Friday, March 20, 2026
Friday, March 20, 2026

Minister Shivanand Patil ಉದ್ದು,ಹೆಸರುಕಾಳು ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಆರಂಭಿಸಬೇಕು- ಸಚಿವ ಶಿವಾನಂದ ಪಾಟೀಲ್

Date:

Minister Shivanand Patil ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಮುಂಗಾರು ಹಂಗಾಮಿನ ಉದ್ದಿನಕಾಳು, ಹೆಸರುಕಾಳು ಹಾಗೂ ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಆರಂಭಿಸಬೇಕು ಎಂದು ಜವಳಿ, ಕಬ್ಬುಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಜಿಲ್ಲಾ ಟಾಸ್ಕ್‌ಪೋರ್ಸ್‌ ಸಮಿತಿಗಳಿಗೆ ಆದೇಶ ಮಾಡಿದ್ದು, ಖರೀದಿ ಏಜನ್ಸಿಗಳೊಂದಿಗೆ ಚರ್ಚೆ ಮಾಡಿ ತ್ವರಿತವಾಗಿ ನೋಂದಣಿ ಹಾಗೂ ಖರೀದಿ ಪ್ರಕ್ರಿಯೆ ಆರಂಭ ಮಾಡಿ ಎಂದು ನಿರ್ದೇಶನ ನೀಡಿದ್ದಾರೆ.

ಬೆಂಬಲ ಬೆಲೆ ಯೋಜನೆಯನ್ನು ದುರ್ಬಳಕೆ ಮಾಡಿಕೊಳ್ಳಲು ವರ್ತಕರಿಗೆ ಅವಕಾಶ ನೀಡಬಾರದು. ರೈತರ ಹೆಸರಿನಲ್ಲಿ ಮಾರಾಟ ಮಾಡಲು ಬರುವ ವರ್ತಕರ ಬಗ್ಗೆ ಎಚ್ಚರಿಕೆ ವಹಿಸಬೇಕು ಹಾಗೂ ಅವರಿಂದ ಖರೀದಿ ಮಾಡಬಾರದು ಎಂದು ತಿಳಿಸಿದ್ದಾರೆ.

ಗದಗ, ಧಾರವಾಡ, ಹಾವೇರಿ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಕಲಬುರಗಿ, ಯಾದಗಿರಿ, ಬೀದರ್‌, ತುಮಕೂರು, ಹಾಸನ, ಮೈಸೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಹೆಸರುಕಾಳು, ಕಲಬುರಗಿ, ಬೀದರ್‌, ಯಾದಗಿರಿ, ಗದಗ, ಧಾರವಾಡ, ವಿಜಯಪುರ ಬಾಗಲಕೋಟ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಉದ್ದಿನಕಾಳು ಹಾಗೂ ಬಾಗಲಕೋಟೆ, ಬಳ್ಳಾರಿ, ಚಾಮರಾಜ ನಗರ, ಚಿತ್ರದುರ್ಗ, ಗದಗ, ಕಲಬುರಗಿ, ರಾಯಚೂರು, ವಿಜಯಪುರ, ವಿಜಯನಗರ, ಯಾದಗಿರಿ, ಮೈಸೂರು, ಚಿಕ್ಕಮಗಳೂರು, ಬೆಳಗಾವಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಸೂರ್ಯಕಾಂತಿ ಖರೀದಿ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ಕರ್ನಾಟಕ ರಾಜ್ಯ ದ್ವಿದಳ ಧಾನ್ಯಗಳ ಅಭಿವೃದ್ಧಿ ಮಂಡಳಿ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಗಳನ್ನು ಖರೀದಿ ಏಜನ್ಸಿಗಳನ್ನಾಗಿ ನೇಮಕ ಮಾಡಲಾಗಿದೆ.

Minister Shivanand Patil ನೋಂದಣಿ ಕಾಲಾವಧಿಯನ್ನು 80 ದಿನ ಹಾಗೂ ಖರೀದಿ ಅವಧಿಯನ್ನು 90ದಿನ ನಿಗದಿಪಡಿಸಲಾಗಿದ್ದು, ನೋಂದಣಿ ಮತ್ತು ಖರೀದಿ ಪ್ರಕ್ರಿಯೆಯನ್ನು ಏಕಕಾಲಕ್ಕೆ ಆರಂಭಿಸಬೇಕು. ಖರೀದಿ ಸಂಸ್ಥೆಗಳು ರೈತರಿಗೆ ಅನುಕೂಲವಾಗುವಂತೆ ನಾಫೆಡ್‌ ಹಾಗೂ ಎನ್‌ಸಿಸಿಎಫ್‌ ಮಾರ್ಗಸೂಚಿ ಅನ್ವಯ ಹಾಗೂ ತಾಂತ್ರಿಕ ಮತ್ತು ವೈಜ್ಞಾನಿಕ ಸೌಲಭ್ಯದಿಂದ ಕೂಡಿರುವ ಗೋದಾಮುಗಳನ್ನು ಹೊಂದಿರುವ ಸಂಸ್ಥೆಗಳ ಮೂಲಕ ಒಡಂಬಡಿಕೆ ಮಾಡಿಕೊಂಡು ಖರೀದಿ ಕೇಂದ್ರ ತೆರೆಯಬೇಕು ಎಂದು ಸೂಚನೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...