Department of School Education ಶಾಲಾ ಶಿಕ್ಷಣ ಇಲಾಖೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಿವಮೊಗ್ಗ ಹಾಗೂ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ, ಕುಂಸಿ, ಇವರ ಸಂಯುಕ್ತ ಆಶ್ರಯದಲ್ಲಿ ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟದಲ್ಲಿ, ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ, ಕುಂಸಿ ಬಾಲಕ, ಬಾಲಕಿಯರು ಭಾಗವಹಿಸಿ ಉತ್ತಮ ಆಟದ ಪ್ರದರ್ಶನ ನೀಡಿ, ಬಾಲಕರ ವಿಭಾಗದಲ್ಲಿ ಖೋ-ಖೋ ಮತ್ತು ಕಬ್ಬಡಿ ಯಲ್ಲಿ ಪ್ರಥಮ ಸ್ಥಾನ ಪಡೆದರೆ, ಬಾಲಕಿಯರ ವಿಭಾಗದಲ್ಲಿಯೂ ಸಹ ಖೋ-ಖೋ ಮತ್ತು ಕಬಡ್ಡಿಯಲ್ಲಿ ಉತ್ತಮ ದಾಳಿ ಅಷ್ಟೇ ರಕ್ಷಣಾತ್ಮಕ ಆಟದ ಪ್ರದರ್ಶನ ನೀಡಿ, ಶಾಲೆಗೆ ಸಮಗ್ರ ಪ್ರಶಸ್ತಿಯನ್ನು ತಂದು ಕೊಟ್ಟಿರುತ್ತಾರೆ.
ದೈಹಿಕ ಶಿಕ್ಷಣ ಶಿಕ್ಷಕರಾದ ರವಿಕುಮಾರ್ ಡಿ. ಪಿ.ಅವರಲ್ಲಿ ತರಬೇತಿಯನ್ನು ಪಡೆಯುತ್ತಿರುವುದು ಮತ್ತೊಂದು ವಿಶೇಷ.
Department of School Education ಮಕ್ಕಳ ಮುಂದಿನ ಕ್ರೀಡಾ ಜೀವನ ಯಶಸ್ವಿಯಾಗಲೆಂದು ಎಸ್.ಡಿ.ಎಂ. ಸಿ.ಅಧ್ಯಕ್ಷರು, ಮತ್ತು ಸದಸ್ಯರುಗಳು, ಮುಖ್ಯ ಶಿಕ್ಷಕರು, ಶಿಕ್ಷಕ ವೃಂದದವರು,ಊರಿನ ಗ್ರಾಮಸ್ಥರು ಶುಭ ಹಾರಿಸಿದ್ದಾರೆ.
