Friday, March 20, 2026
Friday, March 20, 2026

Canara Bank Rural Self Employment Training Institute ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕೆನರಾ ಬ್ಯಾಂಕ್ ಸ್ವ- ಉದ್ಯೋಗ ತರಬೇತಿ ಕೇಂದ್ರದಲ್ಲಿ ಮಹಿಳೆಯರಿಗೆ ಉಚಿತ ಪ್ರವೇಶ ಮಾಹಿತಿ

Date:

Canara Bank Rural Self Employment Training Institute ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ದಿ.06/10/2025 ರಿಂದ 35 ದಿನಗಳ ಕಾಲ ನಿರುದ್ಯೋಗಿ ಮಹಿಳೆಯರಿಗಾಗಿ ಉಚಿತ ಬ್ಯೂಟಿ ಪಾರ್ಲರ್ ತರಬೇತಿ ಶಿಬಿರವನ್ನು ಏರ್ಪಡಿಸಿದೆ.

ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 45 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಮಹಿಳೆಯರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು.

ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು.

Canara Bank Rural Self Employment Training Institute ಆಸಕ್ತಿಯುಳ್ಳ ಶಿಬಿರಾರ್ಥಿಗಳು ಸೆ. 30 ರಂದು ಬೆಳಗ್ಗೆ 9.00 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ನೇರ ಸಂದರ್ಶನಕ್ಕೆ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗುವಂತೆ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 8970476050, 9591514154, 9686248369, 8970446644, 9505894247 ಗಳನ್ನು ಸಂಪರ್ಕಿಸುವುದು .

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...