Saturday, December 6, 2025
Saturday, December 6, 2025

Sri Aurobindo Pre-University (Ind.) College ಕ್ರೀಡೆಯು ಶಿಕ್ಷಣದ ಪ್ರಮುಖ ಅಂಗ- ಎಸ್.ಚಂದ್ರಪ್ಪ

Date:

Sri Aurobindo Pre-University (Ind.) College ಜಾವಳ್ಳಿಯ ಶ್ರೀ ಅರಬಿಂದೋ ಸ್ವತಂತ್ರ ಪದವಿ ಪೂರ್ವ ಕಾಲೇಜು ಹಾಗೂ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಸಹಯೋಗದಲ್ಲಿ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ೨೦೨೫-೨೬ನೇ ಸಾಲಿನ ಕ್ರೀಡಾಕೂಟಕ್ಕೆ ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ಚಾಲನೆ ನೀಡಲಾಯಿತು.
ನಂತರ ನಡೆದ ಸಮಾರಂಭದಲ್ಲಿ ಶಿಕ್ಷಣ ಇಲಾಖೆ ಪದವಿ ಪೂರ್ವ ಕಾಲೇಜು ವಿಭಾಗದ ಉಪ ನಿರ್ದೇಶಕ ಎಸ್.ಚಂದ್ರಪ್ಪ ಅವರು ಮಾತನಾಡಿ, ಕ್ರೀಡೆಯು ಶಿಕ್ಷಣದ ಪ್ರಮುಖ ಅಂಗಗಳಲ್ಲಿ ಒಂದಾಗಿದೆ. ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವುದರಿಂದ ದೈಹಿಕ ಹಾಗೂ ಮಾನಸಿಕ ಸದಢತೆ ಕಾಯ್ದುಕೊಳ್ಳಬಹುದು. ಅಲ್ಲದೆ ಸ್ಪರ್ಧಾತ್ಮಕ ಮನೋಭಾವ ಬೆಳೆಯುತ್ತದೆ. ಕ್ರೀಡೆಯಲ್ಲಿ ಸಾಧನೆಗೆ ಸಾಕಷ್ಟು ಅವಕಾಶ ಇದ್ದು ವಿದ್ಯಾರ್ಥಿಗಳು ಸದುಪಯೋಗ ಮಾಡಿಕೊಳ್ಳಬೇಕು ಎಂದರು.
ಜಾವಳ್ಳಿಯ ಶ್ರೀ ಅರಬಿಂದೋ ಫೌಂಡೇಷನ್ ಫಾರ್ ಎಜುಕೇಷನ್ ಶೈಕ್ಷಣಿಕ ನಿರ್ದೇಶಕ ಎಚ್‌ಎನ್ ಅವರು ದ್ವಜಾರೋಹಣ ನೆರವೇರಿಸಿದರು.
ಜಿಲ್ಲಾ ಪ್ರಾಚರ‍್ಯರ ಸಂಘದ ಅಧ್ಯಕ್ಷ ಎಸ್.ಪಂಡರಿನಾಥ, ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ಎಸ್.ಯೋಗೀಶ್, ಶ್ರೀ ಅರಬಿಂದೋ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಸ್.ಎಂ.ಜೋಸೆಫ್, ರಾಜ್ಯ ಸರಕಾರಿ ನೌಕರರ ಸಂಘದ ನಿರ್ದೇಶಕ ಡಿ.ಟಿ ಶಶಿಧರ, ಶಿವಮೊಗ್ಗದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಎಫ್.ಕೆ.ಕುಟ್ರಿ, ಕ್ರೀಡಾ ಸಂಯೋಜಕ ಕೆ.ನಾಗೇಂದ್ರ ಪ್ರಸಾದ್, ವಿವಿಧ ಕಾಲೇಜಿನ ಉಪನ್ಯಾಸಕರು, ಕ್ರೀಡಾ ಪಟುಗಳು ಹಾಜರಿದ್ದರು.
Sri Aurobindo Pre-University (Ind.) College ವಿದ್ಯಾರ್ಥಿನಿ ಮೈತ್ರೇಯ ಸಂಗಡಿಗರು ಪ್ರಾರ್ಥಿಸಿ, ಉಪ ಪ್ರಾಚರ‍್ಯರಾದ ಎಂ.ಇ.ಆಶಾ ಸ್ವಾಗತಿಸಿ, ವಿಘ್ನೇಶ್ವರ ಘೋಡೆ ವಂದಿಸಿದರು.
ಫೋಟೊ ಫೈಲ್: ೨೨ಎಚ್‌ಎಚ್‌ಆರ್೧
ಹೊಳೆಹೊನ್ನೂರು ಸಮೀಪದ ಜಾವಳ್ಳಿಯ ಶ್ರೀ ಅರಬಿಂದೋ ಸ್ವತಂತ್ರ ಪದವಿ ಪೂರ್ವ ಕಾಲೇಜು ಹಾಗೂ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ವಿಭಾಗದ ಸಹಯೋಗದಲ್ಲಿ ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ೨೦೨೫-೨೬ನೇ ಸಾಲಿನ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಶಿಕ್ಷಣ ಇಲಾಖೆ ಪದವಿ ಪೂರ್ವ ಕಾಲೇಜು ವಿಭಾಗದ ಉಪ ನಿರ್ದೇಶಕ ಎಸ್.ಚಂದ್ರಪ್ಪ ಅವರನ್ನು ಅಭಿನಂದಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...