Rotary Club Shimoga ಉತ್ತಮ ಜೀವನಶೈಲಿಯು ಆರೋಗ್ಯಕರ ಜೀವನದ ಅಡಿಪಾಯವಾಗಿದ್ದು, ಆರೋಗ್ಯ ಅಮೂಲ್ಯ ಸಂಪತ್ತು ಎಂದು ವೈದ್ಯೆ ಡಾ. ಸೀಮಾ ಧನಂಜಯ್ ಹೇಳಿದರು.
ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಆಯೋಜಿಸಿದ್ದ ಮಹಿಳೆಯರಿಗೆ ಆರೋಗ್ಯ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ, ಪ್ರತಿಯೊಬ್ಬರೂ ಒಳ್ಳೆಯ ಆಹಾರ ಪದ್ಧತಿ ಅಳವಡಿಸಿಕೊಳ್ಳಬೇಕು. ದೈನಂದಿನ ವ್ಯಾಯಾಮ ಮತ್ತು ಅಗತ್ಯ ಇರುವಷ್ಟು ನಿದ್ರೆಯು ಆರೋಗ್ಯಕರ ಜೀವನದ ಅಡಿಪಾಯವಾಗಿದೆ ಎಂದು ತಿಳಿಸಿದರು.
ಮಹಿಳೆಯರ ಪಾತ್ರಗಳು ಮತ್ತು ಜವಾಬ್ದಾರಿ ವಿಕಸನಗೊಳ್ಳುತ್ತಿರುವ ಜಗತ್ತಿನಲ್ಲಿ ಆರೋಗ್ಯ ಮತ್ತು ಯೋಗಕ್ಷೇಮಕ್ಕೆ ಆದ್ಯತೆ ನೀಡುವುದು ಅತ್ಯುನ್ನತವಾಗಿದೆ. ನಿಯಮಿತ ಸ್ತ್ರೀರೋಗ ತಪಾಸಣೆ ಮತ್ತು ಸ್ಕ್ರೀನಿಂಗ್ಗಳು ಮಹಿಳೆಯರ ಆರೋಗ್ಯಕ್ಕೆ ಮೂಲವಾಗಿದೆ. ಆರಂಭಿಕದಲ್ಲೇ ಆರೋಗ್ಯ ಸಮಸ್ಯೆಯನ್ನು ಪತ್ತೆಹಚ್ಚಬೇಕು. ಆರೋಗ್ಯ ಸರಿ ಇದ್ದರೆ ಎಲ್ಲವನ್ನು ಸಾಧಿಸಬಹುದು ಎಂದು ಹೇಳಿದರು.
ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ ಬಸವರಾಜ್ ಬಿ ಮಾತನಾಡಿ, ರೋಟರಿ ಸಂಸ್ಥೆಯು ಅನೇಕ ಆರೋಗ್ಯ ಜಾಗೃತಿ ಶಿಬಿರಗಳನ್ನು ಹಮ್ಮಿಕೊಂಡಿದ್ದು, ಆರೋಗ್ಯವಂತ ಸಮಾಜ ನಿರ್ಮಾಣ ಮಾಡಲು ಶ್ರಮಿಸುತ್ತಿದೆ. ನಿರಂತರವಾಗಿ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ ಎಂದು ತಿಳಿಸಿದರು.
Rotary Club Shimoga ಸಂತೋಷ ಬಿ ಎ, ತರಬೇತುದಾರರಾದ ಲತಾ ಮತ್ತು ರಂಜಿತಾ, ರಾಧಾ, ವಲಯ ಸೇನಾನಿ ಕಿರಣ್ ಕುಮಾರ್ ಜಿ, ಮಾಜಿ ಸಹಾಯಕ ಗವರ್ನರ್ ರವಿ ಕೋಟೋಜಿ, ಮೋಹನ್, ಸಂತೋಷ್, ಧರ್ಮೇಂದ್ರ ಸಿಂಗ್, ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಕಾರ್ಯದರ್ಶಿ ಜಯಶೀಲಶೆಟ್ಟಿ ಹಾಗೂ ಆನ್ಸ್ ಕ್ಲಬ್ ಅಧ್ಯಕ್ಷೆ ರಾಜಶ್ರೀ ಬಸವರಾಜ್, ಮಥುರಾ ಧನಂಜಯ್ ಹಾಗೂ ತರಬೇತಿ ಪಡೆಯುತ್ತಿರುವ ಎಲ್ಲ ಮಹಿಳೆಯರು ಭಾಗವಹಿಸಿದ್ದರು.
