Monday, February 2, 2026
Monday, February 2, 2026

Yesvantpur Talguppa Train ಯಶವಂತಪುರ–ತಾಳಗುಪ್ಪ ನಡುವೆ ರೈಲು ಸೇವೆಗಳ ವಿಸ್ತರಣೆ

Date:

Yesvantpur Talguppa Train ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸುವ ಸಲುವಾಗಿ ಯಶವಂತಪುರ–ತಾಳಗುಪ್ಪ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ವಿಸ್ತರಿಸಲಾಗಿದೆ. ಈ ರೈಲು ಪ್ರತಿ ದಿಕ್ಕಿನಲ್ಲಿ ಎರಡು ಟ್ರಿಪ್ಗಳನ್ನು ಪೂರ್ಣಗೊಳಿಸಲಿದೆ.

ರೈಲು ಸಂಖ್ಯೆ 06587 ಯಶವಂತಪುರ–ತಾಳಗುಪ್ಪ ಎಕ್ಸ್‌ಪ್ರೆಸ್‌ ವಿಶೇಷ ರೈಲು ಅಕ್ಟೋಬರ್ 17 ಮತ್ತು 24 ರಂದು ರಾತ್ರಿ 10.30ಕ್ಕೆ ಯಶವಂತಪುರ ನಿಲ್ದಾಣದಿಂದ ಹೊರಟು, ಮರುದಿನ ಮುಂಜಾನೆ 4.15ಕ್ಕೆ ತಾಳಗುಪ್ಪ ತಲುಪಲಿದೆ. ಮತ್ತೊಂದೆಡೆ, ರೈಲು ಸಂಖ್ಯೆ 06588 ತಾಳಗುಪ್ಪ–ಯಶವಂತಪುರ ಎಕ್ಸ್‌ಪ್ರೆಸ್‌ ವಿಶೇಷ ರೈಲು ಅಕ್ಟೋಬರ್ 18 ಮತ್ತು 25 ರಂದು ತಾಳಗುಪ್ಪದಿಂದ ಬೆಳಗ್ಗೆ 10 ಗಂಟೆಗೆ ಹೊರಟು, ಅದೇ ದಿನ ಸಂಜೆ 5.15ಕ್ಕೆ ಯಶವಂತಪುರ ತಲುಪಲಿದೆ.

Yesvantpur Talguppa Train ಈ ವಿಶೇಷ ರೈಲು, ಎರಡೂ ಮಾರ್ಗದಲ್ಲಿ ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು, ತರೀಕೆರೆ, ಭದ್ರಾವತಿ, ಶಿವಮೊಗ್ಗ ಟೌನ್, ಆನಂದಪುರಂ ಹಾಗೂ ಸಾಗರ ಜಂಬಗಾರು ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.

ಈ ವಿಶೇಷ ರೈಲಿನಲ್ಲಿ ಒಟ್ಟು 20 ಬೋಗಿಗಳಿರಲಿವೆ. ಅವುಗಳಲ್ಲಿ ಒಂದು ಎಸಿ ಟು-ಟಯರ್, ಎರಡು ಎಸಿ ಥ್ರೀ-ಟಯರ್, ಹತ್ತು ಸ್ಲೀಪರ್ ಕ್ಲಾಸ್, ಐದು ಸಾಮಾನ್ಯ ದ್ವಿತೀಯ ದರ್ಜೆ ಹಾಗೂ ಎರಡು ದ್ವಿತೀಯ ದರ್ಜೆ ಲಗೇಜ್-ಕಮ್-ಬ್ರೇಕ್ ವ್ಯಾನ್ಗಳು ಇರಲಿವೆ.

ಪೃಥ್ವಿ ಎಸ್ ಹುಲ್ಲತ್ತಿ
ವಿಭಾಗೀಯ ಹಣಕಾಸು ವ್ಯವಸ್ಥಾಪಕರು ಮತ್ತು
ಸಾರ್ವಜನಿಕ ಸಂಪರ್ಕ ಅಧಿಕಾರಿ
ಮೈಸೂರು ವಿಭಾಗ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...