Sahyadri Science College ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಎನ್.ಸಿ.ಸಿ ವಿಭಾಗದಿಂದ ಸ್ವಚ್ಛತಾ ಕಾರ್ಯಕ್ರಮವನ್ನು ಆಚರಿಸಲಾಯಿತು.
ಡಿಜೆಬಿ ಆವರಣ ಮತ್ತು ಎಂ ಆರ್ ಎಸ್ ಸರ್ಕಲ್ ನಲ್ಲಿ ಎನ್ ಸಿ ಸಿ ವಿದ್ಯಾರ್ಥಿಗಳು ಸ್ವಚ್ಛತೆಯನ್ನು ಮಾಡಿದರು. ಪರಿಸರ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಡಾ. ನಾಗರಾಜ ಪರಿಸರ ಸ್ವಚ್ಛತೆಯ ಪ್ರಾಮುಖ್ಯತೆ, ಪ್ಲಾಸ್ಟಿಕ್ ನಿಂದ ಪರಿಸರದಲ್ಲಿ ಆಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಿದರು. ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ ವಾಗಿದ್ದರೂ ಇನ್ನೂ ಉತ್ಪತ್ತಿ ನಿಂತಿಲ್ಲ ,ಪ್ಲಾಸ್ಟಿಕ್ ಉತ್ಪಾದನಾ ಘಟಕಗಳನ್ನು ನಿಲ್ಲಿಸುವ ತನಕ ಈ ಪ್ಲಾಸ್ಟಿಕ್ ನಿಂದ ಆಗುವ ದುಷ್ಪರಿಣಾಮಗಳು ಹೆಚ್ಚುತ್ತಲೇ ಇರುತ್ತವೆ. ಸರ್ಕಾರ ಕೂಡಲೇ ಗಮನಹರಿಸಿ ಏಕಬಳಕೆಯ ಪ್ಲಾಸ್ಟಿಕ್ ಉತ್ಪಾದನಾ ಘಟಕಗಳನ್ನು ನಿಲ್ಲಿಸಿದಲ್ಲಿ ಪರಿಸರದಲ್ಲಿ ಜೀವ ಜಂತುಗಳು ಉಳಿಯುವುವು ಎಂದು ತಿಳಿಸಿ ಸ್ವಚ್ಛತಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೊಂದಿಗೆ ಭಾಗವಹಿಸಿದ್ದರು.
Sahyadri Science College ಅಧಿಕಾರಿಗಳಾದ ಲೆಫ್ಟಿನೆಂಟ್ ವಿದ್ಯಾಶಂಕರ್, ಹವಾಲ್ದಾರ್ ಬಾನೆಶ್, ಉಸ್ತುವಾರಿ ಪ್ರಾಂಶುಪಾಲರಾದ ಡಾ. ರಮೇಶ್ ಬಾಬು ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
