Sahyadri Arts College ತಂತ್ರಜ್ಞಾನ ಯುಗದಲ್ಲಿ ಹೊಸ ಆವಿಷ್ಕಾರಗಳು ನಿರಂತರ ನಡೆಯುತ್ತಿದ್ದು, ವಿದ್ಯಾರ್ಥಿಗಳು ಮಾಹಿತಿ ತಂತ್ರಜ್ಞಾನ, ಅಂತರ್ಜಾಲ ಮತ್ತು ಸೈಬರ್ ಸೆಕ್ಯೂರಿಟಿ ಬಗ್ಗೆ ಮಾಹಿತಿ ಹೊಂದಿರಬೇಕು ಎಂದು ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷ ಜಿ.ವಿ.ಗಣೇಶ್ ಹೇಳಿದರು.
ಜೆಸಿಐ ಸಹ್ಯಾದ್ರಿ ಘಟಕದ ವತಿಯಿಂದ ಸಹ್ಯಾದ್ರಿ ಕಲಾ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾದ ತಂತ್ರಜ್ಞಾನ ಸೈಬರ್ ಸೆಕ್ಯೂರಿಟಿ ಅಂತರ್ಜಾಲದ ಬಗ್ಗೆ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿಗಳು ಓದಿನ ಜತೆಯಲ್ಲಿ ಹೊಸ ಕೌಶಲ್ಯಗಳನ್ನು ಕಲಿಯಬೇಕು. ಜೆಸಿಐ ಸಂಸ್ಥೆ ವತಿಯಿಂದ ಈ ರೀತಿ ಹಲವಾರು ಕಾರ್ಯಕ್ರಮಗಳನ್ನು ಶಾಲಾ ಕಾಲೇಜುಗಳಲ್ಲಿ ನಿರಂತರವಾಗಿ ಹಮ್ಮಿಕೊಳ್ಳುತ್ತಿದ್ದೇವೆ ಎಂದು ತಿಳಿಸಿದರು.
ಜೆಸಿಐನಲ್ಲಿ ನಡೆಯುವ ತರಬೇತಿ ಕಾರ್ಯಕ್ರಮಗಳು ವಿದ್ಯಾರ್ಥಿಗಳಿಗೆ ಭವಿಷ್ಯದಲ್ಲಿ ಅನುಕೂಲ ಒದಗಿಸುತ್ತವೆ. ಇದರಿಂದ ಆತ್ಮವಿಶ್ವಾಸ ವೃದ್ಧಿಯಾಗುವುದಲ್ಲದೆ ಉತ್ತಮ ವ್ಯಕ್ತಿತ್ವ ರೂಪುಗೊಳ್ಳುತ್ತದೆ ಎಂದು ಹೇಳಿದರು.
ನಿಯೋಜಿತ ರಾಷ್ಟ್ರೀಯ ತರಬೇತುದಾರ ಮೋಹನ್ ಕಲ್ಪತರು ಮಾತನಾಡಿ, ಜೆಸಿಐ ಸಪ್ತಾಹದ ಅಂಗವಾಗಿ ಹಮ್ಮಿಕೊಳ್ಳಲಾದ ಇಂತಹ ಕಾರ್ಯಕ್ರಮಗಳು ನಿಜಕ್ಕೂ ಅರ್ಥಪೂರ್ಣವಾಗಿದೆ. ವಿದ್ಯಾರ್ಥಿಗಳು ಓದಿನ ಜೊತೆಗೆ ಕೌಶಲ್ಯವನ್ನು ಬೆಳೆಸಿಕೊಳ್ಳಬೇಕು. ವೃತ್ತಿಗಳಲ್ಲಿ ವಿಶೇಷ ಸಾಧನೆ ಮಾಡಲು ಬದುಕಿನ ಕಲೆ ಹಾಗೂ ವೃತ್ತಿ ಕೌಶಲ್ಯ, ಅಂತರ್ಜಾಲ ಬಳಸುವ ರೀತಿ ಹಾಗೂ ಹೊಸ ಆಪ್‌ಗಳನ್ನು ಯಾವ ರೀತಿ ಬಳಸಬೇಕು ಎನ್ನುವುದನ್ನು ಅರಿತಿರಬೇಕು ಎಂದರು.
Sahyadri Arts College ಮೊಬೈಲ್‌ನಲ್ಲಿ ಸಂಪೂರ್ಣ ಕಾರ್ಯನಿರ್ವಹಣೆ ಸಾಧ್ಯವಿದ್ದು, ನಮ್ಮ ಬ್ಯಾಂಕ್ ಖಾತೆಗಳನ್ನು ಸಹ ಅಷ್ಟೇ ಸುರಕ್ಷಿತವಾಗಿ ಕಾಪಾಡಿಕೊಳ್ಳಬೇಕು. ಅದರ ಬಗ್ಗೆ ಸಮಗ್ರ ಮಾಹಿತಿ ತಿಳಿದುಕೊಳ್ಳುವುದು ಅತ್ಯಂತ ಅವಶ್ಯಕ. ಈಗಾಗಲೇ ಸಾಕಷ್ಟು ಜನರು ಸೈಬರ್ ಸೆಕ್ಯೂರಿಟಿ ಇಲ್ಲದೆ ನೂರಾರು ಕೋಟಿ ರೂ. ಹಣ ಕಳೆದುಕೊಂಡಿರುವುದು ಮಾಧ್ಯಮದಲ್ಲಿ ನೋಡುತ್ತಿದ್ದೇವೆ ಎಂದು ತಿಳಿಸಿದರು.
ಪ್ರತಿಯೊಬ್ಬರೂ ಸಹ ಬದಲಾದ ತಂತ್ರಜ್ಞಾನಕ್ಕೆ ನಮ್ಮನ್ನು ತೊಡಗಿಸಿಕೊಳ್ಳಬೇಕು. ಹೊಸ ಹೊಸ ವಿದ್ಯಮಾನಗಳನ್ನು ಆಸಕ್ತಿಯಿಂದ ಕಲಿಯಬೇಕು. ಜೆಸಿಐನಂತಹ ತರಬೇತಿ ಕಾರ್ಯಗಾರಗಳು ವಿದ್ಯಾರ್ಥಿಗಳಿಗೆ ತುಂಬಾ ಪರಿಣಾಮಕಾರಿಯಾಗಿ ಉಪಯೋಗವಾಗುತ್ತವೆ ಎಂದರು.
ಸಹ್ಯಾದ್ರಿ ಕಾಲೇಜಿನ ಉಪನ್ಯಾಸಕ ಮಂಜುನಾಥ್ ಮಾತನಾಡಿ, ಡಿಜಿಟಲ್ ಲಿಟರಸಿ ಇಂದಿನ ಮಕ್ಕಳಿಗೆ ಬಹಳ ಅಗತ್ಯವಿದೆ ಎಂದು ತಿಳಿಸಿದರು. ಉಪನ್ಯಾಸಕ ಮಹದೇವ್ ಹಾಗೂ ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿಗಳು ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.
Sahyadri Arts College ಮಾಹಿತಿ ತಂತ್ರಜ್ಞಾನ, ಅಂತರ್ಜಾಲ & ಸೈಬರ್ ಸೆಕ್ಯೂರಿಟಿಗೆ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವಿರಬೇಕು- ಜಿ.ವಿ.ಗಣೇಶ್
Date:
