Backward Classes Welfare Department ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26 ನೇ ಸಾಲಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಹೊಸದಾಗಿ ಪ್ರವೇಶ ಬಯಸುವ ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ವ್ಯಾಸಂಗ ಮಾಡುತ್ತಿರುವ ಪ್ರವರ್ಗ-1, 2ಎ, 3ಎ, 3ಬಿ, ಪ.ಜಾ./ಪ.ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕಡೆಯ ದಿನಾಂಕವನ್ನು ಅ. 14ರವರೆಗೆ ವಿಸ್ತರಿಸಲಾಗಿದೆ.
ಆಸಕ್ತರು ಅರ್ಜಿಯನ್ನು https://shp.karnataka.gov.in/bcwd ಮೂಲಕ ಅ.14 ರೊಳಗಾಗಿ ಸಲ್ಲಿಸುವುದು.
ಅರ್ಜಿಯನ್ನು ಸಲ್ಲಿಸಲು ಪ್ರವರ್ಗ-1, ಎಸ್.ಸಿ ಮತ್ತು ಎಸ್.ಟಿ. ಸೇರಿದ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯವು ರೂ.2.50 ಲಕ್ಷಕ್ಕಿಂತ ಮೀರಿರಬಾರದು. ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ಆದಾಯವು ರೂ.1.00 ಲಕ್ಷ ಮೀರಿರಬಾರದು.
Backward Classes Welfare Department ತಾಲೂಕುವಾರು ವಿದ್ಯಾರ್ಥಿನಿಲಯದ ವಿವರ ಹಾಗೂ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರಿ ಆದೇಶಕ್ಕಾಗಿ ಇಲಾಖೆಯ ವೆಬ್ ಸೈಟ್ ವಿಳಾಸ https://bcwd.karnataka.gov.in ನ್ನು ಸಂಪರ್ಕಿಸುವುದು. ಅರ್ಜಿ ಸಲ್ಲಿಸುವಾಗ ತಾಂತ್ರಿಕ ತೊಂದರೆಗಳಾದಲ್ಲಿ ಇ-ಮೇಲ್ bcwdhelpline@.karnataka.gmail.com ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಕಛೇರಿ ವೇಳೆಯಲ್ಲಿ ಸಂಪರ್ಕಿಸುವAತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಮೊ.ಸಂ.8050770004/ 8050770005 ಗಳನ್ನು ಸಂಪರ್ಕಿಸುವುದು.
Backward Classes Welfare Department ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನ; ಅವಧಿ ವಿಸ್ತರಣೆ
Date:
