ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಬರುವ ಅಲೆಮಾರಿ ಸಮುದಾಯದವರಿಗೆ ಆರ್ಥಿಕ ಅಭಿವೃದ್ಧಿ ಹೊಂದಲು ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಉದ್ಯಮಶೀಲತಾ ಯೋಜನೆ, ಸ್ವಾವಲಂಭಿ ಸಾರಥೀ ಯೋಜನೆ, ಭೂ ಒಡೆತನ ಯೋಜನೆ, ಮೈಕ್ರೋ ಕ್ರೆಡಿಟ್ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕಡೆಯ ದಿನಾಂಕವನ್ನು ಸೆ. 25ರವರೆಗೆ ವಿಸ್ತರಿಸಲಾಗಿದೆ ಎಂದು ಸಮಾಜ ಕಲ್ಯಾನ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಆಸಕ್ತರು ಸೇವಾ ಸಿಂಧು ಪೋರ್ಟಲ್ ಮೂಲಕ ಕರ್ನಾಟಕ ಒನ್, ಗ್ರಾಮ ಒನ್‌ಗಳಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಪ.ಜಾ/ಪ.ಪಂಗಡಗಳ ನಿಗಮದಿಂದ ಅಲೆಮಾರಿ ಜನಾಂಗಕ್ಕೆ ವಿವಿಧ ಯೋಜನೆಗಳಡಿ ನೇರ ಸಾಲಕ್ಕೆ ಅರ್ಜಿ ಅವಧಿ ವಿಸ್ತರಣೆ
Date:
