Tuesday, November 11, 2025
Tuesday, November 11, 2025

Children’s Day ಹೊಯ್ಸಳ ಹಾಗೂ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

Date:

Children’s Day ಮಕ್ಕಳ ದಿನಾಚರಣೆ-2025 ರ ಅಂಗವಾಗಿ ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣದ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ 6 ರಿಂದ 18 ವರ್ಷಗೊಳಗಿನ ಬಾಲಕರಿಗೆ ‘ಹೊಯ್ಸಳ’ ಮತ್ತು ಬಾಲಕಿಯರಿಗೆ ‘ಕೆಳದಿ ಚೆನ್ನಮ್ಮ’ ಶೌರ್ಯ ಪ್ರಶಸ್ತಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವತಿಯಿಂದ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಪ್ರಶಸ್ತಿಗೆ ಆಯ್ಕೆಯಾದ ಮಕ್ಕಳಿಗೆ ತಲಾ ರೂ.10,000 ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು. ಇದೇ ಸಂದರ್ಭದಲ್ಲಿ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಟ 05 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ ರೂ.25,000/- ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ ರೂ. 1,00,000/- ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುವುದು.
ಸಾಹಸ ಪ್ರಕರಣವು ದಿ: 01/08/2024 ರಿಂದ 31/07/2025 ರೊಳಗೆ ನಡೆದಿರಬೇಕು. ಧೈರ್ಯ ಸಾಹಸ ಪ್ರದರ್ಶಿಸಿದ ಕುರಿತು ಜಿಲ್ಲಾ ಮಟ್ಟದಲ್ಲಿ ಗುರುತಿಸಿರಬೇಕು ಮತ್ತು ಈ ಬಗ್ಗೆ ದಿನಪತ್ರಿಕೆಗಳಲ್ಲಿ ಪ್ರಕಟಗೊಂಡಿರಬೇಕು. ಅರ್ಜಿ ಸಲ್ಲಿಸುವವರು ವ್ಯಕ್ತಿ/ಸಂಸ್ಥೆಗಳ ವಿರುದ್ದ ಕ್ರಿಮಿನಲ್ ಮೊಕದ್ದಮೆ ಇಲ್ಲದಿರುವ ಬಗ್ಗೆ ಪೊಲೀಸ್ ಇಲಾಖೆಯಿಂದ ಪರಿಶೀಲನಾ ವರದಿ ಪಡೆದು ಅರ್ಜಿಯೊಂದಿಗೆ ಸಲ್ಲಿಸಬೇಕು.
Children’s Day ನಿಗದಿತ ಅರ್ಜಿ ನಮೂನೆಗಳನ್ನು ಜಿಲ್ಲೆಯ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿವಮೊಗ್ಗ ಇವರಿಂದ ಪಡೆದುಕೊಂಡು, ಕನ್ನಡ ಭಾಷೆಯಲ್ಲಿ ಭರ್ತಿ ಮಾಡಿ ದಿ: 27/10/2025 ರೊಳಗಾಗಿ ಸಲ್ಲಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ.: 08182-294414 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sharavati Pumped Storage Project ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ರದ್ದಾಗಿಲ್ಲ- ಅಖಿಲೇಶ್ ಚಿಪ್ಪಳಿ

Sharavati Pumped Storage Project ಅಕ್ಟೋಬರ್ 27 2025ರಂದು ದೆಹಲಿಯಲ್ಲಿ ನಡೆದ...

ಶಿವಮೊಗ್ಗದಿಂದ ಹೊಸಪೇಟೆಗೆ ತೆರಳುವ ವಾಹನಗಳಿಗೆ ತಾತ್ಕಾಲಿಕ‌ ಮಾರ್ಗ ಬದಲಾವಣೆ ಆದೇಶ

ರಾಜ್ಯ ಹೆದ್ದಾರಿ ರಸ್ತೆಯ ಸರಪಳಿ 191,000 ರಿಂದ 191,230 ಫ್ಲೈ ಓವರ್...