Friday, December 5, 2025
Friday, December 5, 2025

Shivaganga Yoga Center ಆರೋಗ್ಯಪೂರ್ಣ ಜೀವನಶೈಲಿ ರೂಢಿಸಿಕೊಳ್ಳಿ :ಡಾ. ಎ.ಸತೀಶ್ ಕುಮಾರ್ ಶೆಟ್ಟಿ

Date:

Shivaganga Yoga Center ಪ್ರತಿಯೊಬ್ಬರೂ ಆರೋಗ್ಯಪೂರ್ಣ ಜೀವನಶೈಲಿ ರೂಢಿಸಿಕೊಳ್ಳಲು ಮುಂದಾಗಬೇಕು ಎಂದು ಶಿವಮೊಗ್ಗ ಬಂಟರ ಸಂಘದ ಅಧ್ಯಕ್ಷ ಡಾ. ಎ.ಸತೀಶ್ ಕುಮಾರ್ ಶೆಟ್ಟಿ ಹೇಳಿದರು.
ಗೋಪಾಲಗೌಡ ಬಡಾವಣೆಯಲ್ಲಿರುವ ಬಂಟರ ಭವನದಲ್ಲಿ ಶ್ರೀ ಶಿವಗಂಗಾ ಯೋಗ ಕೇಂದ್ರ ಮತ್ತು ಬಂಟರ ಯಾನೆ ನಾಡವರ ಸಂಘದ ಆಶ್ರಯದಲ್ಲಿ ಆಯೋಜಿಸಿರುವ 15 ದಿನಗಳ ಉಚಿತ ಯೋಗ ಪ್ರಾಣಾಯಾಮ. ಹಾಗೂ ಧ್ಯಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಪ್ರತಿ ನಿತ್ಯ ಯೋಗ ಅಭ್ಯಾಸ ಮಾಡುವುದರಿಂದ ಸದೃಢ ಆರೋಗ್ಯ ನಮ್ಮದಾಗುತ್ತದೆ ಎಂದು ತಿಳಿಸಿದರು.
ಶಿವಮೊಗ್ಗ ಬಂಟರ ಭವನದಲ್ಲಿ ಈಗಾಗಲೇ ಅನೇಕ ಉಚಿತ ಆರೋಗ್ಯ ಶಿಬಿರ, ಯಕ್ಷಗಾನ ಪ್ರದರ್ಶನ ಹಾಗೂ ಇತರ ಕಲಾಪ್ರದರ್ಶನಗಳನ್ನು ನಡೆಸಿಕೊಡುವುದರ ಮುಖಾಂತರ ಬಂಟರ ಭವನವನ್ನು ಸಾಂಸ್ಕೃತಿಕ ಕೇಂದ್ರವಾಗಿ ಪರಿವರ್ತಿಸಲಾಗಿದೆ. ಶ್ರೀ ಶಿವಗಂಗಾ ಯೋಗ ಕೇಂದ್ರ ಮತ್ತು ಬಂಟರ ಯಾನೆ ನಾಡವರ ಸಂಘದ ಜಂಟಿ ಆಶ್ರಯದಲ್ಲಿ ಯೋಗ ಶಿಬಿರ ನಡೆಸಿಕೊಡಲಾಗುತ್ತಿದೆ ಎಂದರು.
ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಯೋಗಾಚಾರ್ಯ ಸಿ.ವಿ.ರುದ್ರಾರಾಧ್ಯ ಮಾತನಾಡಿ, ಯೋಗ, ಧ್ಯಾನ ಮತ್ತು ಪ್ರಾಣಾಯಾಮಗಳಿಂದ ಪ್ರತಿಯೊಬ್ಬರು ಆರೋಗ್ಯಪೂರ್ಣ ಜೀವನ ನಡೆಸಲು ಸಾಧ್ಯ ಎಂದು ತಿಳಿಸಿದರು. ಇತ್ತೀಚಿನ ವರ್ಷಗಳಲ್ಲಿ ಶಿವಮೊಗ್ಗ ನಗರದಾದ್ಯಂತ ಅನೇಕ ಆಸ್ಪತ್ರೆಗಳು ನಿರ್ಮಾಣ ಆಗುತ್ತಿರುವುದನ್ನು ನೋಡಿದರೆ ಇದು ನಮ್ಮ ಆರೋಗ್ಯ ಬಹಳ ಬೇಗವಾಗಿ ಕ್ಷೀಣಿಸುತ್ತಿರುವುದರ ದ್ಯೋತಕವಾಗಿದೆ. ರಾಸಾಯನಿಕ ಮಿಶ್ರಿತ ಆಹಾರ ಸೇವನೆ ಮೇಲೆ ಹೆಚ್ಚು ಅವಲಂಬಿತರಾಗುತ್ತಿರುವುದೇ ಇದಕ್ಕೆ ಕಾರಣವಾಗಿದೆ ಎಂದರು.
Shivaganga Yoga Center ಯೋಗ ಶಿಬಿರದ ಮುಖಾಂತರ ಆಹಾರ ಪದ್ಧತಿ ಮತ್ತು ಜೀವನಶೈಲಿಯನ್ನು ಬದಲಾಯಿಸಿಕೊಂಡು ಉತ್ತಮ ಆರೋಗ್ಯ ಪಡೆಯಲು ಪ್ರತಿಯೊಬ್ಬರು ಮುಂದಾಗಬೇಕು ಎಂದು ತಿಳಿಸಿದರು.
ನಗರದಲ್ಲಿ ಈಗಾಗಲೇ 38 ಕಡೆ ಉಚಿತವಾಗಿ ಯೋಗವನ್ನು ತರಬೇತಿ ಶಿಬಿರ ನಡೆಸುವುದರ ಮುಖಾಂತರ ಮನೆ ಮನೆಗಳಿಗೂ ತಲುಪಿಸುತ್ತಿದ್ದೇವೆ. ಕಾರ್ಯದರ್ಶಿ ಸುರೇಶ್ ಶೆಟ್ಟಿ, ನಿರ್ದೇಶಕರಾದ ದಿವಾಕರ್ ಶೆಟ್ಟಿ, ಶಿವಗಂಗಾ ಯೋಗ ಕೇಂದ್ರದ ಸಾರ್ವಜನಿಕ ಸಂಪರ್ಕ ಅಧಿಕಾರಿ ಜಿ.ವಿಜಯಕುಮಾರ್, ಯೋಗ ಕೇಂದ್ರದ ಟ್ರಸ್ಟಿ ಎಂ.ಪಿ.ಆನಂದಮೂರ್ತಿ, ಯೋಗ ಶಿಕ್ಷಕರಾದ ವಿಜಯ ಬಾಯರಿ, ಕಾಟನ್ ಜಗದೀಶ್, ಕಿರಣ್, ಗಿರೀಶ್, ನೂರಾರು ಯೋಗಪಟುಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...