Shivamogga Dasara ಶಿವಮೊಗ್ಗ ದಸರಾ ಪ್ರಯುಕ್ತ ಆಹಾರ ದಸರಾ ಸಮಿತಿ ವತಿಯಿಂದ ನಗರದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ.
ಸೆ.28 ರಂದು ಸಂಜೆ 6 ಗಂಟೆಗೆ, ಅಲ್ಲಮಪ್ರಭು ಮೈದಾನ(ಫ್ರೀಡಂ ಪಾರ್ಕ್)ನಲ್ಲಿ ಆಹಾರ ಮೇಳ – ಸುಮಾರು 40 ಸ್ಟಾಲ್‌ಗಳನ್ನು ನಿರ್ಮಿಸಿ ಜಿಲ್ಲೆಯ ವಿವಿಧ ಖಾದ್ಯಗಳ ಪ್ರದರ್ಶನ ಮತ್ತು ಮಾರಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. Shivamogga Dasara ಸೆ.29 ರಂದು ಬೆಳಗ್ಗೆ 10.30ಕ್ಕೆ ಶಿವಪ್ಪ ನಾಯಕ ಸರ್ಕಲ್‌ನಲ್ಲಿ ಮೆಸ್ಕಾಂ ಇಲಾಖೆ ಹಾಗೂ ಸಾರ್ವಜನಿಕರಿಗೆ ಇಡ್ಲಿ ಸಾಂಬಾರ್ ಮತ್ತು ಹಣ್ಣು ತಿನ್ನುವ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ಸೆ.30ರಂದು ಬೆಳಿಗ್ಗೆ 10.30ಕ್ಕೆ ವೀರಶೈವ ಕಲ್ಯಾಣ ಮಂಟಪದಲ್ಲಿ ಆರೋಗ್ಯಕರ ತಿನಿಸನ್ನು ತಯಾರಿಸುವ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದು ಆಹಾರ ದಸರಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.
Shivamogga Dasara ಸೆ.28 “ಎಷ್ಟು ಇಡ್ಲಿ ತೀತೀರಿ? ಎಷ್ಟು ಹಣ್ಣು ತಿಂತೀರಿ?” ಸ್ಪರ್ಧೆ. ತಿಂಡಿಪೋತರಿಗೆ ,ಹಣ್ಣುಬಾಕರಿಗೆ ಅವಕಾಶ
Date:
