Thursday, June 18, 2026
Thursday, June 18, 2026

ಶಿವಮೊಗ್ಗದಲ್ಲಿ ಭತ್ತಕ್ಕೆ ಬೆಂಬಲ ಬೆಲೆ ಖರೀದಿ ಫಿಕ್ಸ್: ಕ್ವಿಂಟಾಲ್ ಬೆಲೆ ಎಷ್ಟು? ವಿವರಗಳಿಗೆ ಮಾಹಿತಿ ಓದಿ.

Date:

2025-26 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಟ ಬೆಂಬಲಬೆಲೆ ಯೋಜನೆಯಡಿ ರಾಜ್ಯದ ರೈತರಿಂದ ಕೇಂದ್ರ ಸರ್ಕಾರವು ಭತ್ತವನ್ನು ಖರೀದಿಸಲು ಮುಂದಾಗಿದ್ದು, ಸಾಮಾನ್ಯ ಭತ್ತ ಪ್ರತಿ ಕ್ವಿಂಟಾಲ್‌ಗೆ ರೂ.2369 ಹಾಗೂ ಗ್ರೇಡ್ ಎ ಭತ್ತ ಪ್ರತಿ ಕ್ವಿಂಟಾಲ್‌ಗೆ ರೂ. 2389 ದರವನ್ನು ನಿಗದಿಪಡಿಸಲಾಗಿದೆ.

ಜಿಲ್ಲಾ ರೈತರಿಂದ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿಸಲು ಕರ್ನಾಟಕ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಮತ್ತು ನಿಗಮದ ವತಿಯಿಂದ TAPCMS/PACS/FPOs/ಉಪ ಏಜೆನ್ಸಿಗಳನ್ನು ನೇಮಿಸಲಾಗಿದೆ. ರೈತರಿಂದ ಪ್ರತಿ ಎಕರೆಗೆ 25 ಕ್ವಿಂಟಾಲ್ ನಂತೆ ಗರಿಷ್ಟ 50 ಕ್ವಿಂಟಾಲ್ ಭತ್ತವನ್ನು ಖರೀದಿಸಲಿದ್ದು, ಜಿಲ್ಲೆಯ ಎಲ್ಲಾ 7 ತಾಲ್ಲೂಕುಗಳ ಎಪಿಎಂಸಿ ಯಾರ್ಡ್ ಗಳಲ್ಲಿರುವ ಕೆಎಫ್‌ಸಿಎಸ್‌ಸಿ (KFCSC) ಸಗಟು ಮಳಿಗೆಗಳಲ್ಲಿ ಭತ್ತ ಖರೀದಿ ಕೇಂದ್ರ ತೆರೆಯಲಾಗಿದೆ.

ಭತ್ತವನ್ನು ನೊಂದಾಯಿಸಿಕೊಳ್ಳಲು ಅ.31 ಕೊನೆಯ ದಿನಾಂಕವಾಗಿದ್ದು, ರೈತರು ಕೃಷಿ ಇಲಾಖೆಯಿಂದ ಜಾರಿಗೊಳಿಸಿರುವ ಪ್ರೂಟ್ಸ್ ಐಡಿಯೊಂದಿಗೆ ಖರೀದಿ ಕೇಂದ್ರಗಳಲ್ಲಿ ನೊಂದಾಯಿಸಬೇಕು. ನ.1 ರಿಂದ ಫೆ 28 ರವರೆಗೆ ಭತ್ತವನ್ನು ಖರೀದಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...