೆಯುತ್ತದೆ, ಪ್ರೀತಿ ಮನಸುಗಳನ್ನು ಬೆಸೆಯುತ್ತದೆ. ಪರಧರ್ಮ ಸಹಿಷ್ಣುತೆಯನ್ನು ಬೆಳೆಸಿಕೊಳ್ಳಬೇಕು. ಆಗ ಮಾತ್ರ ಎಲ್ಲಾ ಧರ್ಮಗಳನ್ನು ಸಮಾನವಾಗಿ ಕಾಣಲು ಸಾಧ್ಯ ಎಂದು ಸಿದ್ಧರಾಮಯ್ಯ ಈ ಸಂದರ್ಭದಲ್ಲಿ ನುಡಿದರು.
