Sunday, December 14, 2025
Sunday, December 14, 2025

Karnataka Legislative Council ಬಾರ್ಬ್ಡೋಸ್‌ನಲ್ಲಿ ನಡೆಯುವ 68ನೇ ಕಾಮನ್‌ವೆಲ್ತ್ ಸಂಸದೀಯ ಸಮಾವೇಶದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಭಾಗಿ

Date:

Karnataka Legislative Council ಅಕ್ಟೋಬರ್ 6 ರಿಂದ 10ರ ವರೆಗೆ ಕೆರೆಬಿಯನ್ ಪೂರ್ವ ದ್ವೀಪ ರಾಷ್ಟçವಾಗಿರುವ ಬ್ರಿಟಿಷ್ ಕಾಮನ್‌ವೆಲ್ತ್ನ ಗಣರಾಜ್ಯವಾಗಿರುವ ಬಾರ್ಬ್ಡೋಸ್ ದೇಶದ ರಾಜಧಾನಿ ಬ್ರಿಜ್ಡ್ಟೌನ್ ನಗರದಲ್ಲಿ ನಡೆಯುವ 68ನೇ ಕಾಮನ್‌ವೆಲ್ತ್ನ ಸಂಸದೀಯ ಸಮಾವೇಶ ನಡೆಯಲಿದ್ದು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಪಾಲ್ಗೊಳ್ಳಲಿದ್ದಾರೆ.

ಈ ಸಮಾವೇಶದಲ್ಲಿ ಜಗತ್ತಿನ ವಿವಿಧ ದೇಶಗಳ ಪ್ರತಿನಿಧಿಗಳು, ಲೋಕಸಭಾಧ್ಯಕ್ಷರು, ರಾಜ್ಯಸಭೆಯ ಉಪ ಸಭಾಪತಿಗಳು, ವಿವಿಧ ರಾಜ್ಯಗಳ ವಿಧಾನ ಸಭೆ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ತಿನ ಸಭಾಪತಿಗಳು, ಸಚಿವರುಗಳು, ರಾಜಕೀಯ ತಜ್ಞರು, ನೀತಿ ನಿರೂಪಕರು, ರಾಜಕೀಯ ಮುತ್ಸದ್ದಿಗಳು ಸೇರಿದಂತೆ ವಿವಿಧ ಗಣ್ಯರು ಪಾಲ್ಗೊಳ್ಳಲಿದ್ದಾರೆ.

ನಾಲ್ಕು ದಿನಗಳ ಸಮಾವೇಶದಲ್ಲಿ ಪ್ರಜಾತಂತ್ರ ಗಟ್ಟಿಗೊಳಿಸುವಿಕೆಯಲ್ಲಿ ಶಾಸನ ಸಭೆಗಳ ಪಾತ್ರ, ಶಾಸನ ಸಭೆಗಳ ಪಕ್ಷಾತೀತ ನಿರ್ವಹಣೆ, ಶಾಸನ ಸಭೆಗಳಿಗೆ ಅರ್ಥಿಕ ಸ್ವಾಯತ್ತತೆ ಸೇರಿದಂತೆ ಹತ್ತು ಹಲವು ಅಂತಾರಾಷ್ಟಿçÃಯ ವಿಷಯಗಳ ಕುರಿತು ಗೋಷ್ಠಿಗಳು, ವಿಚಾರ ಸಂಕಿರಣ, ಸಂವಾದಗಳು ಜರುಗಲಿವೆ.

ಸಮಾವೇಶದ ವಿವಿಧ ಗೋಷ್ಠಿಗಳಲ್ಲಿ ಪಾಲ್ಗೊಳ್ಳಲಿರುವ ಸಭಾಪತಿ ಬಸವರಾಜ ಹೊರಟ್ಟಿ ಅವರು ಪ್ರಮುಖ ಗೋಷ್ಠಿಗಳಲ್ಲಿ ಪ್ರಬಂಧ ಮಂಡಿಸಲಿದ್ದು “ಪ್ರಜಾಪ್ರಭುತ್ವ ದೃಢಗೊಳಿಸುವಲ್ಲಿ ಶಾಸನ ಸಭೆಗಳ ಪಾತ್ರ”, “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಹಾಗೂ ಪಾರದರ್ಶಕತೆಯ ಅವಶ್ಯಕತೆ”, “ಚುನಾವಣೆಗಳಲ್ಲಿ ಆರ್ಥಿಕ ಪಾರದರ್ಶಕತೆ ಮಹತ್ವ” ಹಾಗೂ “ಅತ್ಯುತ್ತಮ ಆಡಳಿತ, ಬಹುಪಕ್ಷೀಯತೆ ಮತ್ತು ಅಂತಾರಾಷ್ಟಿçÃಯ ಸಂಬಂಧಗಳನ್ನು ಗಟ್ಟಿಗೊಳಿಸುವಲ್ಲಿ ಕಾಮನ್‌ವೆಲ್ತ್ನ ಪಾತ್ರ” ಮುಂತಾದ ವಿಷಯಗಳ ಕುರಿತು ಪ್ರತ್ಯೇಕವಾಗಿ ತಮ್ಮ ವಿಚಾರಗಳನ್ನು ಮಂಡಿಸಲಿದ್ದಾರೆ.

Karnataka Legislative Council ಜಗತ್ತಿನಾದ್ಯಂತ ರಾಜಕೀಯ ಧುರೀಣರು ಮತ್ತು ನೀತಿ ನಿರೂಪಕರು ಸೇರಿಂದತೆ ಸಾವಿರಾರು ಪ್ರತಿನಿಧಿಗಳು ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಸಮಾವೇಶದಲ್ಲಿ ಭಾಗವಹಿಸಲಿರುವ ವಿಧಾನ ಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ಈಗಾಗಲೆ ಪ್ರಯಾಣ ಬೆಳೆಸಿದ್ದು, ಅಕ್ಟೋಬರ್ 05 ರಂದು ನಾಳೆ ಬಾರ್ಬ್ಡೋಸ್ ದೇಶದ ರಾಜಧಾನಿ ಬ್ರಿಜ್ಡ್ಟೌನ್ ನಗರ ತಲುಪಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Visvesvaraya Technological University ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗೆ ವಿಶೇಷ ಕಾರ್ಯಾಗಾರ

Visvesvaraya Technological University ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ "ಜ್ಞಾನ...

B.Y. Raghavendra ಶಿವಮೊಗ್ಗದಲ್ಲಿ ESIC ಉಪ-ಪ್ರಾದೇಶಿಕ ಕಚೇರಿ ಸ್ಥಾಪನೆಗೆ ಬಿ.ವೈ.ರಾಘವೇಂದ್ರ ಮನವಿ

B.Y. Raghavendra ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಸಚಿವರಾದ ಸನ್ಮಾನ್ಯ ಡಾ....

CM Siddharamaih ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಸಭೆ

CM Siddharamaih ಸುವರ್ಣ ವಿಧಾನಸೌಧದಲ್ಲಿ ವಿವಿಧ ರೈತ ಸಂಘಟನೆಗಳ ಪ್ರತಿನಿಧಿಗಳೊಂದಿಗೆ...