Medical Education and Skill Development ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ದಿ ಹಾಗೂ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ್ ಆರ್.ಪಾಟೀಲ್ ಅವರು ಸೆ.20 ರ ಬೆಳಿಗ್ಗೆ 8.30 ಕ್ಕೆ ಜಿಲ್ಲೆಯ ಮಾಚೇನಹಳ್ಳಿ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ, ಕಾಲೇಜಿನ ಆಡಳಿತ ಹಾಗೂ ತಾಂತ್ರಿಕ ವಿಭಾಗಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.
2025-26 ರ ಶೈಕ್ಷಣಿಕ ವರ್ಷದಿಂದ ಪ್ರಾರಂಭವಾಗಿರುವ ಕೋರ್ಸ್ಗೆ ದಾಖಲಾದ ವಿದ್ಯಾರ್ಥಿನಿಯರಿಗೆ “ದೀಪಿಕಾ ವಿದ್ಯಾರ್ಥಿ” ವಿದ್ಯಾರ್ಥಿ ವೇತನದ ಬಗ್ಗೆ ಮಾಹಿತಿ ನೀಡಿದರು.
Medical Education and Skill Development ಈ ವೇಳೆ ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಸುರೇಶ್ ಹೆಚ್.ಎಂ, ಕಾಂಗ್ರೆಸ್ ಮುಖಂಡ ಹೆಚ್.ಸಿ.ಯೋಗೇಶ್, ಜಿಟಿಟಿಸಿ ಪ್ರಾಶುಂಪಾಲರು, ಘಟಕದ ಮುಖ್ಯಸ್ಥರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.
