MESCOM ಮೆಸ್ಕಾಂ ಹಾಗೂ ಸ್ಮಾರ್ಟ್ ಸಿಟಿ ವತಿಯಿಂದ ಸುಮಾರು 300 ಕೋಟಿ ರೂ ವೆಚ್ಚದಲ್ಲಿ ಶಿವಮೊಗ್ಗ ನಗರದಾದ್ಯಂತ ಭೂಗತ ಕೇಬಲ್ ಗಳನ್ನು ಅಳವಡಿಸಿ ಹಳೆಯ ವಿದ್ಯುತ್ ಕಂಬಗಳನ್ನು ತೆಗೆದು ಹಾಕದೆ ಹಾಗೆಯೇ ಬಿಟ್ಟಿರುವುದರಿಂದ ರಸ್ತೆಗಳ ಎರಡು ಬದಿಗಳಲ್ಲಿ ವಿದ್ಯುತ್ ಕಂಬಗಳಿದ್ದು ವಾಹನ ಸಂಚಾರಕ್ಕೆ ಮತ್ತು ಪಾರ್ಕಿಂಗ್ ವ್ಯವಸ್ಥೆಗೆ ತೀವ್ರ ತೊಂದರೆಯಾಗಿದೆ.
ವಿದ್ಯುತ್ ಕಂಬಗಳನ್ನು ಶೀಘ್ರವಾಗಿ ತೆಗೆದು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕಾಗಿ ಮಾನ್ಯ ಶಾಸಕರಿಗೆ, ಜಿಲ್ಲಾಧಿಕಾರಿಗಳಿಗೆ ಹಾಗೂ ಮೆಸ್ಕಾಂ ಅಧಿಕಾರಗಳಿಗೆ ಈಗಾಗಲೇ ಮೂರು ಮನವಿಗಳನ್ನು ಸಲ್ಲಿಸಿದ ನಂತರವೂ ಯಾವುದೇ ಪ್ರತಿಕ್ರಿಯೆ ಇಲ್ಲ.
ಮಾನ್ಯ ಜಿಲ್ಲಾಧಿಕಾರಿಗಳಿಗೆ ಸಂಬಂಧಿಸಿದ ಇಲಾಖೆಗಳ ಸಮನ್ವಯ ಸಮಿತಿ ಸಭೆ ಕರೆಯುವಂತೆ ಹಲವು ಬಾರಿ ಮನವಿ ನೀಡಿದರೂ ಇಲ್ಲಿಯವರೆಗೆ ಯಾವುದೇ ಸಭೆಯನ್ನು ಕರೆದಿರುವುದಿಲ್ಲ.
MESCOM ಮಾನ್ಯ ಜಿಲ್ಲಾಧಿಕಾರಿಗಳು ಸಭೆ ಕರೆಯದಿರುವುದನ್ನು ಖಂಡಿಸಿ ಇದೇ ಅಕ್ಟೋಬರ್ ತಿಂಗಳ 9 ನೇ ತಾರೀಖು, ಗುರುವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ಬೆಳಿಗ್ಗೆ 11 ರಿಂದ 12 ಗಂಟೆಯವರೆಗೆ “ಧರಣಿ ಸತ್ಯಾಗ್ರಹ” ಹಮ್ಮಿಕೊಳ್ಳಲಾಗಿದೆ.
