Department of School Education ಕ್ರೀಡಾಪಟುಗಳು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿದ್ದಾಗ ಮಾತ್ರ ಆರೋಗ್ಯವಂತರಾಗಿರಲು ಸಾಧ್ಯವಾಗುತ್ತದೆ ಎಂದು ರಾಜ್ಯ ಸರ್ಕಾರಿ ನೌಕರ ಸಂಘದ ರಾಜ್ಯಾಧ್ಯಕ್ಷ ಸಿ. ಎಸ್. ಷಡಾಕ್ಷರಿ ಅಭಿಪ್ರಾಯ ಪಟ್ಟರು.
ಅವರು ಸೆಕ್ರೆಡ್ ಹಾರ್ಟ್ ಕ್ರೀಡಾಂಗಣದಲ್ಲಿ ಎರಡು ದಿನ ನಡೆಸಲಾದ ಜಿಲ್ಲಾಡಳಿತ ಶಿವಮೊಗ್ಗ, ಜಿಲ್ಲಾ ಪಂಚಾಯತ್, ಶಿವಮೊಗ್ಗ, ಶಾಲಾ ಶಿಕ್ಷಣ ಇಲಾಖೆ, ಉಪ ನಿರ್ದೇಶಕರ ಕಛೇರಿ, ಶಿವಮೊಗ್ಗ, ಸೆಕ್ರೆಡ್ ಹಾರ್ಟ್ ಪ್ರೌಢಶಾಲೆ ಶಿವಮೊಗ್ಗ ಹಾಗು ಜಿಲ್ಲಾ ಫುಟ್ ಬಾಲ್ ಅಸೋಸಿಯೇಷನ್ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ 14 ಮತ್ತು 17 ವರ್ಷ ವಯೋಮಿತಿಯೊಳಗಿನ ಬಾಲಕ ಮತ್ತು ಬಾಲಕಿಯರ ಬೆಂಗಳೂರು ವಿಭಾಗ ಮಟ್ಟದ ಫುಟ್ ಬಾಲ್ ಕ್ರೀಡಾ ಕೂಟಕ್ಕೆ ಚಾಲನೆ ನೀಡಿ ಮಾತನಾಡುತ್ತಾ, ಓದಿನ ಜೊತೆಗೆ ಕ್ರೀಡೆಯಲ್ಲಿ ಭಾಗವಹಿಸಿ,ಕ್ರೀಡೆಯಲ್ಲಿ ತಮ್ಮ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯವನ್ನು ಪರೀಕ್ಷಿಸಿಕೊಳ್ಳಬಹುದಾಗಿದೆ ಎಂದರು.
ಕ್ರೀಡಾಪಟುಗಳಲ್ಲಿ ಅತ್ಯಂತ ಸಾಮರಸ್ಯವಿರುತ್ತದೆ. ಇದು ಕ್ರೀಡಾ ಕ್ಷೇತ್ರದ ಗುಟ್ಟಾಗಿದೆ ಎಂದ ಅವರು, ಕ್ರೀಡೆ ತಮ್ಮ ಮಾನಸಿಕ ಬುದ್ದಿ ಮಟ್ಟವನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗಿದೆ ಹಾಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಯೂ ಕೂಡ ಶೈಕ್ಷಣಿಕ ಚಟುವಟಿಕೆಯ ಜೊತೆಗೆ ಕ್ರೀಡಾ ಚಟುವಟಿಕೆಗಳಲ್ಲೂ ಕೂಡ ಕಡ್ಡಾಯವಾಗಿ ಪಾಲ್ಗೊಳ್ಳಬೇಕು.
ಅಂತರಾಷ್ಟ್ರೀಯ ಕ್ರೀಡಾಪಟುಗಳಾದ ಪೀಲೆ. ಮೆರ್ಡೂನಾ ಮುಂತಾದ ವ್ಯಕ್ತಿಗಳ ದಂತಕಥೆಗಳನ್ನು ನೆನಪಿಸಿ ವಿದ್ಯಾರ್ಥಿಗಳು ಸತತ ಪ್ರಯತ್ನ ಪಟ್ಟರೆ ನೀವು ಸಹ ಒಳ್ಳೆಯ ಫುಟ್ಬಾಲ್ ಕ್ರೀಡಾಪಟುಗಳಾಗಬಹುದೆಂದು ಸತತವಾಗಿ ಅಭ್ಯಾಸದಿಂದ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಲು ಸಾಧ್ಯ ವಾಗುತ್ತದೆ ಎಂದರು.
ಸೆಕ್ರೆಡ್ ಹಾರ್ಟ್ ಕಾರ್ಯದರ್ಶಿಗಳಾದ ಫಾದರ್ ರೋಷನ್ ಪಿಂಟೋ ಮಾತನಾಡುತ್ತಾ, ಇಂದಿನ ದಿನಮಾನಗಳಲ್ಲಿ ವಿದ್ಯಾರ್ಥಿಗಳು ಮೊಬೈಲ್,ಟಿವಿಗಳ ಹಾವಳಿಯಿಂದ ಕ್ರೀಡೆಗೆ ಎಲ್ಲೋ ಒಂದು ರೀತಿ ಪ್ರಾಮುಖ್ಯತೆ ಕಡಿಮೆಯಾಗುತ್ತಾ ಇದೆ ಎಂಬುದು ನನ್ನ ಭಾವನೆ. ಓದಿಗೆ ಕೊಡುವಷ್ಟು ಪ್ರಾಮುಖ್ಯತೆಯನ್ನು, ಪಠ್ಯೇತರ ಚಟುವಟಿಕೆಗಳಿಗೂ ಸಮಾನ ಪ್ರಾಮುಖ್ಯತೆಯನ್ನು ಕೊಡಬೇಕು ಎಂದರು.
ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಶಾರೀರಿಕ ಹಾಗೂ ದೈಹಿಕವಾಗಿ ಸದೃಢರಾಗಲು ಸಾಧ್ಯವಾಗುತ್ತದೆ. ಯಾಕೆಂದರೆ ಒಟ್ಟಾರೆ ದೈಹಿಕ ಸಾಮರ್ಥ್ಯವನ್ನು ಕಾಣಬಹುದು.ಕ್ರೀಡೆಯಲ್ಲಿ ನಾಯಕತ್ವದ ಗುಣ ಬೆಳೆಸುತ್ತದೆ.ಸೋಲು ಗೆಲುವನ್ನು ಹೇಗೆ ಒಂದೇ ಸಮನಾಗಿ ತೆಗೆದುಕೊಳ್ಳಬಹುದು ಎಂಬುದನ್ನು ಕ್ರೀಡೆಯಲ್ಲಿ ಕಾಣಬಹುದು.
Department of School Education ಅಂಕಗಳು ಒಂದು ಸಲ ಕಡಿಮೆ ಆಗುತ್ತದೆ, ಹೆಚ್ಚು ಆಗುತ್ತದೆ, ಇಂತಹ ಸಂದರ್ಭದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳು ಖಿನ್ನತೆಗೆ ಒಳಗಾಗುತ್ತಾರೆ. ಆದರೆ ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಇಂತಹ ನೂನ್ಯತೆಗಳಿಂದ ದೂರವಾಗಬಹುದು, ಹಾಗಾಗಿ ಪ್ರತಿದಿನ ವಿದ್ಯಾರ್ಥಿಗಳು ಅರ್ಧ ಗಂಟೆ ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಉತ್ತಮ ಆರೋಗ್ಯ, ಧೈರ್ಯ ವಂತರಾಗಲು ಕಾರಣವಾಗುತ್ತದೆ ಎಂದು ಕ್ರೀಡಾಪಟುಗಳಿಗೆ ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಸೆಕ್ರೆಡ್ ಹಾರ್ಟ್ ವ್ಯವಸ್ಥಾಪಕರಾದ ಫಾದರ್ ಸ್ಕ್ಯಾನಿ ಡಿಸೋಜಾ, ಕ್ಯಾಂಪಸ್ ಡೈರೆಕ್ಟರ್ ಫಾದರ್ ಪ್ರಾನ್ಸಿಸ್ ನರೋನ್ಹಾ,
ಬಸವೇಶ್ವರ ಪಟ್ಟಣ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಬಳ್ಳೇಕೆರೆ ಸಂತೋಷ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಮಂಜುನಾಥ ಎಸ್. ಆರ್., ವಾಯು ಮಾಲಿನ್ಯ ವಿಭಾಗದ ಅಧಿಕಾರಿ, ಶಾಲೆಯ ಹಳೆಯ ವಿದ್ಯಾರ್ಥಿ ಹರ್ಷ, ಕೆಪಿಟಿಸಿಎಲ್ ನ ಮೋಹನ್ ಕುಮಾರ್ ಹಾಗೂ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎಂ ಪ್ರಕಾಶ್. ನಿವೃತ್ತ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ಶ್ರೀ ನಿರಂಜನ್ ಮೂರ್ತಿ ಇನ್ನೂ ಮುಂತಾದವರು ಉಪಸ್ಥಿತರಿದ್ದರು.
Department of School Education ಕ್ರೀಡಾಪಟುಗಳು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿದಾಗ ಮಾತ್ರ ಆರೋಗ್ಯವಂತರಾಗಿರಲು ಸಾಧ್ಯ: ಸಿ. ಎಸ್. ಷಡಾಕ್ಷರಿ
Date:
