Monday, February 2, 2026
Monday, February 2, 2026

Madhu Bangarappa ಮನರಂಜನೆ ಜೊತೆ ಸಾಮಾಜಿಕ ಹಿತದ ಸಂದೇಶ ನೀಡುವ ಚಿತ್ರಗಳು ನಿರ್ಮಾಣವಾಗಬೇಕು- ಮಧು ಬಂಗಾರಪ್ಪ

Date:

Madhu Bangarappa ರಾಜಕಾರಣದಲ್ಲಿ ಯಾರಿಗೂ ತಿಳಿಯದಂತೆ ಜಾತಿ, ಧರ್ಮದ ಸೋಂಕು ತಗುಲಿದೆ. ಇಂತಹ ಕಳಂಕಗಳಿಗೆ ಚಿತ್ರರಂಗ ಹೊರಬಂದು ಮನೋರಂಜನೆಯ ಜೊತೆಗೆ ಸಾಮಾಜಿಕ ಹಿತದ ಸಂದೇಶ ನೀಡುವ ರಚನಾತ್ಮಕ ಚಿತ್ರಗಳು ನಿರ್ಮಾಣಗೊಳ್ಳಬೇಕು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಅವರು ಹೇಳಿದರು. ಅವರು ಶಿವಮೊಗ್ಗ ಮಹಾನಗರಪಾಲಿಕೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಶಿವಮೊಗ್ಗ ಬೆಳ್ಳಿಮಂಡಲ, ಸಿನಿಮೊಗೆ, ಶಿವಮೊಗ್ಗ ಚಿತ್ರಸಮಾಜ ಇವರುಗಳ ಸಂಯುಕ್ತಾಶ್ರಯದಲ್ಲಿ ನಗರದ ಡಾ|| ಬಿ.ಆರ್.ಅಂಬೇಡ್ಕರ್‌ಭವನದಲ್ಲಿ ಏರ್ಪಡಿಸಲಾಗಿದ್ದ ದಸರಾ ಚಲನಚಿತ್ರೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಚಿತ್ರರಂಗದಲ್ಲಿ ಇಂದು ಸಾಕಷ್ಟು ಸಮಸ್ಯೆ-ಸವಾಲುಗಳ ನಡುವೆಯೂ ಹಲವು ತಜ್ಞರ, ಪರಿಣಿತರು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವುದರ ಕಾರಣದಿಂದಾಗಿ ರಾಜ್ಯದಲ್ಲಿ ಚಿತ್ರರಂಗ, ಚಿತ್ರಮಂದಿರಗಳು ಜೀವಂತವಾಗಿವೆ. ಇಲ್ಲದಿದ್ದಲ್ಲಿ ಪಳಿಯುಳಿಕೆಗಳಾಗಿ ನೋಡಬೇಕಾಗಿತ್ತು. ಇಂತಹ ಅನೇಕ ಕಾರಣಗಳಿಂದಾಗಿ ಅತ್ಯಾಧುನಿಕ ತಂತ್ರಜ್ಞಾನಾಧಾರಿತ ಚಿತ್ರರಂಗಕ್ಕೆ ಸಂಬಂಧಿಸಿದ ಯಂತ್ರೋಪಕರಣಗಳು ರಾಜ್ಯದಲ್ಲಿಯೇ ನೋಡುವಂತಾಗಿದೆ.

ಇದಕ್ಕೂ ಮುನ್ನ ರಾಜ್ಯದ ಚಲನಚಿತ್ರದ ನಿರ್ಮಾಪಕರು ತಮ್ಮ ಅಗತ್ಯಗಳಿಗಾಗಿ ಮಡ್ರಾಸ್‌ಗೆ ಹೋಗಬರಬೇಕಾಗುತ್ತಿತ್ತು ಎಂದ ಅವರು, ಚಿತ್ರರಂಗದಲ್ಲಿ ನಿರ್ಮಾಪಕರಾಗಿ, ಅತ್ಯಾಧುನಿಕ ತಂತ್ರಜ್ಞಾನ ಹೊಂದಿದ್ದ ಆಕಾಶ್‌ಆಡಿಯೋ ಸ್ಥಾಪಿಸಿದ್ದ ಕ್ಷಣಗಳನ್ನು ನೆನಪಿಸಿಕೊಂಡರು. ಪ್ರತಿ ವ್ಯಕ್ತಿಯೂ ತಾನು ತನ್ನ ಕಾರ್ಯಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಮಾಡುವ ಕಾರ್ಯದಿಂದ ಜನಮಾನಸದಲ್ಲಿ ಶಾಶ್ವತವಾಗಿ ಉಳಿದುಕೊಳ್ಳುತ್ತಾನೆ ಎಂಬುದಕ್ಕೆ ನಟರೇ ಸಾಕ್ಷಿ ಎಂದ ಅವರು, ಶಿವಮೊಗ್ಗ ಜಿಲ್ಲೆ ಕಲೆ, ಸಾಹಿತ್ಯ, ಸಂಗೀತ, ನೃತ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆ ಅಪಾರವಾಗಿದೆ. ಕವಿ-ಕಲಾವಿದರನ್ನು ಉಳಿಸಿ-ಬೆಳೆಸುವ, ಅನುಸರಿಸುವ ಹೊಣೆಗಾರಿಕೆ ಎಲ್ಲರದ್ದಾಗಿದೆ ಎಂದರು.

ದೇವಾಲಯಗಲ್ಲಿನ ಗಂಟೆ ಸದ್ದಿಗಿಂತ ಶಾಲೆಗಳಲ್ಲಿ ಮೊಳಗುವ ಗಂಟೆ ಸದ್ದು ದೇಶವನ್ನು ಕಟ್ಟುವ ಯುವ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಿ ರೂಪಿಸುತ್ತದೆ. ಅದು ಸಾಮಾಜಿಕವಾಗಿ ಸ್ಥಾನಮಾನ ಹೊಂದಲು ಶಿಕ್ಷಣ ಸಹಕಾರಿಯಾಗಿದೆ. ಎಂದ ಅವರು, ಶಿವಮೊಗ್ಗ ದಸರಾ ಅಂಗವಾಗಿ ಚಿತ್ರರಂಗದ ಹಲವು ಘಟನಾವಳಿಗಳನ್ನಾಧರಿಸಿದ ಅತ್ಯರೂಪದ ಛಾಯಾಚಿತ್ರಗಳನ್ನು ಒಳಗೊಂಡ ಛಾಯಾಚಿತ್ರ ಪ್ರದರ್ಶನ ಅತ್ಯಂತ ವಿಶೇಷವೆನಿಸಿದೆ ಎಂದರು.

Madhu Bangarappa ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಮಾತನಾಡಿ, ರಾಜ್ಯ ಸರ್ಕಾರದ 50ಲಕ್ಷ ರೂ.ಗಳ ಆರ್ಥಿಕ ನೆರವಿನೊಂದಿಗೆ ಸುಮಾರು 2.50ಕೋಟಿ ರೂ.ಗಳ ವೆಚ್ಚದಲ್ಲಿ ಶಿವಮೊಗ್ಗ ದಸರಾವನ್ನು ಅತ್ಯಂತ ಸಂಭ್ರಮ-ಸಡಗರಗಳಿಂದ ಆಚರಿಸಲಾಗುತ್ತಿದೆ. ಈ ದಸರಾ ಅಂಗವಾಗಿ ಏರ್ಪಡಿಸಲಾಗುತ್ತಿರುವ ಅನೇಕ ವೇದಿಕೆಗಳಲ್ಲಿ ಸಹಸ್ರಾರು ಸಂಖ್ಯೆಯ ಕಲಾವಿದರಿಗೆ, ಪ್ರತಿಭಾವಂತರಿಗೆ, ಗಣ್ಯರಿಗೆ ವೇದಿಕೆ ದೊರೆಯಲಿದೆ ಎಂದರು.

ಹಲವು ಸಮಸ್ಯೆ-ಸವಾಲುಗಳಿಂದಾಗಿ ಬೆಳ್ಳಿ ತೆರೆ ತನ್ನ ಮಹತ್ವವನ್ನು ಕಳೆದುಕೊಂಡು ಸೊರಗುತ್ತಿರುವುದು ಅತ್ಯಂತ ನೋವಿನ ಸಂಗತಿ. ಕಲೆಯನ್ನು ಪ್ರೋತ್ಸಾಹಿಸುವ, ಕಲಾವಿದರನ್ನು ಪೋಷಿಸುವ ಮನಸ್ಸುಗಳ ತುರ್ತು ಅಗತ್ಯವಿದೆ ಎಂದು ಹಾಸ್ಯ ನಟ ಶರಣ್‌ ಅವರು ತಿಳಿಸಿದರು.

ವಿಶ್ವದ ಭೂಪಟದಲ್ಲಿ ಗುರುತಿಸಿಕೊಳ್ಳಬಹುದಾದ ಜಿಲ್ಲೆ ಶಿವಮೊಗ್ಗ. ಕಲೆ, ಸಾಹಿತ್ಯ, ಸಿನಿಮಾ, ರಂಗಭೂಮಿ, ರಾಜಕಾರಣ ಹೀಗೆ ಹಲವು ಕ್ಷೇತ್ರಗಳಿಗೆ ಶಿವಮೊಗ್ಗ ಜಿಲ್ಲೆಯ ಕೊಡುಗೆ ಅಪಾರ ಎಂದು ಚಲನಚಿತ್ರ ನಟಿ ಕಾರಣ್ಯರಾಮ್‌ ಅವರು ಹೇಳಿದರು.

ಸಮಾರಂಭದಲ್ಲಿ ಸೂಡಾ ಅಧ್ಯಕ್ಷ ಎಸ್.ಹೆಚ್.ಸುಂದರೇಶ್‌, ಪಾಲಿಕೆ ಆಯುಕ್ತ ಮಾಯಣ್ಣಗೌಡ, ಶ್ರೀಮತಿ ರೇಖಾ ರಂಗನಾಥ್‌, ನಾಗರಾಜ ಕಂಕಾರಿ, ವಿಶ್ವಾಸ್‌, ಬಿಂಬಶ್ರೀ, ಫಾಲಾಕ್ಷಿ, ಕೃಪಾಕರ, ಅಚ್ಯತ ನಾರಾಯಣ್‌ಮತ್ತಿತರರು ಉಪಸ್ಥಿತರಿದ್ದರು. ಉದ್ಘಾಟನಾ ಕಾರ್ಯಕ್ರಮದ ನಂತರ ರಸಗ್ರಹಣ ಶಿಬಿರವನ್ನು ಏರ್ಪಡಿಸಲಾಗಿತ್ತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...