Friday, December 5, 2025
Friday, December 5, 2025

Hindustan Aeronautics Limited ನಾಲ್ಕು ವರ್ಷದ ಅವಧಿಗೆ ಏರ್ ಫ್ರೇಮ್/ ಎಲೆಕ್ಟ್ರಿಷಿಯನ್ ಹುದ್ದೆಗೆ ನೇಮಕಾತಿ ಪಡೆಯಲು ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ

Date:

Hindustan Aeronautics Limited ಹಿಂದೂಸ್ತಾನ್ ಏರೋನ್ಯಾಟಿಕ್ಸ್ ಲಿಮಿಟೆಡ್‌ನಲ್ಲಿ ಮೆಕಾನಿಕಲ್ ಎಂಜಿನಿಯರಿಂಗ್/ ಎಲೆಕ್ನಿಕಲ್ ಎಂಜಿನಿಯರಿಂಗ್ ಡಿಪ್ಲೊಮಾ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವ, 45 ವರ್ಷದೊಳಗಿನ ಸಾಮಾನ್ಯ ವರ್ಗದ ಹಾಗೂ 50 ವರ್ಷದೊಳಗಿನ ಎಸ್ಸಿ/ಎಸ್‌ಟಿ ವರ್ಗದ ಮಾಜಿ ಸೈನಿಕರುಗಳಿಗೆ ನಾಲ್ಕು ವರ್ಷಗಳ ಅವಧಿಗೆ ಏರ್‌ಪ್ರೇಮ್ / ಎಲೆಕ್ಟ್ರೀಷಿಯನ್ ಹುದ್ದೆಗೆ ನೇಮಕಾತಿ ಮಾಡಿಕೊಳ್ಳುತ್ತಿದ್ದು, ಅರ್ಹ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತರು dgrddemp@desw.gov.in- DGR ಜಾಲತಾಣದಿಂದ ಅರ್ಜಿಯನ್ನು ಡೌನ್ಲೋಡ್ ಮಾಡಿಕೊಂಡು, ಭರ್ತಿ ಮಾಡಿದ ಅರ್ಜಿಗಳನ್ನು ಎಕ್ಸೆಲ್ ಫಾರ್ಮೆಟ್‌ನಲ್ಲಿ ಜಿಲ್ಲಾ/ರಾಜ್ಯ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಗೆ soldiersshimoga@gmail.com ಇ-ಮೇಲ್ ಮೂಲಕ ಮಾತ್ರ ಕಳುಹಿಸಬಹುದಾಗಿದೆಯೆಂದು ಉಪ ನಿರ್ದೇಶಕರು (ಪ್ರಭಾರ), ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರು ತಿಳಿಸಿದ್ದಾರೆ.
Hindustan Aeronautics Limited ಹೆಚ್ಚಿನ ಮಾಹಿತಿಗಾಗಿ ದೂರವಾಣಿ 08182-220925 ಹಾಗೂಮಿಂಚಂಚೆ soldiersshimoga@gmail.com ಗೆ ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...