Monday, February 2, 2026
Monday, February 2, 2026

CM Siddharamaiah ಎನ್ ಡಿ ಆರ್ ಎಫ್ ಅನುದಾನವನ್ನು ಗ್ಯಾರಂಟಿಗಳಿಗೆ ಬಳಸುತ್ತಿಲ್ಲ- ಸಿದ್ಧರಾಮಯ್ಯ

Date:

CM Siddharamaiah ಗ್ಯಾರಂಟಿ ಯೋಜನೆಗಳ ಯಶಸ್ಸು ಬಿಜೆಪಿಗರನ್ನು ಆತಂಕಗೊಳಿಸಿದೆ. ನಮ್ಮ ಸರ್ಕಾರವು ನುಡಿದಂತೆ ನಡೆದು ಗ್ಯಾರಂಟಿಗಳನ್ನು ರಾಜ್ಯದ ಜನರಿಗೆ ನೀಡುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯನವರು ತಿಳಿಸಿದ್ದಾರೆ .

ಎನ್‌ಡಿಆರ್‌ಎಫ್ ಅನುದಾನವನ್ನು ಗ್ಯಾರಂಟಿಗಳಿಗೆ ಬಳಸುತ್ತಿಲ್ಲ. ಬಿಜೆಪಿಯವರು ಕಾಮಾಲೆಕಣ್ಣಿನಿಂದ ಎಲ್ಲವನ್ನೂ ನೋಡುತ್ತಿದ್ದು, ಗ್ಯಾರಂಟಿ ಯೋಜನೆಗಳ ಯಶಸ್ಸು ಅವರಲ್ಲಿ ಆತಂಕವನ್ನುಂಟು ಮಾಡಿದೆ. ನಮ್ಮ ಗ್ಯಾರಂಟಿಗಳನ್ನು ಬಿಹಾರ, ದೆಹಲಿ, ಮಹಾರಾಷ್ಟ್ರ, ಮಧ್ಯಪ್ರದೇಶ, ಹರಿಯಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಅನುಕರಿಸಿದ್ದಾರೆ. ಪ್ರಧಾನಿ ಮೋದಿಯವರು ಗ್ಯಾರಂಟಿಗಳ ಅನುಷ್ಠಾನ ಸಾಧ್ಯವೇ ಇಲ್ಲ ಎಂದಿದ್ದರು. ಆದರೆ ನಮ್ಮ ಸರ್ಕಾರ ನುಡಿದಂತೆ ನಡೆದು ತೋರಿಸಿದೆ ಎಂದು ಹೇಳಿದ್ದಾರೆ.

ಇಂದು ಬೆಳಗಾವಿಯ ಬಿಮ್ಸ್ ನ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು 2017 ರಲ್ಲಿ ನಾನೇ ಶಂಕುಸ್ಥಾಪನೆ ನೆರವೇರಿಸಿದ್ದೆ, ಇಂದು ನಾನೆ ಉದ್ಘಾಟನೆ ನೆರವೇರಿಸಿರುವುದು ಸಂತಸ ತಂದಿದೆ. ಬಿಜೆಪಿಯ ಅವಧಿಯಲ್ಲಿ ಈ ಯೋಜನೆ ಕಾರ್ಯಗತವಾಗಿರಲಿಲ್ಲ. ನಾವು ಕಾಮಗಾರಿಗೆ ವೇಗ ನೀಡಿ ಪೂರ್ಣಗೊಳಿಸಿದ್ದೇವೆ. ಆಸ್ಪತ್ರೆಯ ನಿರ್ವಹಣೆಯನ್ನು ಯಾವುದೇ ಖಾಸಗಿ ಸಂಸ್ಥೆಗೆ ನೀಡಿಲ್ಲ ಎಂದರು.

CM Siddharamaiah ಮುಖ್ಯಮಂತ್ರಿ ಹುದ್ದೆ ವಿಷಯ ನಮ್ಮ ಪಕ್ಷದ ಆಂತರಿಕ ವಿಚಾರವಾಗಿದ್ದು, ಇದಕ್ಕೆ ಬಿಜೆಪಿ ತಲೆಕೆಡಿಸಿಕೊಳ್ಳುವುದು ಬೇಕಿಲ್ಲ. ಅವರು ತಮ್ಮ ಪಕ್ಷದ ಬಗ್ಗೆ ತಲೆಕೆಡಿಸಿಕೊಂಡರೆ ಸಾಕು ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...