Sunday, June 21, 2026
Sunday, June 21, 2026

IMA Shivamogga ಸಕಾಲದಲ್ಲಿ ಕಣ್ಣಗಳ ತಪಾಸಣೆ ಮಾಡಿಸಿಕೊಳ್ಳಿ

Date:

IMA Shivamogga ಕಣ್ಣುಗಳು ದೇಹದ ಪ್ರಮುಖ ಅಂಗವಾಗಿದ್ದು, ಸಕಾಲದಲ್ಲಿ ಕಣ್ಣುಗಳನ್ನು ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ಹೇಳಿದರು.
ವಿಶ್ವ ದೃಷ್ಟಿ ದಿನದ ಅಂಗವಾಗಿ ಐಎಂಎ ಶಿವಮೊಗ್ಗ ಶಾಖೆ, ಎಸ್‌ವಿಕೆ ನ್ಯಾಷನಲ್ ಕಾಲೇಜ್ ಆಫ್ ಎಜುಕೇಷನ್‌ನ ಐಕ್ಯೂಎಸಿ, ಮಲ್ನಾಡ್ ನೇತ್ರ ತಜ್ಞರ ಸಂಘದ ವತಿಯಿಂದ ಆಯೋಜಿಸಿದ್ದ ಆರೋಗ್ಯ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಣ್ಣುಗಳು ನಮ್ಮ ಮರಣದ ನಂತರ ಮಣ್ಣಲ್ಲಿ ಮಣ್ಣಾಗಿ ಹೋಗುವ ಬದಲು ಇನ್ನೊಬ್ಬರ ಬಾಳಿಗೆ ಬೆಳಕಾಗಬೇಕು. ನೇತ್ರದಾನ ಮಾಡಬೇಕು ಎಂದು ತಿಳಿಸಿದರು.
ಐಎಂಎ ಶಿವಮೊಗ್ಗ ಶಾಖೆ ಅಧ್ಯಕ್ಷ ಡಾ. ಕೆ.ಆರ್.ರವೀಶ್ ಮಾತನಾಡಿ, ಆರೋಗ್ಯಕರ ಕಣ್ಣುಗಳು ಪ್ರಕಾಶಮಾನವಾದ, ಹೆಚ್ಚು ಉತ್ಪಾದಕ ಜೀವನವನ್ನು ಅರ್ಥೈಸುತ್ತವೆ. ಇಂದು ನಾವೆಲ್ಲರೂ ನಮ್ಮ ಕಣ್ಣುಗಳನ್ನು ನಿಜವಾಗಿಯೂ ಪ್ರೀತಿಸಲು ಪ್ರತಿಜ್ಞೆ ಮಾಡೋಣ ಎಂದು ತಿಳಿಸಿದರು.
ಡಾ. ಬಿ.ಎ.ಸುಭಾಷ್ ಮಾತನಾಡಿ, ಈ ವರ್ಷದ ಘೋಷವಾಕ್ಯ, ನಿಮ್ಮ ಕಣ್ಣುಗಳನ್ನು ಪ್ರೀತಿಸಿ, ನಿಯಮಿತ ಕಣ್ಣಿನ ತಪಾಸಣೆ, ಉತ್ತಮ ಬೆಳಕು, ಪರದೆಯ ವಿರಾಮಗಳು ಮತ್ತು ಸಮತೋಲಿತ ಪೋಷಣೆಯಂತಹ ಸರಳ ಹಂತಗಳು ಹೆಚ್ಚಿನ ದೃಷ್ಟಿ ಸಮಸ್ಯೆಗಳನ್ನು ತಡೆಯಬಹುದು ಎಂದು ಹೇಳಿದರು.
IMA Shivamogga ಪ್ರಾಂಶುಪಾಲ ಡಾ ಚಿದಾನಂದ ಎನ್ ಕೆ ಅವರು ಮಾತನಾಡಿ, ನ್ಯಾಷನಲ್ ಬಿಎಡ್ ಕಾಲೇಜಿನ ಸಹಕಾರ ಇಂತಹ ಅರಿವು ಕಾರ್ಯಕ್ರಮಗಳಿಗೆ ಸದಾ ಇರಲಿದೆ ಎಂದು ತಿಳಿಸಿದರು.
ಮಲ್ನಾಡ್ ನೇತ್ರ ತಜ್ಞರ ಸಂಘದ ಅಧ್ಯಕ್ಷ ಡಾ. ಅಶೋಕ್ ಅವರು ಸಭಿಕರೊಂದಿಗೆ ಸಂವಾದವನ್ನು ನಡೆಸಿದರು. ಕಾರ್ಯಕ್ರಮದಲ್ಲಿ ಐಎಂಎ ಶಿವಮೊಗ್ಗ ಶಾಖೆ ಕಾರ್ಯದರ್ಶಿ ಡಾ ಕೆ ಎಸ್ ಶುಭ್ರತಾ ಮತ್ತು ಡಾ ಮಂಜು ಕೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಪಿಎಂ- ವಿಬಿಆರ್ ವೈ ಯೋಜನೆಯಿಂದ ಉದ್ಯೋಗ ಸೃಷ್ಠಿ- ಬಿ.ವೈ.ರಾಘವೇಂದ್ರ

B.Y. Raghavendra ಪ್ರಧಾನ ಮಂತ್ರಿ ವಿಕಸಿತ್ ರೋಜ್ ಗಾರ್ ಯೋಜನೆ ಅಡಿಯಲ್ಲಿ...

Rotary Organization ಸಮಾಜಮುಖಿ ಸೇವೆಗಳ ಮೂಲಕ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ- ರೋಟರಿ ಗೌರ್ನರ್ ಕೆ.ಫಾಲಾಕ್ಷ

Rotary Organization ಮನುಕುಲದ ಮಾನವೀಯ ಸೇವೆಯಲ್ಲಿ ರೋಟರಿ ಸಂಸ್ಥೆ ಮುಂಚೂಣಿಯಲ್ಲಿದೆ ಪ್ರಪಂಚಾದ್ಯಂತ...

DC Shivamogga ಹುಲಿಕಲ್ ಘಾಟಿಯಲ್ಲಿ ಮಜಲು ಬಸ್ ವಾಹನಗಳ ಸಂಚಾರಕ್ಕೆ ಅವಕಾಶ- ಪ್ರಭುಲಿಂಗ ಕವಳಿಕಟ್ಟಿ

DC Shivamogga ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಜೂ. 18 ರಿಂದ ರಾಜ್ಯ...