Shivamogga Police ಸೆ.14 ರಂದು ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕರ್ನಾಟಕ ಸಂಘ ಬಸ್ ನಿಲ್ದಾಣದ ಹತ್ತಿರ ಫುಟ್‌ಪಾತ್‌ನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿದ್ದ ಸುಮಾರು 45-50 ವರ್ಷ ವ್ಯಕ್ತಿಯನ್ನು ಸಾರ್ವಜನಿಕರ ಸಹಾಯದಿಂದ ಆಂಬ್ಯುಲೆನ್ಸ್ ಮೂಲಕ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ಪರೀಕ್ಷಿಸಿದ ವೈದ್ಯರು ವ್ಯಕ್ತಿ ಮೃತ ಪಟ್ಟಿರುವುದಾಗಿ ತಿಳಿಸಿರುತ್ತಾರೆ. ಮೃತರ ಹೆಸರು, ವಿಳಾಸ, ವಾರಸುದಾರರ ಬಗ್ಗೆ ಯಾವುದೇ ಸುಳಿವು ಇರುವುದಿಲ್ಲ.
ಮೃತನ ಚಹರೆ 6 ಅಡಿ ಎತ್ತರ, ಕೋಲು ಮುಖ, ಕಪ್ಪು ಮೈಬಣ್ಣ, ತೆಳ್ಳನೆಯ ಮೈಕಟ್ಟು, ಎಡ ಎದೆಯ ಮೇಲ್ಭಾಗ ರಾಗಿಕಾಳು ಗಾತ್ರದ ಕಪ್ಪು ಮಚ್ಚೆ ಮತ್ತು ತಲೆಯಲ್ಲಿ 4 ಇಂಚು ಉದ್ದದ ಕಪ್ಪು ಕೂದಲು ಇರುತ್ತದೆ. ಮೈ ಮೇಲೆ ಬೂದು ಬಣ್ಣದ ತುಂಬು ತೋಳಿನ ಶರ್ಟ್, ಬೂದು ಕಂದು ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾರೆ.
Shivamogga Police ಈ ಮೃತನ ವಾರಸುದಾರರ ಬಗ್ಗೆ ಸುಳಿವು ದೊರೆತಲ್ಲಿ ಕೋಟೆ ಪೊಲೀಸ್ ಠಾಣೆ ಪೋ.ನಂ.: 08182-261415 ನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.
Shivamogga Police ಅನಾಮಧೇಯ ವ್ಯಕ್ತಿಯ ಶವ ಪತ್ತೆ. ಕೋಟೆ ಪೊಲೀಸ್ ಠಾಣೆ ಮಾಹಿತಿ ಪ್ರಕಟಣೆ
Date:
