Shivamogga District Amateur Boxing Association ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ, ಶಿವಮೊಗ್ಗ ಜಿಲ್ಲಾ ಅಮೆಚೂರ್ ಬಾಕ್ಷಿಂಗ್ ಅಸೋಸಿಯೇಷನ್ ಹಾಗೂ ಮೌಂಟ್ ಹಿರಾ ಪಬ್ಲಿಕ್ ಶಾಲೆ ಇವರುಗಳ ಸಂಯುಕ್ತಾಶ್ರಯದಲ್ಲಿ ಸೆ. 26 ಮತ್ತು 27 ರಂದು ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ 14 ಮತ್ತು 17 ವರ್ಷ ವಯೋಮಿತಿಯೊಳಗಿನ ರಾಜ್ಯ ಬಾಕ್ಸಿಂಗ್ ಪಂದ್ಯಾವಳಿ ಏರ್ಪಡಿಸಲಾಗಿದೆ.
ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇವರುಗಳ ಘನಉಪಸ್ಥಿತಿಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಎಸ್. ಮಧು ಬಂಗಾರಪ್ಪರವರು ಉದ್ಘಾಟಿಸಲಿದ್ದಾರೆ. ಶಿವಮೊಗ್ಗ ನಗರ ಕ್ಷೇತ್ರ ಶಾಸಕ ಎಸ್.ಎನ್. ಚನ್ನಬಸಪ್ಪರವರು ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ರಾಜ್ಯ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮದ ಅಧ್ಯಕ ಹಾಗೂ ಭದ್ರಾವತಿ ಕ್ಷೇತ್ರ ಶಾಸಕ ಬಿ.ಕೆ ಸಂಗಮೇಶ್ವರ ಮತ್ತು ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ಅಧ್ಯಕ್ಷ ಹಾಗೂ ಸಾಗರ ಕ್ಷೇತ್ರ ಶಾಸಕ ಗೋಪಾಲಕೃಷ್ಣ ಬೇಳೂರು ಇವರುಗಳು ಉಪಸ್ಥಿತರಿರಲಿದ್ದಾರೆ.
Shivamogga District Amateur Boxing Association ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನ ಸಭಾ ಮತ್ತು ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಜಿ.ಪಂ. ಸಿಇಓ, ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಮುಖ್ಯಮಂತ್ರಿಗಳ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು, ಅಧಿಕಾರಿ ವರ್ಗದವರು ಹಾಗೂ ಸಿಬ್ಬಂದಿಗಳು ಮತ್ತು ವಿವಿಧ ಸಂಘಟನೆಯ ಮುಖಂಡರು, ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಹಾಗೂ ಗಣ್ಯರು ಭಾಗವಹಿಸುವರು.
Shivamogga District Amateur Boxing Association ಸೆ.26 & 27 ಶಿವಮೊಗ್ಗದ ನೆಹರೂ ಒಳ ಕ್ರೀಡಾಂಗಣದಲ್ಲಿ 14 ರಿಂದ17 ವಯೋಮಿತಿಯವರಿಗೆ ರಾಜ್ಯ ಬಾಕ್ಸಿಂಗ್ ಪಂದ್ಯಾವಳಿ
Date:
