Bharat Scouts and Guides ಸಂಗೀತ ಕಲಿಕೆಯಿಂದ ಆತ್ಮವಿಶ್ವಾಸ ವೃದ್ಧಿಸುವ ಜತೆಯಲ್ಲಿ ಮನೋವಿಕಸನ ಸಾಧ್ಯ. ಮನುಷ್ಯನಲ್ಲಿನ ಖಿನ್ನತೆ ದೂರವಾಗುತ್ತದೆ ಎಂದು ಸುಗಮ ಸಂಗೀತ ಪರಿಷತ್ ಕಲಾವಿದೆ ಶುಭ ಹರ್ಷ ಹೇಳಿದರು.
ಭಾರತ್ ಸ್ಕೌಟ್ಸ್ ಅಂಡ್ ಗೈಡ್ ಬೇಡನ್ ಪೊವೆಲ್ ಹಾಲಿನಲ್ಲಿ ಆಯೋಜಿಸಿದ್ದ ಜಿಲ್ಲಾಮಟ್ಟದ ಗೀತ ಗಾಯನ ಸ್ಪರ್ಧೆ ಉದ್ಘಾಟಿಸಿ ಮಾತನಾಡಿ, ಸ್ಪರ್ಧೆಗಳಲ್ಲಿ ಸೋಲು ಗೆಲುವು ಮುಖ್ಯವಲ್ಲ. ಭಾಗವಹಿಸುವುದು ಅತಿ ಮುಖ್ಯ. ಇಂತಹ ವೇದಿಕೆಗಳನ್ನು ಉಪಯೋಗಿಸಿಕೊಂಡರೆ ಮಕ್ಕಳಲ್ಲಿ ಪ್ರತಿಭೆ ಅನಾವರಣಗೊಳ್ಳುತ್ತದೆ ಎಂದು ತಿಳಿಸಿದರು.
ಹಿಂದುಸ್ತಾನಿ ಗಾಯಕಿ ರೇಣುಕಾ ಕಾರಂತ್ ಮಾತನಾಡಿ, ಸಂಗೀತದಿಂದ ಧ್ವನಿ ಸಂಸ್ಕರಣೆಯಾಗುತ್ತದೆ ಹಾಗೂ ಸದಾ ಹಸನ್ಮುಖಿಗಳಾಗಿರುತ್ತೇವೆ. ಸಂಗೀತ ಅಭ್ಯಾಸದಿಂದ ಒತ್ತಡ ನಿರ್ವಹಣೆಯಾಗುತ್ತದೆ. ಬಾಲ್ಯದಿಂದಲೇ ಮಕ್ಕಳಿಗೆ ಸಂಗೀತದ ಆಸಕ್ತಿ ಬೆಳೆಸಬೇಕು ಎಂದರು.
ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯಕುಮಾರ್ ಮಾತನಾಡಿ, ಸಂಗೀತವನ್ನು ಶ್ರದ್ಧೆಯಿಂದ ಕಲಿತು ಅಭ್ಯಾಸ ಮಾಡಬೇಕು. ಇದರಿಂದ ವಿದ್ಯಾಭ್ಯಾಸಕ್ಕೂ ಸಹ ಒಳ್ಳೆಯದಾಗುತ್ತದೆ. ಪ್ರತಿ ವರ್ಷ ನಡೆಯುವ ಸ್ಪರ್ಧೆಯಲ್ಲಿ ಜಿಲ್ಲೆಯ ವಿವಿಧ ತಾಲೂಕಿನಿಂದ 150ಕ್ಕೂ ಹೆಚ್ಚು ಸ್ಕೌಟ್ಸ್ ಅಂಡ್ ಗೈಡ್ಸ್ ವಿದ್ಯಾರ್ಥಿಗಳು ವಿಶೇಷವಾಗಿದೆ ಎಂದು ತಿಳಿಸಿದರು.
ಜಿಲ್ಲಾ ಪ್ರಧಾನ ಆಯುಕ್ತೆ ಶಕುಂತಲಾ ಚಂದ್ರಶೇಖರ್ ಮಾತನಾಡಿ, ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ವಿಜೇತರಾದ ಏಳು ವಿಭಾಗದ ಮಕ್ಕಳು ರಾಜ್ಯಮಟ್ಟದಲ್ಲಿ ಭಾಗವಹಿಸಲು ಅವಕಾಶವಿರುತ್ತದೆ.
Bharat Scouts and Guides ಸಂಗೀತದಿಂದ ವಿದ್ಯಾರ್ಥಿಗಳು ಪರಿಪೂರ್ಣರಾಗುತ್ತಾರೆ. ಸಂಗೀತ, ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮಗಳು ಮಕ್ಕಳ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದರು.
ಕಾರ್ಯಕ್ರಮದಲ್ಲಿ ಗೈಡ್ ಆಯುಕ್ತೆ ಲಕ್ಷ್ಮೀ ರವಿ, ಜಂಟಿ ಕಾರ್ಯದರ್ಶಿ ವೈ.ಆರ್.ವಿರೇಶಪ್ಪ, ಮಲ್ಲಿಕಾರ್ಜುನ್ ಕಾನೂರು, ಕಾತ್ಯಾಯಿನಿ ಮತ್ತು ಸ್ಕೌಟ್ಸ್ ಅಂಡ್ ಗೈಡ್ಸಿನ ಪ್ರಮುಖರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು
