International Day of Democracy ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ನಗರಾಭಿವೃದ್ಧಿ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಹಾಗೂ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಹಾಗೂ ಪೊಲೀಸ್ ಇಲಾಖೆ ಶಿವಮೊಗ್ಗ ಮತ್ತು ಶಿವಮೊಗ್ಗ ಬೈಕ್ ಕ್ಲಬ್ ಇವರ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಪ್ರಯುಕ್ತ
ಏರ್ಪಡಿಸಲಾಗಿದ್ದ ರಾಜ್ಯ ಮಟ್ಟದ ಬೈಕ್ ರ್ಯಾಲಿಗೆ ಅಪರ ಜಿಲ್ಲಾಧಿಕಾರಿಗಳಾದ ಅಭಿಷೇಕ್. ವಿ. ರವರು ಭಾನುವಾರ ಬೆಳಿಗ್ಗೆ ಜಿಲ್ಲಾಡಳಿತ ಕಚೇರಿ ಮುಂಭಾಗದಲ್ಲಿ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.
ಬೈಕ್ ರ್ಯಾಲಿಯು ಶಿವಮೊಗ್ಗದಿಂದ ಬೆಂಗಳೂರಿನವರೆಗೆ ಹೋಗುತ್ತಿದ್ದು ಬೈಕ್ ಸವಾರರಿಗೆ ಅವರು ಶುಭ ಕೋರಿ, ಇದೇ ಸಂದರ್ಭದಲ್ಲಿ ಸಂವಿಧಾನ ಹಾಗೂ ಮತದಾನದ ಮಹತ್ವವನ್ನು ತಿಳಿಸಿದರು.
International Day of Democracy ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಮಲ್ಲೇಶಪ್ಪ ಡಿ, ಪತ್ರಾಂಕಿತ ವ್ಯವಸ್ಥಾಪಕರಾದ ಸೋಮಣ್ಣ, ಸಹಾಯಕ ನಿರ್ದೇಶಕರುಗಳಾದ ಸುರೇಶ್ ಕೆ.ಎನ್. ,ಅನಿಲ್, ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷರಾದ ಕೊಟ್ರೇಶ್, ಸುರೇಶ ,ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್, ಬೈಕ್ ಕ್ಲಬ್ಬಿನ ಸಂಸ್ಥಾಪಕ ಅಧ್ಯಕ್ಷರಾದ. ಆ.ನಾ. ವಿಜಯೇಂದ್ರ ರಾವ್.ಮತ್ತು ಯೂಥ್ ಹಾಸ್ಟೆಲ್ ಹಾಗೂ ರೋಟರಿ ಸದಸ್ಯರು ಉಪಸ್ಥಿತರಿದ್ದರು.
International Day of Democracy ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಶಿವಮೊಗ್ಗದಿಂದ ವಿಧಾನಸೌಧದವರೆಗೆ ಬೃಹತ್ ಬೈಕ್ ರ್ಯಾಲಿಗೆ ಚಾಲನೆ
Date:
