Saturday, December 6, 2025
Saturday, December 6, 2025

Italian Aerospace and Space Delegation ಬಾಹ್ಯಾಕಾಶ ನೀತಿಯ ಪ್ರಮುಖ ಅಂಶಗಳಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ-ಪ್ರಮೋದ್ ಎಲ್.ಪಾಟೀಲ್

Date:

Italian Aerospace and Space Delegation ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರಕ್ಕೆ ಇಟಲಿ – ಭಾರತ ಬಾಹ್ಯಾಕಾಶ, ಏರೋಸ್ಪೇಸ್ ಮತ್ತು ರಕ್ಷಣಾ ರೋಡ್ ಶೋ ಭಾಗವಾಗಿ ಇಟಾಲಿಯನ್ ಏರೋಸ್ಪೇಸ್ ಮತ್ತು ಬಾಹ್ಯಾಕಾಶ ನಿಯೋಗವು 2025 ನೇ ಸೆಪ್ಟೆಂಬರ್ 24 ರಂದು ಭೇಟಿ ನೀಡಿತು.

ಭೇಟಿಯ ಸಮಯದಲ್ಲಿ ಕರ್ನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರದ ನಿರ್ದೇಶಕರಾದ ಡಾ.ರಾಜೇಶ್ ಎನ್.ಎಲ್. ಅವರು ಕೇಂದ್ರದ ಧ್ಯೇಯ, ಮುಂದುವರೆದ ಸಾಮರ್ಥ್ಯಗಳು, ಬೆಳೆ ಮೇಲ್ವಿಚಾರಣೆ ಹಾಗೂ ವಿಪತ್ತು ನಿರ್ವಹಣೆಯಿಂದ ನಗರ ಯೋಜನೆ ಮತ್ತು ನೈಸರ್ಗಿಕ ಸಂಪನ್ಮೂಲ ನಿರ್ವಹಣೆವರೆಗೆ ಬಾಹ್ಯಾಕಾಶ ಆಧಾರಿತ ಆಡಳಿತ ಮತ್ತು ಸುಸ್ಥಿರ ಅಭಿವೃದ್ಧಿಯಲ್ಲಿ ವೈವಿಧ್ಯಮಯ ಅನ್ವಯಿಕೆಗಳನ್ನು ಪ್ರಸ್ತುತಪಡಿಸಿದರು.

ಕಿಟ್ಸ್ ಸಂಸ್ಥೆಯ ಪ್ರಧಾನ ವ್ಯವಸ್ಥಾಪಕರಾದ ಪ್ರಮೋದ್ ಎಲ್.ಪಾಟೀಲ್ ಅವರು, ಕರಡು ಕರ್ನಾಟಕ ಬಾಹ್ಯಾಕಾಶ ನೀತಿಯ ಪ್ರಮುಖ ಅಂಶಗಳನ್ನು ಹಂಚಿಕೊಂಡು ಜಾಗತಿಕ ಸಾಮರ್ಥ್ಯ ಕೇಂದ್ರಗಳಲ್ಲಿ ಕರ್ನಾಟಕವು ಮುಂಚೂಣಿಯಲ್ಲಿರುವುದನ್ನು ತಿಳಿಸಿದರು.

ಕರ್ನಾಟಕ ಸರ್ಕಾರದ ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಗ್ಲೋಬಲ್ ಇನ್ನೋವೇಶನ್ ಅಲೈಯನ್ಸ್ (ಜಿಐಎ) ಅಡಿಯಲ್ಲಿ ಸುಗಮಗೊಳಿಸಲಾದ ಈ ಕಾರ್ಯಕ್ರಮವು ಬಾಹ್ಯಾಕಾಶ ಅನ್ವಯಿಕೆಗಳು, ಏರೋಸ್ಪೇಸ್ ತಂತ್ರಜ್ಞಾನಗಳು ಮತ್ತು ರಕ್ಷಣಾ ನಾವೀನ್ಯತೆಗಳಲ್ಲಿ ಸಹಯೋಗವನ್ನು ಬಲಪಡಿಸುವ ಗುರಿಯನ್ನು ಹೊಂದಿದೆ.

ಜಂಟಿ ಸಂಶೋಧನೆ, ಶೈಕ್ಷಣಿಕ ಸಂಪರ್ಕಗಳು ಮತ್ತು ಪ್ರತಿಭಾ ವಿನಿಮಯದಲ್ಲಿ ಭಾರತ – ಇಟಲಿ ಸಹಕಾರವನ್ನು ವೃದ್ಧಿಸುವುದು, ಮಾರುಕಟ್ಟೆ ಪ್ರವೇಶ, ಸಹ ಅಭಿವೃದ್ಧಿ, ಕೈಗಾರಿಕೆ ಸಂಶೋಧನೆ ಮತ್ತು ಅಭಿವೃದ್ಧಿಗಾಗಿ ಅವಕಾಶಗಳನ್ನು ತೆರೆಯುವುದು ಹಾಗೂ ಬಾಹ್ಯಾಕಾಶ, ನಾವೀನ್ಯತೆ ಮತ್ತು ತಂತ್ರಜ್ಞಾನ ನೇತೃತ್ವದ ಬೆಳವಣಿಗೆಯಲ್ಲಿ ಕರ್ನಾಟಕವನ್ನು ಇಟಲಿಗೆ ಕಾರ್ಯತಂತ್ರದ ಪಾಲುದಾರರನ್ನಾಗಿ ಸ್ಥಾನೀಕರಿಸುವುದಕ್ಕೆ ಸಂಬಂಧಿಸಿದ ಪ್ರಮುಖ ಅಂಶಗಳ ಬಗ್ಗೆ ಪ್ರಸ್ತಾಪಿಸಲಾಯಿತು.

ಈ ಭೇಟಿಯು ಭಾರತ – ಇಟಲಿಯ ಪಾಲುದಾರಿಕೆಯನ್ನು ಮುನ್ನಡೆಸುವಲ್ಲಿ ಒಂದು ಪ್ರಮುಖ ಮೈಲಿಗಲ್ಲನ್ನು ಗುರುತಿಸುವುದಲ್ಲದೇ ಬಾಹ್ಯಾಕಾಶ ಮತ್ತು ಬಾಹ್ಯಾಕಾಶ ನಾವೀನ್ಯತೆಯಲ್ಲಿ ಜಾಗತಿಕ ಕೇಂದ್ರವಾಗಿ ಕರ್ನಾಟಕದ ಪಾತ್ರವನ್ನು ಬಲಪಡಿಸಲಿದೆ.

Italian Aerospace and Space Delegation ನಿಯೋಗದಲ್ಲಿ ಇಟಾಲಿಯನ್ ಬಾಹ್ಯಾಕಾಶ ಸಂಸ್ಥೆಯ ಉಪನಿರ್ದೇಶಕರಾದ ಮಾರಿಯಾ ಚಿಯಾರಾ ನೊಟೊ, ನವದೆಹಲಿಯ ಇಟಲಿಯ ವ್ಯಾಪಾರ ಆಯುಕ್ತರಾದ ಆಂಟೋನಿಯೆಟ್ಟಾ ಬಕ್ಕನಾರಿ, ಬೆಂUಳೂರಿನಲ್ಲಿನ ಇಟಲಿಯ ಕಾನ್ಸುಲ್ ಜನರಲ್ ಜಿಯಾಂಡೊಮೆನಿಕೊ ಮಿಲಾನೊ ಹಾಗೂ ಇಟಲಿಯ ಬಾಹ್ಯಾಕಾಶ ಮತ್ತು ಬಾಹ್ಯಾಕಾಶ ಕ್ಷೇತ್ರದ ಪ್ರತಿಷ್ಠಿತ ಕಂಪನಿಗಳು ಭಾಗವಹಿಸಿದ್ದವು ಎಂದು ಕನಾಟಕ ರಾಜ್ಯ ದೂರ ಸಂವೇದಿ ಅನ್ವಯಿಕ ಕೇಂದ್ರದ ನಿರ್ದೇಶಕರಾದ ಡಾ.ರಾಜೇಶ್ ಎನ್.ಎಲ್. ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...