Sunday, August 9, 2026
Sunday, August 9, 2026

Adichunchanagiri Mahasansthan Mutt ದಾವಣಗೆರೆಯಲ್ಲಿ ನಡೆಯುವ ರಾಜ್ಯಮಟ್ಟದ ಕರಾಟೆಯಲ್ಲಿ – ಕುಶಾಲ್ ಎಂ.

Date:

Adichunchanagiri Mahasansthan Mutt ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಚೇರಿ ಶಿವಮೊಗ್ಗ ಇವರ ಆಶ್ರಯದಲ್ಲಿ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮತ್ತು ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಗುರುಪುರದ ಬಿಜಿಎಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರತಿಭಾನ್ವಿತ ಕ್ರೀಡಾಪಟು ಕುಶಾಲ್ ಎಂ. ತಾಲೂಕು ಮತ್ತು ಜಿಲ್ಲಾಮಟ್ಟದ 45 ಕೆಜಿ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿ, ಉತ್ತಮ ಸ್ಪರ್ಧೆಯನ್ನು ನೀಡಿ,ತಾಲ್ಲೂಕು ಮತ್ತು ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು, ದಾವಣಗೆರೆಯಲ್ಲಿ ನಡೆಯುವ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾನೆ.
Adichunchanagiri Mahasansthan Mutt ಬಿಜಿಎಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 6ನೇ ತರಗತಿಯಲ್ಲಿ ಓದುತ್ತಿರುವ ಈ ಪ್ರತಿಭೆಯು ಕ್ರೀಡೆಯ ಜೊತೆಗೆ, ಓದಿನಲ್ಲಿಯೂ ಪ್ರತಿಭಾನ್ವಿತನಾಗಿರುತ್ತಾನೆ.ಗುರುಪುರದಲ್ಲಿ ವಾಸವಿರುವ ಮೋಹನ್ ಕೆ. ಎಸ್. ಮತ್ತು ಉಮಾದೇವಿ ದಂಪತಿಗಳ ಪುತ್ರನಾಗಿರುತ್ತಾನೆ.
ಈ ಕ್ರೀಡಾ ಪ್ರತಿಭೆಯ ಮುಂದಿನ ಕ್ರೀಡಾ ಜೀವನ ಯಶಶ್ವಿಯಾಗಲೆಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು, ಪೂಜ್ಯ ಶ್ರೀಶ್ರೀ ನಾದಮಯಾನಂದನಾಥ ಸ್ವಾಮೀಜಿಯವರು, ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು, ಶಾಲಾ ಕಾಲೇಜಿನ ಪ್ರಾಂಶುಪಾಲರಾದ ಸುರೇಶ್ ಎಸ್. ಎಚ್. ಹಾಗೂ ಅಧ್ಯಾಪಕ ವೃಂದದವರು, ಸಿಬ್ಬಂದಿವರ್ಗ ಹಾಗೂ ವಿದ್ಯಾರ್ಥಿಗಳು ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಹೋಂ ಸ್ಟೇ, ಹೊಟೆಲ್ & ರೆಸಾರ್ಟ್ಗಳಲ್ಲಿ ಮಾಹಿತಿ ಫಲಕ ಅಳವಡಿಕೆ ಕಡ್ಡಾಯ. ಪ್ರಭುಲಿಂಗ ಕವಳಿಕಟ್ಟಿ.

DC Shivamogga ಜಿಲ್ಲೆಯಲ್ಲಿರುವ ಎಲ್ಲಾ ಹೋಂಸ್ಟೇ, ಹೋಟೇಲ್, ರೆಸಾರ್ಟ್ ಹಾಗೂ ಇತರೆ ವಸತಿ...

Car Accident ಸಿಗಂದೂರಿಗೆ ಹೊರಟ ಪ್ರವಾಸಿಗರ ಕಾರು ಚೋರಡಿ ಸೇತುವೆ ಬಳಿ ಪಲ್ಟಿ: ಆರು ಮಂದಿಗೆ ಗಾಯ.

Car Accident  ಶಿವಮೊಗ್ಗ ಜಿಲ್ಲೆಯ ಚೋರಡಿ ಬ್ರಿಡ್ಜ್ ಸಮೀಪ ಈ ಭೀಕರ...