Friday, December 5, 2025
Friday, December 5, 2025

Madhu Bangarappa ವಿಕಲಚೇತನರ ಸರ್ವಾಂಗೀಣ ವಿಕಾಸಕ್ಕೆ ಮಾನವೀಯ ಕ್ರಮ- ಮಧು ಬಂಗಾರಪ್ಪ

Date:

Madhu Bangarappa ರಾಜ್ಯದ ಕಿವುಡ, ಮೂಕರು ಸೇರಿದಂತೆ ವಿಕಲಚೇತನರ ಸರ್ವಾಂಗೀಣ ವಿಕಾಸಕ್ಕೆ ಅಗತ್ಯವಾಗಿರುವ ಎಲ್ಲಾ ರೀತಿಯ ಕ್ರಮಗಳನ್ನು ಮಾನವೀಯ ನೆಲೆಯಲ್ಲಿ ಕೈಗೊಳ್ಳಲಾಗುವುದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಅವರು ಹೇಳಿದರು.

ಅವರು ಶಿವಮೊಗ್ಗ ನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ರಾಜ್ಯ ಕಿವುಡರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಜಿಲ್ಲಾ ಮೂಕರು ಮತ್ತು ಶ್ರವಣ ಮಾಂದ್ಯರ ಸಂಘ ಇವರುಗಳ ಸಂಯುಕ್ತಾಕ್ಷರದಲ್ಲಿ ಏರ್ಪಡಿಸಲಾಗಿದ್ದ ಕಿವುಡರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಈ ಸಂಬಂಧ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸುವುದಾಗಿ ತಿಳಿಸಿದ ಅವರು ಅಕ್ಟೋಬರ್ 03ರಂದು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ವಿಕಲಚೇತನರಿಗೆ ಅಗತ್ಯವಾಗಿರುವ ನೆರವು ಆರ್ಥಿಕ ಸಹಕಾರ ನೀಡಲಾಗುವುದು ಎಂದ ಅವರು ರಾಜ್ಯದಾದ್ಯಂತ ಈಗಾಗಲೇ 44 ವಿಶೇಷ ಶಾಲೆಗಳು ಖಾಸಗಿ ಮತ್ತು ಸರ್ಕಾರಿ ಸಹಭಾಗಿತ್ವದಲ್ಲಿ ನಡೆಯುತ್ತಿದೆ ಅದಕ್ಕಾಗಿ ಸರ್ಕಾರ ಮಾಡುತ್ತಿರುವ ಹಣಕಾಸಿನ ವಿವರವನ್ನು ಪಡೆದು ಮುಂದೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ರಾಜ್ಯ ಕಿವುಡರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಕೆ ಹೆಚ್ ಶಂಕರ್ ಅವರು ಮಾತನಾಡಿ ರಾಜ್ಯದಲ್ಲಿ ಸುಮಾರು 6 ಲಕ್ಷಕ್ಕೂ ಅಧಿಕ ಸಂಖ್ಯೆಯ ವಿಕಲಚೇತನರಿದ್ದು ನಿರಂತರ ಶೋಷಣೆಗೆ ಒಳಗಾಗುತ್ತಿದ್ದಾರೆ ಅವರ ಕುಂದು ಕೊರತೆಗಳನ್ನು ಆಲಿಸುವರು ಇಲ್ಲವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

Madhu Bangarappa ಪ್ರಸ್ತುತ ವಿಕಲಚತರಿಗೆ ನೀಡಲಾಗುತ್ತಿರುವ 1200 ರೂ. ಗಳ ಮಾಶಾಸನವನ್ನು 5,000ಗಳಿಗೆ ಏರಿಸಬೇಕಾದ ಅಗತ್ಯವಿದೆ ಅಲ್ಲದೆ ರಾಜ್ಯದಾದ್ಯಂತ ಸಂಚರಿಸಲು ಅನುಕೂಲವಾಗುವಂತೆ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳಲ್ಲಿ ಉಚಿತ ಪ್ರಯಾಣಿಕೆ ಅವಕಾಶ ಕಲ್ಪಿಸಬೇಕು. ಪ್ರತಿ ಜಿಲ್ಲೆಯಲ್ಲಿಯೂ ವಿಕಲಚೇತನರಿಗೆ ಪ್ರತ್ಯೇಕವಾಗಿ ಶಾಲೆಗಳನ್ನು ಆರಂಭಿಸಿ ಸಂಜ್ಞಾ ಭಾಷೆಯ ತಜ್ಞ ಶಿಕ್ಷಕರನ್ನು ನಿಯೋಜಿಸುವಂತೆ ಅವರು ಮನವಿ ಮಾಡಿದರು. ಅಲ್ಲದೆ ಸರ್ಕಾರಿ ಮತ್ತು ಖಾಸಗಿ ವಲಯಗಳಲ್ಲಿ ವಿಕಲಚೇತನರಿಗೆ ಕಿವುಡ ಮೂಕರಿಗೆ ನೇಮಕಾತಿಯಲ್ಲಿ ಅವಕಾಶ ಕಲ್ಪಿಸಿ ಕೊಡುವಂತೆ ಮನವಿ ಮಾಡಿದ ಅವರು, ನಿರ್ಲಕ್ಷಕ್ಕೆ ಒಳಗಾಗಿರುವ ವಿಕಲಚೇತನರಿಗೆ ಬೆಂಬಲವಾಗಿ ನಿಲ್ಲುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಿಸಿಎಫ್ ಹನುಮಂತಪ್ಪ ಉಮಾಶಂಕರ್ ರಮೇಶ್ ದೇವರಾಜ್ ನವೀನ್ ಕುಮಾರ್ ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...