Monday, February 2, 2026
Monday, February 2, 2026

Sri Adichunchanagiri Education Trust ಏಷ್ಯನ್ ಗೇಮ್ಸ್ ಷಟಲ್ ಬ್ಯಾಡ್ಮಿಂಟನ್ಸ್ಪರ್ಧೆಯಲ್ಲಿ ಅಂಡರ್ 17 ಭಾರತ ತಂಡ ಪ್ರತಿನಿಧಿಸಲಿರುವ ಶಿವಮೊಗ್ಗದ ಅವಳಿ ಸೋದರರು

Date:

Sri Adichunchanagiri Education Trust ಷಟಲ್ ಬ್ಯಾಡ್ಮಿಂಟನ್ ನಲ್ಲಿ ಉತ್ತಮ ಸಾಧನೆ ಮಾಡಿರುವ ಪವನ್, ಪುನೀತ್, ಅವಳಿ ಸಹೋದರರು,ದೇಶದ ಪ್ರಮುಖ ಆಟಗಾರರಾಗುವ ಭರವಸೆ ಮೂಡಿಸಿದ್ದಾರೆ.

ಶಿವಮೊಗ್ಗ ನಗರದ ಪ್ರತಿಷ್ಠಿತ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟಿನ ಶಿವಮೊಗ್ಗ ಶಾಖೆಯ ಗುರುಪುರದ ಬಿಜಿಎಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಓದುತ್ತಿರುವ ಅವಳಿ ಸಹೋದರರು,10ನೇ ತರಗತಿಯಲ್ಲಿ ವ್ಯಾಸಂಗಮಾಡುತ್ತಿದ್ದು, ಆಟದ ಜೊತೆಗೆ ಓದಿನಲ್ಲಿಯೂ ಮುಂದಿದ್ದಾರೆ.

ಪುನೀತ್.ಎಸ್. ಮತ್ತು ಪವನ್.ಎಸ್. ಹರಿಯಾಣದ ಪಂಚಕುಲದಲ್ಲಿ ನಡೆದಂತಹ 17 ವರ್ಷ ವಯೋಮಿತಿಯೊಳಗಿನ ರಾಷ್ಟ್ರೀಯ ಷಟಲ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಉತ್ತಮ ಸಾಧನೆ ಮಾಡಿರುವ ಪ್ರತಿಭೆಗಳು.

ಈ ಪ್ರತಿಭಾನ್ವಿತರು ಹರಿಯಾಣದ ಪಂಚಕುಲದ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 17 ವರ್ಷ ವಯೋಮಿತಿಯೊಳಗಿನ ರಾಷ್ಟ್ರೀಯ ಡಬಲ್ಸ್ ರ‌್ಯಾಂಕಿಂಗ್ ನಲ್ಲಿ ರಾಷ್ಟ್ರ ಮಟ್ಟದ ಷಟಲ್ ಬ್ಯಾಡ್ಮಿಂಟನ್ ನಲ್ಲಿ ಭಾಗವಹಿಸಿ, ಚಾಕ ಚಕ್ಕತೆಯ ಆಟದ ಪ್ರದರ್ಶನ ನೀಡಿ, ಡಬಲ್ಸ್ ನಲ್ಲಿ ಮತ್ತು ಮಿಕ್ಸಡ ಡಬಲ್ಸ್ ನಲ್ಲಿ ಪ್ರಥಮ ಸ್ಥಾನ ಪಡೆದು.ಹಾಗೂ ಅತ್ಯಾಕರ್ಷಕ ಪಾರಿತೋಷಕ ಮತ್ತು ಬಂಗಾರದ ಪದಕವನ್ನು ಜಿಲ್ಲೆ ಮತ್ತು ರಾಜ್ಯಕ್ಕೆ ಹಾಗೂ ಸಂಸ್ಥೆಯ ಮಡಿಲಿಗೆ ತಂದು ಕೊಟ್ಟಿರುತ್ತಾರೆ.

ರಾಷ್ಟ್ರೀಯ ಷಟಲ್ ಬ್ಯಾಡ್ಮಿಂಟನ್ ಡಬಲ್ಸ್ ರ‍್ಯಾಂಕಿಂಗ್ ನಲ್ಲಿ ನಂಬರ್ ಒನ್ ಸ್ಥಾನದಲ್ಲಿದ್ದ ಚರಣ್ ರಾಮ್ ಮತ್ತು ಹರಿಕೃಷ್ಣರನ್ನು ಸೋಲಿಸಿ ರ‍್ಯಾಂಕಿಂಗ್ ಪಟ್ಟಿಯಲ್ಲಿ ನಂಬರ್ ಒನ್ ಸ್ಥಾನವನ್ನು ಪಡೆದು,ಭಾರತ ತಂಡಕ್ಕೆ ಆಯ್ಕೆಯಾಗಿರುವುದು ಹೆಮ್ಮೆಯ ಸಂಗತಿ.

ಮುಂದಿನ ತಿಂಗಳು ಅಕ್ಟೋಬರ್ 21 ರಿಂದ ಚೀನಾದಲ್ಲಿ ನಡೆಯುವ ಅಂಡರ್ 17 ವಯೋ ಮಿತಿಯೊಳಗಿನ ಏಷ್ಯನ್ ಗೇಮ್ಸ್ ಷಟಲ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಭಾರತ ತಂಡದ ಪರವಾಗಿ ಆಡಲಿದ್ದಾರೆ.

Sri Adichunchanagiri Education Trust ಈ ಪ್ರತಿಭೆಗಳು ಶಿವಮೊಗ್ಗದ ಪುರಲೆಯ ವೆಂಕಟೇಶ ನಗರದಲ್ಲಿ ವಾಸವಿರುವ ಸುರೇಶ್ ಮತ್ತು ಶಕುಂತಲಾ ದಂಪತಿಗಳ ಪುತ್ರ ರಾಗಿರುತ್ತಾರೆ. ಇವರು ಪ್ರಸ್ತುತ ಬೆಂಗಳೂರಿನ ಸೆಲೆನೈಟ್ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ, ಶ್ರೀ ಮಧುಸೂಧನ್ ಅವರ ಗರಡಿಯಲ್ಲಿ ತರಬೇತಿಯನ್ನು ಪಡೆಯುತ್ತಿದ್ದು, ಕ್ರೀಡೆಯ ಜೊತೆಗೆ ಓದಿನಲ್ಲೂ ಪ್ರತಿಭಾನ್ವಿತ ರಾಗಿರುತ್ತಾರೆ

ಈ ಕ್ರೀಡಾ ಪ್ರತಿಭೆಗಳು ರಾಷ್ಟ ಮತ್ತು ಅಂತರ್ ರಾಷ್ಟ್ರಮಟ್ಟದ ಕ್ರೀಡೆಗಳಲ್ಲಿ ಉತ್ತಮ ಸಾಧನೆ ಮಾಡಲಿ ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು, ಪೂಜ್ಯ ಶ್ರೀಶ್ರೀ ನಾದಮಯಾನಂದನಾಥ ಸ್ವಾಮೀಜಿಯವರು, ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು, ಶಾಲಾ ಕಾಲೇಜಿನ ಪ್ರಾಂಶುಪಾಲರಾದ ಸುರೇಶ್ ಎಸ್. ಎಚ್. ಹಾಗೂ ಅಧ್ಯಾಪಕ ವೃಂದದವರು, ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿಗಳು ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...