Monday, February 2, 2026
Monday, February 2, 2026

Shivamogga District Women and Child Development Department ಸೆ.19.ಚಿತ್ರಕಲೆ & ದೇಶಭಕ್ತಿ ಗೀತೆ ಗಾಯನ ಸ್ಪರ್ಧೆ

Date:

Shivamogga District Women and Child Development Department ಶಿವಮೊಗ್ಗ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 2025-26ನೇ ಸಾಲಿನ 79ನೇ ಸ್ವಾತಂತ್ರ ದಿನಾಚರಣೆ ಅಂಗವಾಗಿ 5-16 ವರ್ಷದೊಳಗಿನ ಮಕ್ಕಳಿಗೆ ಜಿಲ್ಲಾ ಬಾಲಭವನ ಸಮಿತಿಯಿಂದ ಸೆ.19 ರಂದು ಚಿತ್ರಕಲೆ ಮತ್ತು ದೇಶಭಕ್ತಿಗೀತೆ ಸ್ಪರ್ಧೆಯನ್ನು ಆಯೋಜಿಸಿದೆ.

ಚಿತ್ರಕಲೆ ಸ್ಪರ್ಧೆಯಲ್ಲಿ 75 ಮಕ್ಕಳಿಗೆ 3 ಗುಂಪಿನ ವರ್ಗವಾರು ಮಾಡಿದ್ದು, 5-8 ವರ್ಷದ ಮಕ್ಕಳಿಗೆ “ಶಾಲೆಯ ಪರಿಸರ”, 9-12 ವರ್ಷದ ಮಕ್ಕಳಿಗೆ “ಒಳ್ಳೆ ಸ್ಪರ್ಶ ಮತ್ತು ಕೆಟ್ಟ ಸ್ಪರ್ಶ” ಮತ್ತು 13-16 ವರ್ಷದ ಮಕ್ಕಳಿಗೆ “ಬಾಲ್ಯ ವಿವಾಹ ನಡೆಯುತ್ತಿರುವಾಗ ಅದನ್ನು ತಡೆಗಟ್ಟುವ ಚಿತ್ರಣ” ಎಂಬ ವಿಷಯಗಳಿದ್ದು, ಭಾಗವಹಿಸುವ ಮಕ್ಕಳಿಗೆ ಡ್ರಾಯಿಂಗ್ ಶೀಟ್‌ನ್ನು ಮಾತ್ರ ಕೊಡಲಾಗುತ್ತಿದ್ದು, ಇನ್ನುಳಿದ ಪರಿಕರಗಳನ್ನು ಸ್ಪರ್ಧಿಗಳೇ ತರತಕ್ಕದ್ದು.
ದೇಶಭಕ್ತಿಗೀತೆ ಸ್ಪರ್ಧೆಯು ವೈಯಕ್ತಿಕ ಸ್ಪರ್ಧೆಯಾಗಿದ್ದು, 3 ರಿಂದ 4 ನಿಮಿಷಗಳು ಇರುತ್ತದೆ. ಕನ್ನಡ ಭಾಷೆಯಲ್ಲೇ ಹಾಡಬೇಕು.

Shivamogga District Women and Child Development Department ತೀರ್ಪುಗಾರರ ತೀರ್ಮಾನವೇ ಅಂತಿಮವಾಗಿರುತ್ತದೆ.
ಆಸಕ್ತ ಮಕ್ಕಳು ಸೆ. 19 ರಂದು ಸರ್ಕಾರಿ ಪ್ರಧಾನ ಹಿರಿಯ ಪ್ರಾಥಮಿಕ ಪಾಠಶಾಲೆ, ಕರ್ನಾಟಕ ಸಂಘದ ಪಕ್ಕ, ಬಿ.ಹೆಚ್.ರಸ್ತೆ, ಶಿವಮೊಗ್ಗ ಇಲ್ಲಿ ಮಧ್ಯಾಹ್ನ 1.00 ಗಂಟೆ ಹಾಜರಿರುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಬಾಲಭವನ ಸಮಿತಿಯ ಕಾರ್ಯಕ್ರಮ ಸಂಯೋಜಕಿ ಮಂಜುಳ ಆರ್. -9353617934 ಇವರನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...