Tuesday, November 11, 2025
Tuesday, November 11, 2025

District Child Protection Units ಬೇಡವಾದ ನವಜಾತ ಶಿಶು ಕಂಡುಬಂದಲ್ಲಿ ಸರ್ಕಾರಿ ವಿಶೇಷ ದತ್ತು ಸಂಸ್ಥೆಗೆ ಒಪ್ಪಿಸಿ: ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ

Date:

District Child Protection Units ಬೇಡವಾದ ಮತ್ತು ಸಾರ್ವಜನಿಕ ಸ್ಥಳದಲ್ಲಿ ನವಜಾತ ಶಿಶು ಕಂಡುಬಂದಲ್ಲಿ ಅಂತಹ ಮಕ್ಕಳನ್ನು ಸರ್ಕಾರಿ ವಿಶೇಷ ದತ್ತು ಸಂಸ್ಥೆಗೆ ಒಪ್ಪಿಸಬೇಕು ಎಂದು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ.
ಸಾರ್ವಜನಿಕರು ಯಾವುದೇ ಕಾರಣದಿಂದ ತಮಗೆ ಜನಿಸಿದ ನವಜಾತ ಶಿಶುಗಳು, ಅನಾಥ, ಪರಿತ್ಯಕ್ತ ಮಗುವು ತಮಗೆ ಬೇಡವಾದಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಗೆ ಕರೆ ಮಾಡಿ ಮಾಹಿತಿ ನೀಡಿದರೆ ಸಂಬಂಧಪಟ್ಟ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಅಥವಾ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಮಗುವನ್ನು ಸ್ವೀಕರಿಸಿ, ಸರ್ಕಾರಿ ವಿಶೇಷ ದತ್ತು ಸಂಸ್ಥೆಗೆ ದಾಖಲು ಮಾಡುತ್ತಾರೆ.
District Child Protection Units ಇಲ್ಲವೇ ಬಳ್ಳಾರಿ ನಗರದ ಕಂಟೋನ್ ಮೆಂಟ್ ಪ್ರದೇಶದ ಶಾಂತಿಧಾಮ ಆವರಣದ ಸರ್ಕಾರಿ ವಿಶೇಷ ದತ್ತು ಸಂಸ್ಥೆ, ಇಲ್ಲಿಗೆ ಒಪ್ಪಿಸಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.
ಈ ಪ್ರಕ್ರಿಯೆಯಲ್ಲಿ ನವಜಾತ ಮಗುವಿನ ತಾಯಿ/ಪೋಷಕರಿಗೆ ಯಾವುದೇ ವಿಚಾರಣೆಗೆ ಒಳಪಡಿಸಲಾಗುವುದಿಲ್ಲ. ಈ ಬಗ್ಗೆ ಸಾರ್ವಜನಿಕರು ಸಹ ಯಾವುದೇ ಭಯ ಆತಂಕವಿಲ್ಲದೇ ಮಕ್ಕಳ ಸಹಾಯವಾಣಿ ಸಂಖ್ಯೆ 1098 ಗೆ ಕರೆ ಮಾಡಿ ಬೇಡವಾದ ಮಕ್ಕಳನ್ನು ಒಪ್ಪಿಸಬೇಕು. ಸಾರ್ವಜನಿಕರು ಯಾವುದೇ ಕಾರಣಕ್ಕೂ ಮಕ್ಕಳನ್ನು ಕಸದ ಬುಟ್ಟಿಯಲ್ಲಿ, ರಸ್ತೆ ಬದಿಯಲ್ಲಿ, ತಿಪ್ಪೆ ಗುಂಡಿಯಲ್ಲಿ ಹಾಕುವುದರ ಮೂಲಕ ಮಕ್ಕಳ ಸಾವಿಗೆ ಕಾರಣರಾಗಬಾರದು ಎಂದು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sharavati Pumped Storage Project ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರದ್ದಾಗಿಲ್ಲ- ಅಖಿಲೇಶ್ ಚಿಪ್ಪಳಿ

Sharavati Pumped Storage Project ಅಕ್ಟೋಬರ್ 27 2025ರಂದು ದೆಹಲಿಯಲ್ಲಿ ನಡೆದ...

ಶಿವಮೊಗ್ಗದಿಂದ ಹೊಸಪೇಟೆಗೆ ತೆರಳುವ ವಾಹನಗಳಿಗೆ ತಾತ್ಕಾಲಿಕ‌ ಮಾರ್ಗ ಬದಲಾವಣೆ ಆದೇಶ

ರಾಜ್ಯ ಹೆದ್ದಾರಿ ರಸ್ತೆಯ ಸರಪಳಿ 191,000 ರಿಂದ 191,230 ಫ್ಲೈ ಓವರ್...