Bhadravati VISL ಭದ್ರಾವತಿ ವಿಐಎಸ್ ಎಲ್ ವತಿಯಿಂದ ಗಾಂಧಿ ಜಯಂತಿಯನ್ನು ಅಕ್ಟೋಬರ್ ೨ರಂದು ವಿಐಎಸ್‌ಎಲ್‌ನ ಭದ್ರ‍್ರಾ ಅತಿಥಿಗೃಹ, ನ್ಯೂಟೌನ್, ಭದ್ರಾವತಿಯಲ್ಲಿ ಆಚರಿಸಲಾಯಿತು.
ಶ್ರೀ ಬಿ.ಎಲ್. ಚಂದ್ವಾನಿ, ಕಾರ್ಯಪಾಲಕ ನಿರ್ದೇಶಕರು, ಶ್ರೀ ಕೆ.ಎಸ್.ಸುರೇಶ್, ಮುಖ್ಯ ಮಹಾಪ್ರಬಂಧಕರು (ಸ್ಥಾವರ), ಶ್ರೀ ಎಲ್. ಪ್ರವೀಣ್ ಕುಮಾರ್, ಮಹಾಪ್ರಬಂಧಕರು (ಸಾರ್ವಜನಿಕ ಸಂಪರ್ಕ), ಶ್ರೀ ಜೆ. ಜಗದೀಶ್, ಅಧ್ಯಕ್ಷರು, ವಿಐಎಸ್‌ಎಲ್ ಕಾರ್ಮಿಕರ ಸಂಘ, ಶ್ರೀ ಪಾರ್ಥಸಾರಥಿ ಮಿಶ್ರ, ಅಧ್ಯಕ್ಷರು, ವಿಐಎಸ್‌ಎಲ್ ಅಧಿಕಾರಿಗಳ ಸಂಘ, ಶ್ರೀಮತಿ ಶೋಭ ಶಿವಶಂಕರನ್, ಉಪಾಧ್ಯಕ್ಷರು, ಇಸ್ಪಾತ್ ಮಹಿಳಾ ಸಮಾಜ ಇವರುಗಳು ಜ್ಯೋತಿಯನ್ನು ಬೆಳಗಿಸಿ, ಗಾಂಧಿಜಿ ಭಾವಚಿತ್ರಕ್ಕೆ ಪುಷ್ಫ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ಧಾರ್ಮಿಕ ಗ್ರಂಥಗಳಿAದ ಆಯ್ದ ಭಾಗಗಳ ಪಠಣವನ್ನು ಮಾಡಲಾಯಿತು. ಭಗವದ್ಗೀತೆಯನ್ನು ಕುಮಾರಿ ಅಧಿತ್ರಿ ರಾಘವೇಂದ್ರ (ಕೆ.ಎಸ್. ರಾಘವೇಂದ್ರರವರ ಸುಪುತ್ರಿ), ಬೈಬಲ್ ಅನ್ನು ಶ್ರೀ ಶಾಜಿ ಅಬ್ರಹಾಂ ಮತ್ತು ಕುರಾನ್ ಅನ್ನು ಕು|| ರಿಯಾ ಅಂಜುಮ್ ಹಾಗೂ ಕು|| ರಿನಾಜ್ ಅಂಜುಮ್ (ಶ್ರೀ ರಿಜ್ವಾನ್ ಬೇಗ್ ರವರ ಪುತ್ರಿಯರು) ಪಠಿಸಿದರು. ಕುಮಾರಿ ಅಧಿತ್ರಿ ರಾಘವೇಂದ್ರ ರಘುಪತಿರಾಘವ ಭಜನೆಯನ್ನು ಸುಶ್ರಾವ್ಯವಾಗಿ ಹಾಡಿ ಎಲ್ಲರೂ ಸಹ ಭಜನೆಯಲ್ಲಿ ಪಾಲ್ಗೊಳ್ಳುವಂತೆ ಮಾಡಿದರು.
ಈ ಸಂದರ್ಭದಲ್ಲಿ ಸೈಲ್ ಶಭಾಷ್ ಯೋಜನೆಯಡಿಯಲ್ಲಿ ತಮ್ಮ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ಉದ್ಯೋಗಿಗಳಿಗೆ ಪ್ರಶಂಸಾಪತ್ರವನ್ನು ನೀಡಿ ಗೌರವಿಸಲಾಯಿತು.
ಶ್ರೀ ಬಿ.ಎಲ್. ಚಂದ್ವಾನಿಯವರು ಗಾಂಧೀಜಿಯ ತತ್ವಗಳನ್ನು ನಮ್ಮ ದಿನನಿತ್ಯದ ಜೀವನದ ಅವಿಭಾಜ್ಯ ಅಂಗವಾಗಿ ಮಾಡಿಕೊಂಡು ಸಮಾಜದಲ್ಲಿ ನಿರಂತರ ಸುಧಾರಣೆ ತರಲು ಪ್ರಯತ್ನಿಸಬೇಕೆಂದರು. ಇದೇ ಸಂದರ್ಭದಲ್ಲಿ ದೇಶದ ಎರಡನೇ ಪ್ರಧಾನಮಂತ್ರಿ ಶ್ರೀ ಲಾಲ್ ಬಹದ್ಧೂರ್ ಶಾಸ್ತಿçಯವರ ಜಯಂತಿಯನ್ನು ಜ್ಞಾಪಿಸುತ್ತ ಅವರ ಜೀವನಾದರ್ಶಗಳು ನಮಗೆ ದಾರಿದೀಪವಾಗಲೆಂದು ಆಶಿಸಿದರು.
Bhadravati VISL ವಿಐಎಸ್‌ಎಲ್ ಉದ್ಯೋಗಿಗಳು, ವಿಐಎಸ್‌ಎಲ್ ಕಾರ್ಮಿಕ ಸಂಘ ಮತ್ತು ಅಧಿಕಾರಿಗಳ ಸಂಘದ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರುಗಳು, ಗುತ್ತಿಗೆ ಕಾರ್ಮಿಕರು, ಇಸ್ಪಾತ್ ಮಹಿಳಾ ಸಮಾಜದ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಶ್ರೀ ಎಲ್. ಪ್ರವೀಣ್ ಕುಮಾರ್, ಮಹಾಪ್ರಬಂಧಕರು (ಸಾರ್ವಜನಿಕ ಸಂಪರ್ಕ) ಸ್ವಾಗತಿಸಿ ವಂದಿಸಿದರು. ಕಾರ್ಯಕ್ರಮವನ್ನು ವಿಐಎಸ್‌ಎಲ್‌ನ ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಅತಿಥಿಗೃಹ ಆಯೋಜಿಸಿತ್ತು.
