Saturday, December 6, 2025
Saturday, December 6, 2025

Tourism Department ಕಾವೇರಿ ಆರತಿ.ಸಾಹಸ ಮತ್ತು ಜಲಕ್ರೀಡೆಗಳ ಜೊತೆ ಪ್ರವಾಸೋದ್ಯಮಕ್ಕೆ ಹೊಸ ಹೊನಲು

Date:

Tourism Department ಈ ಬಾರಿಯ ದಸರಾದಲ್ಲಿ ಪ್ರವಾಸಿಗರ ಆಕರ್ಷಣೆಯ ಕೇಂದ್ರ ಬಿಂದುವಾಗಿರುವ ಕಾವೇರಿ ಆರತಿ ಕಾರ್ಯಕ್ರಮ, ಈಗ ಸಾಹಸ ಹಾಗೂ ಜಲ ಕ್ರೀಡೆಗಳನ್ನು ಒಳಗೊಂಡು ಪ್ರವಾಸೋದ್ಯಮಕ್ಕೆ ಹೊಸ ಹೊನಲು ತಂದಿದೆ.

ಗಂಗಾರತಿ ಮಾದರಿಯಲ್ಲಿ ತಾಯಿ ಕಾವೇರಿಗೆ ಸಲ್ಲಿಸುವ ಧಾರ್ಮಿಕ ಆರತಿ ಸಮಾರಂಭದ ಜೊತೆಗೆ, ರಾಫ್ಟಿಂಗ್ ಸೇರಿದಂತೆ ಹಲವಾರು ಜಲ ಕ್ರೀಡೆಗಳು ಪ್ರವಾಸಿಗರಿಂದ ಅಪಾರ ಪ್ರತಿಕ್ರಿಯೆ ಪಡೆಯುತ್ತಿವೆ. ಸಾಹಸ ಕ್ರೀಡೆಗಳು ಯುವಕರಿಗೆ ಹೊಸ ಉತ್ಸಾಹ ನೀಡುತ್ತಿದರೆ, ಜಲಕ್ರೀಡೆಗಳು ಕುಟುಂಬ ಸಮೇತರಾಗಿ ಬರುವವರಿಗೆ ವಿಶೇಷ ಅನುಭವ ನೀಡುತ್ತಿವೆ.

ಈ ಕುರಿತು ಕಾವೇರಿ ಸಮಿತಿ ಅಧ್ಯಕ್ಷರು ಹಾಗೂ BWSSB ಅಧ್ಯಕ್ಷರಾದ ಡಾ. ರಾಮ ಪ್ರಸಾತ್ ಮನೋಹರ್ ಅವರು ಹೇಳಿದ್ದಾರೆ – “ಕೆಆರ್‌ಎಸ್‌ನಲ್ಲಿ ನಡೆಯುತ್ತಿರುವ ಜಲಕ್ರೀಡೆಗಳಿಗೆ ಪ್ರವಾಸಿಗರಿಂದ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ. ಸಾಹಸ, ಮನರಂಜನೆ ಮತ್ತು ಸಂಸ್ಕೃತಿಯ ಸಂಯೋಜನೆಯಿಂದ ಕೆಆರ್‌ಎಸ್ ಪ್ರವಾಸೋದ್ಯಮದ ಹೊಸ ಅಧ್ಯಾಯವನ್ನು ಬರೆಯುತ್ತಿದೆ” ಎಂದರು.

Tourism Department ಮಕ್ಕಳಿಗಾಗಿ ಸುಮಾರು 80 ಆಟಗಳನ್ನು ಪರಿಚಯಿಸಲಾಗಿದ್ದು, ಎಲ್ಲ ವಯಸ್ಸಿನ ಪ್ರವಾಸಿಗರು ತಮ್ಮ ರುಚಿಗೆ ತಕ್ಕ ಅನುಭವ ಪಡೆಯುವ ವ್ಯವಸ್ಥೆ ಕಲ್ಪಿಸಲಾಗಿದೆ.

ಹೀಗಾಗಿ ಪ್ರವಾಸಿಗರು ಹಾಗೂ ರಾಜ್ಯದ ಜನ ಈ ವಾರಾಂತ್ಯದಲ್ಲಿ ಕೆಆರ್‌ಎಸ್‌ಗೆ ಆಗಮಿಸಿ ನೂತನ ರೀತಿಯ ಈ ಆಕರ್ಷಕ ಕಾರ್ಯಕ್ರಮವನ್ನು ಕಣ್ತುಂಬಿಕೊಳ್ಳಬೇಕು ಅವರು ಕರೆ ನೀಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...